PM Modi ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜೋಹಾನ್ಸ್‌ಬರ್ಗ್‌ನಲ್ಲಿ ಸಭೆ?
Team Udayavani, Aug 21, 2023, 8:13 PM IST
ಹೊಸದಿಲ್ಲಿ: ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದ್ವಿಪಕ್ಷೀಯ ಸಭೆಗಳನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಸೋಮವಾರ ಹೇಳಿದ್ದಾರೆ. ಆದರೆ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವಿನ ಭೇಟಿಯ ಸಾಧ್ಯತೆಯ ಬಗ್ಗೆ ನೇರ ಉತ್ತರವನ್ನು ನೀಡಲಿಲ್ಲ.
ಕೋವಿಡ್ ಕಾಲದ ನಂತರ ಬ್ರಿಕ್ಸ್ (ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ ಆಫ್ರಿಕಾ) ದ ಮೊದಲ ವೈಯಕ್ತಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೂರು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ತೆರಳುತ್ತಿದ್ದಾರೆ.
ಶೃಂಗಸಭೆಯ ಹಿನ್ನೆಲೆಯಲ್ಲಿ ಮೋದಿ ಮತ್ತು ಕ್ಸಿ ಮಾತುಕತೆ ನಡೆಸುತ್ತಾರೆಯೇ ಎಂದು ಮಾಧ್ಯಮಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ, ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ, ಪ್ರಧಾನಿಯವರ ದ್ವಿಪಕ್ಷೀಯ ಸಭೆಗಳ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದಷ್ಟೇ ಹೇಳಿದರು.
ದ್ವಿಪಕ್ಷೀಯ ಸಭೆ ನಡೆದರೆ, ಮೇ 2020 ರಲ್ಲಿ ಪೂರ್ವ ಗಡಿ ಬಿಕ್ಕಟ್ಟು ಪ್ರಾರಂಭವಾದ ನಂತರ ಇದು ಅವರ ಮೊದಲನೆಯ ಸಭೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.