ನಿಮ್ಮ ಮತ ಮೋದಿಗಲ್ಲ , ಶಾಗೆ: ಅರವಿಂದ ಕೇಜ್ರಿವಾಲ್‌ ಬಾಂಬ್‌

ಸೆಪ್ಟಂಬರ್‌ಗೆ ಮೋದಿಗೆ 75; ಅವರ ನಿವೃತ್ತಿ ಬಳಿಕ ಎನ್‌ಡಿಎ ಪ್ರಧಾನಿ ಅಭ್ಯರ್ಥಿ ಯಾರು: ಅರವಿಂದ ಕೇಜ್ರಿವಾಲ್‌ ಪ್ರಶ್ನೆ

Team Udayavani, May 12, 2024, 6:15 AM IST

ನಿಮ್ಮ ಮತ ಮೋದಿಗಲ್ಲ , ಶಾಗೆ: ಅರವಿಂದ ಕೇಜ್ರಿವಾಲ್‌ ಬಾಂಬ್‌

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ಗುಡುಗಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಕೇಜ್ರಿವಾಲ್‌, “ನೀವು ಈ ಬಾರಿ ಹಾಕುವ ಮತವು ಮೋದಿಗಲ್ಲ, ಅಮಿತ್‌ ಶಾಗೆ’ ಎಂದು ಹೇಳುವ ಮೂಲಕ ಹೊಸ ಬಾಂಬ್‌ ಸಿಡಿಸಿದ್ದಾರೆ.

ಮಧ್ಯಾಂತರ ಜಾಮೀನು ಪಡೆದು ಹೊರಬಂದ ಮಾರನೇ ದಿನವೇ, ಶನಿವಾರ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ ಕೇಜ್ರಿವಾಲ್‌, “ಬಿಜೆಪಿಯವರು ಪದೇಪದೆ ಐಎನ್‌ಡಿಐಎ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಕೇಳುತ್ತಿರುತ್ತಾರೆ. ಆದರೆ ಇಂದು ನಾನು ಮೋದಿ ಬಳಿಕ ಬಿಜೆಪಿಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂದು ಕೇಳಲು ಇಚ್ಛಿಸುತ್ತೇನೆ. ಮೋದಿ ಅವರು ಇದೇ ಸೆಪ್ಟಂಬರ್‌ನಲ್ಲಿ 75ನೇ ವರ್ಷಕ್ಕೆ ಕಾಲಿಡಲಿದ್ದಾರೆ.

75 ವರ್ಷ ವಯಸ್ಸಾದವರು ರಾಜಕೀಯದಿಂದ ನಿವೃತ್ತಿಯಾಗಬೇಕು ಎಂಬ ನಿಯಮವನ್ನು 2014ರಲ್ಲಿ ಮೋದಿಯವರೇ ತಂದಿದ್ದಾರೆ. ಈಗಾಗಲೇ ಈ ನಿಯಮದಲ್ಲಿ ಎಲ್‌.ಕೆ. ಆಡ್ವಾಣಿ, ಮುರಳಿ ಮನೋಹರ ಜೋಷಿ, ಸುಮಿತ್ರಾ ಮಹಾಜನ್‌ಅವರಂಥ ಅನೇಕ ನಾಯಕರಿಗೆ ನಿವೃತ್ತಿ ನೀಡಿ ಕಳುಹಿಸಲಾಗಿದೆ ಎಂದಿದ್ದಾರೆ.ಮೋದಿ ಅವರೇ ಮಾಡಿರುವ ನಿಯಮದಂತೆ ಮುಂದಿನ ವರ್ಷ ಅವರು ನಿವೃತ್ತರಾಗಲಿದ್ದಾರೆ. ಬಳಿಕ ಯಾರು ಪ್ರಧಾನಿ ಆಗಲಿದ್ದಾರೆ? ಹೀಗಾಗಿ ಅಮಿತ್‌ ಶಾ ಅವರನ್ನು ಪ್ರಧಾನಿ ಸ್ಥಾನಕ್ಕೆ ಏರಿಸಲೆಂದು ಮೋದಿ ನಿಮ್ಮ ಮತಗಳನ್ನು ಯಾಚಿಸುತ್ತಿದ್ದಾರೆ. ಆದರೆ, “ಮೋದಿ ಗ್ಯಾರಂಟಿ’ಗಳನ್ನು ಅಮಿತ್‌ ಶಾ ಪೂರ್ಣಗೊಳಿಸಬಲ್ಲರೇ’ ಎಂದು ಕೇಜ್ರಿವಾಲ್‌ ಪ್ರಶ್ನಿಸಿದರು.

