ಬರ್ತ್ ಡೇಗೆ ನೀವೂ ಶುಭ ಹಾರೈಸಿ…ಪ್ರಧಾನಿ ಮೋದಿ@69; ಸರ್ದಾರ್ ಸರೋವರ ಡ್ಯಾಂಗೆ ಭೇಟಿ
Team Udayavani, Sep 17, 2019, 10:22 AM IST
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ 69ನೇ ವರ್ಷಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರು ಗುಜರಾತ್ ನ ಕೇವಡಿಯಾ ಜಿಲ್ಲೆಯಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟು ಪ್ರದೇಶಕ್ಕೆ ನೀಡಿದರು.
ಈ ಸಂದರ್ಭದಲ್ಲಿ 69ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ಮೋದಿ ಅವರು ಬಣ್ಣ, ಬಣ್ಣದ ಚಿಟ್ಟೆಗಳನ್ನು ಹಾರಿಸಿ ಬಿಡುವ ಮೂಲಕ ಸಂಭ್ರಮಿಸಿದರು. ನಂತರ ಸರ್ದಾರ್ ಸರೋವರ ಡ್ಯಾಂ ಅನ್ನು ವೀಕ್ಷಿಸಿದರು.
ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ನರ್ಮದಾ ಆರತಿ ನೆರವೇರಲಿದೆ. ಕಳೆದ ವರ್ಷ ನರೇಂದ್ರ ಮೋದಿ ಅವರು 68ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿನ ಶಾಲಾ ಮಕ್ಕಳ ಜತೆ ಆಚರಿಸಿಕೊಂಡಿದ್ದರು. ಬಳಿಕ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.
Reached Kevadia a short while ago.
Have a look at the majestic ‘Statue of Unity’, India’s tribute to the great Sardar Patel. pic.twitter.com/B8ciNFr4p7
— Narendra Modi (@narendramodi) September 17, 2019
ಸರ್ದಾರ್ ಸರೋವರ ಅಣೆಕಟ್ಟಿಗೆ ಭೇಟಿ ನೀಡಿದ ನಂತರ ಪ್ರಧಾನಿ ಮೋದಿ ಅವರು ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ.
ಮಮತಾ ಬ್ಯಾನರ್ಜಿ, ಸೋನಿಯಾ ಗಾಂಧಿ ಸೇರಿ ಗಣ್ಯಾತೀಗಣ್ಯರ ಶುಭಾಶಯ:
ಪ್ರಧಾನಿ ನರೇಂದ್ರ ಮೋದಿ ಅವರು ಇಂದು 69ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷದ ವರಿಷ್ಠೆ, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ಬಿಹಾರ ಮಾಜಿ ಸಿಎಂ, ರಾಷ್ಟ್ರೀಯ ಜನತಾ ದಳದ ಮುಖಂಡ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.
ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಸೇರಿದಂತೆ ಬಿಜೆಪಿ, ಕಾಂಗ್ರೆಸ್ ಹಲವು ಗಣ್ಯಾತೀಗಣ್ಯರು ಪ್ರಧಾನಿ ಮೋದಿ ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.