ತ್ರಿವಳಿ ತಲಾಕ್ ಅಪರಾಧೀಕರಣ ಮಸೂದೆ: ಮೋದಿ ಸಂಪುಟ ಅನುಮೋದನೆ
Team Udayavani, Dec 15, 2017, 3:59 PM IST
ಹೊಸದಿಲ್ಲಿ : ತ್ರಿವಳಿ ತಲಾಕನ್ನು ಅಪರಾಧೀಕರಿಸುವ, ತ್ರಿವಳಿ ತಲಾಕ್ ಮಸೂದೆ ಎಂದೆ ತಿಳಿಯಲ್ಪಟ್ಟಿರುವ “ಮುಸ್ಲಿಂ ಮಹಿಳೆಯರ (ವೈವಾಹಿಕ ಹಕ್ಕುಗಳ ರಕ್ಷಣೆ) ಮಸೂದೆಗೆ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಇಂದು ಶುಕ್ರವಾರ ಅನುಮೋದನೆ ನೀಡಿದೆ.
ಇಂದು ಆರಂಭಗೊಂಡಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಕೈಗೆತ್ತಿಕೊಳ್ಳಲಾಗುವುದು.
ತ್ರಿವಳಿ ತಲಾಕ್ ಎನ್ನುವುದು ಮುಸ್ಲಿಮ್ ಪುರುಷರು ತಮ್ಮ ಪತ್ನಿಗೆ ತತ್‌ಕ್ಷಣ ನೀಡುವ ವಿವಾಹ ವಿಚ್ಛೇದನವಾಗಿದ್ದು ಆ ಪ್ರಕಾರ ಅವರು ಮೂರು ಬಾರಿ ತಲಾಕ್ ಪದವನ್ನು ಉಚ್ಚರಿಸುವುದು ಕ್ರಮವಾಗಿದೆ.
ಕಳೆದ ಆಗಸ್ಟ್‌ನಲ್ಲಿ ನೀಡಿದ ಮಹತ್ತರ ಮೈಲುಗಲ್ಲಿನ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್, ತ್ರಿವಳಿ ತಲಾಕ್ ಅಸಾಂವಿಧಾನಿಕ ಎಂದು ಘೋಷಿಸಿತ್ತು.
ಇದೀಗ ಮೋದಿ ಸಚಿವ ಸಂಪುಟ ಅನುಮೋದಿಸಿರುವ ತ್ರಿವಳಿ ತಲಾಕ್ ಮಸೂದೆಯು ಈ ಬಗೆಯ ತಲಾಕ್ ಪ್ರಕರಣಗಳಲ್ಲಿ ಮುಸ್ಲಿಂ ಮಹಿಳೆಯರಿಗೆ ಜೀವನಾಂಶ ಕೋರುವ ಹಕ್ಕುನ್ನು ದಯಪಾಲಿಸುತ್ತದೆ.
ಮಾತ್ರವಲ್ಲದೆ ತ್ರಿವಳಿ ತಲಾಕನ್ನು ಜಾಮೀನು ರಹಿತ ಸಂಜ್ಞಾಪರಾಧವೆಂದು ಈ ಮಸೂದೆಯು ಪರಿಗಣಿಸುತ್ತದೆ ಮತ್ತು ತ್ರಿವಳಿ ತಲಾಕ್ ನೀಡುವ ಅಪರಾಧ ಎಸಗುವ ವ್ಯಕ್ತಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುತ್ತದೆ.
“ತ್ರಿವಳಿ ತಲಾಕ್ ಕಾಯಿದೆಯನ್ನು ಜಾರಿಗೆ ತರಬಯಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ಮಹಿಳೆಯರ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ; ಆದರೆ ಅದೇ ವೇಳೆ ಹಿಂದೂ ಸಹೋದರಿಯರನ್ನು ಕಡೆಗಣಿಸುತ್ತಾರೆ’ಎಂದು ಎಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.