PM Modi US Visit; ಅಮೆರಿಕಕ್ಕೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ
Team Udayavani, Jun 20, 2023, 9:36 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಮತ್ತು ಈಜಿಪ್ಟ್ ಎರಡು ರಾಷ್ಟ್ರಗಳ ಪ್ರವಾಸಕ್ಕೆ ತೆರಳಿದ್ದಾರೆ.
ಅಮೆರಿಕ ಪ್ರವಾಸವು ಜೂ. 21ರಂದು ಪ್ರಾರಂಭವಾಗಿ ಜೂ. 24ಕ್ಕೆ ಕೊನೆಗೊಳ್ಳಲಿದೆ, ಅಲ್ಲಿಂದ ಈಜಿಪ್ಟ್ಗೆ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಮೆರಿಕಕ್ಕೆ ತೆರಳುವ ಮುನ್ನ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನ್ಯೂಯಾರ್ಕ್ ಸಿಟಿ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿಯವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಹ್ವಾನ ನೀಡಿದ್ದರು. ವಿಶ್ವಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Leaving for USA, where I will attend programmes in New York City and Washington DC. These programmes include Yoga Day celebrations at the @UN HQ, talks with @POTUS @JoeBiden, address to the Joint Session of the US Congress and more. https://t.co/gRlFeZKNXR
— Narendra Modi (@narendramodi) June 20, 2023
ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿ ಮಾಡಿ ಉನ್ನತ ಮಟ್ಟದ ಮಾತುಕತೆ ನಡೆಸಲಿದ್ದಾರೆ. ವ್ಯಾಪಾರ ,ತಂತ್ರಜ್ಞಾನ , ವಾಣಿಜ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಬಲವರ್ಧನೆಯಾಗಲಿದೆ.
#WATCH | Prime Minister Narendra Modi leaves from Delhi for his first official State visit to the United States.
He will attend Yoga Day celebrations at the UN HQ in New York and hold talks with US President Joe Biden & address to the Joint Session of the US Congress in… pic.twitter.com/y6avSoPpkd
— ANI (@ANI) June 20, 2023
ಜೂ. 22ರಂದು ಯುಎಸ್ ಕಾಂಗ್ರೆಸ್ ನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.
ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜೂ. 24 ರಿಂದ 25ಕ್ಕೆ ಕೈರೋಗೆ ಪ್ರಯಾಣಿಸಲಿದ್ದಾರೆ.
ಜನವರಿಯಲ್ಲಿ ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಫತ್ತಾಹ್ ಎಲ್ – ಸಿಸಿ ತಮ್ಮ ದೇಶಕ್ಕೆ ಆಗಮಿಸುವಂತೆ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.