ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ; ಏರೋ ಶೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ
Team Udayavani, Feb 13, 2023, 9:58 AM IST
ಬೆಂಗಳೂರು: ನಗರದ ಆಕಾಶದಲ್ಲಿ ಲೋಹದ ಹಕ್ಕಿಗಳ ಕಲರವ ಆರಂಭವಾಗಿದೆ. ಏಷ್ಯಾದ ಅತೀ ದೊಡ್ಡ ವೈಮಾನಿಕ ಪ್ರದರ್ಶನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ “ಏರೋ ಇಂಡಿಯಾ ಶೋ’ದ 14ನೇ ಆವೃತ್ತಿ ಸೋಮವಾರ ಉದ್ಘಾಟನೆಗೊಂಡಿದೆ.
ಯಲಹಂಕದ ಏರ್ ಬೇಸ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಳಗ್ಗೆ 9.30ಕ್ಕೆ ಏರೋಶೋ ಉದ್ಘಾಟಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದಾರೆ.
ಏರ್ ಸ್ಟಾಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರು ಏರೋ ಇಂಡಿಯಾ 2023 ರ ಉದ್ಘಾಟನಾ ಸಮಾರಂಭದಲ್ಲಿ ಫ್ಲೈಪಾಸ್ಟ್ ಸಮಯದಲ್ಲಿ ಗುರುಕುಲ ರಚನೆಯನ್ನು ಮುನ್ನಡೆಸಿದರು.
#WATCH | Chief of the Air Staff Air Chief Marshal VR Chaudhari leads the Gurukul formation during the flypast at the inaugural ceremony of #AeroIndia2023 in Bengaluru, Karnataka. pic.twitter.com/kenaR0er69
— ANI (@ANI) February 13, 2023
ಆತ್ಮನಿರ್ಭರ ವ್ಯಾಖ್ಯೆಯಲ್ಲಿ ನಡೆಯಲಿರುವ ಏರೋ ಇಂಡಿಯಾ ಶೋದಲ್ಲಿ ದೇಶದ ವೈಮಾನಿಕ ಕ್ಷೇತ್ರದಲ್ಲಿ ಅವಕಾಶಗಳ ರನ್‌ವೇ ತೆರೆದುಕೊಳ್ಳಲಿದೆ. “ದಿ ರನ್‌ವೇ ಟು ಎ ಬಿಲಿಯನ್ ಆಪರ್ಚುನಿಟೀಸ್” ಎಂಬುದು ಏರೋ ಇಂಡಿಯಾ 2023 ರ ವಿಷಯವಾಗಿದೆ.
ವೈಮಾನಿಕ ಪ್ರದರ್ಶನ ಮಾತ್ರವಲ್ಲದೆ ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ (LCA)-ತೇಜಸ್, ಎಚ್ ಟಿಟಿ-40, ಡೋರ್ನಿಯರ್ ಲೈಟ್ ಯುಟಿಲಿಟಿ ಹೆಲಿಕಾಪ್ಟರ್ (LUH), ಲೈಟ್ ಕಾಂಬ್ಯಾಟ್ ಹೆಲಿಕಾಪ್ಟರ್ (LCH) ಮತ್ತು ಅಡ್ವಾನ್ಸ್‌ಡ್ ಲೈಟ್ ಹೆಲಿಕಾಪ್ಟರ್ (ALH) ನಂತಹ ಸ್ಥಳೀಯ ಏರ್ ಪ್ಲಾಟ್ ಫಾರ್ಮ್ ಗಳ ರಫ್ತುಗಳನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
Karnataka | Prime Minister Narendra Modi at the 14th edition of #AeroIndia2023 at Air Force Station, Yelahanka in Bengaluru. pic.twitter.com/sloe3vrAhZ
— ANI (@ANI) February 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.