“ಒಂದು ದೇಶ, ಒಂದು ನಾಯಕ’ ಎಂಬ ಧ್ಯೇಯದೊಂದಿಗೆ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ. ನಮ್ಮ ಪಕ್ಷವನ್ನು ಮುಗಿಸಲು ಸಂಚು ರೂಪಿಸಿದೆ. ಭವಿಷ್ಯದಲ್ಲಿ ವಿವಿಧ ವಿಪಕ್ಷಗಳ ಎಲ್ಲ ನಾಯಕರನ್ನೂ ಜೈಲಿಗಟ್ಟುವ ಯೋಜನೆ ಅವರದ್ದು ಎಂದೂ ಕೇಜ್ರಿ ಆರೋಪಿಸಿದ್ದಾರೆ.

ಕೇಜ್ರಿವಾಲ್‌ ಆ್ಯಂಡ್‌ ಕಂಪೆನಿ ಮತ್ತು ಐಎನ್‌ಡಿಐಎ ಒಕ್ಕೂಟಕ್ಕೆ ನಾನು ನೀಡುತ್ತಿರುವ ಸ್ಪಷ್ಟನೆಯಿದು- ಬಿಜೆಪಿಯ ಸಂವಿಧಾನದಲ್ಲಿ 75 ವರ್ಷಕ್ಕೆ ನಿವೃತ್ತಿ ಎಂಬ ನಿಯಮ ವೇನೂ ಇಲ್ಲ. 2029ರ ವರೆಗೂ ಮೋದಿಯವರೇ ದೇಶದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಬಿಜೆಪಿಯಲ್ಲಿ ಈ ಬಗ್ಗೆ ಯಾವುದೇ ಗೊಂದಲ ಇಲ್ಲ.
-ಅಮಿತ್‌ ಶಾ,
ಕೇಂದ್ರ ಗೃಹ ಸಚಿವ

ಮತ್ತೆ ಮೋದಿ ಅಧಿಕಾರಕ್ಕೇರಿದರೆ ಎರಡೇ ತಿಂಗಳಲ್ಲಿ ಉತ್ತರಪ್ರದೇಶ ಸಿಎಂ ಸ್ಥಾನದಿಂದ ಯೋಗಿ ಆದಿತ್ಯನಾಥ್‌ ಅವರನ್ನು ಕೆಳಕ್ಕಿಳಿಸಲಿದ್ದಾರೆ. ಆಡ್ವಾಣಿ, ಜೋಶಿ, ಚೌಹಾಣ್‌, ರಾಜೇ, ಖಟ್ಟರ್‌ ಅಧಿಕಾರ ಅಂತ್ಯವಾದಂತೆ ಯೋಗಿ ರಾಜಕೀಯ ಬದುಕು ಅಲ್ಲಿಗೆ ಕೊನೆಯಾಗಲಿದೆ. ಇದಕ್ಕಾಗಿಯೇ ಮೋದಿ “ಒನ್‌ ನೇಶನ್‌, ಒನ್‌ ಲೀಡರ್‌’ ಎಂಬ ಕಾನೂನು ಜಾರಿ ಮಾಡಲಿದ್ದಾರೆ.
-ಕೇಜ್ರಿವಾಲ್‌,
ದಿಲ್ಲಿ ಮುಖ್ಯಮಂತ್ರಿ

ಟಾಪ್ ನ್ಯೂಸ್

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.