ರಾಜಕಾರಣಿಗಳಿಗೆ ಇಲ್ಲ ಮೊದಲ ಲಸಿಕೆ
Team Udayavani, Jan 12, 2021, 5:40 AM IST
ಹೊಸದಿಲ್ಲಿ: ನಮಗೆ ಮೊದಲು ಲಸಿಕೆ ಸಿಗಲಿ ಎಂದು ರಾಜಕಾರಣಿ ಗಳು ಆಶಿಸುವುದು ಬೇಡ. ಆರೋಗ್ಯ ಕಾರ್ಯಕರ್ತರು, ಕೋವಿಡ್ ಸೋಂಕಿನ ವಿರುದ್ಧ ಹೋರಾಟ ದಲ್ಲಿ ಮುಂಚೂಣಿಯಲ್ಲಿ ಇರುವರಿಗೆ ಮೊದಲು ಲಸಿಕೆ ನೀಡಬೇಕು.
– ಹೀಗೆಂದು ಪ್ರಧಾನಿ ಮೋದಿ ಸ್ಪಷ್ಟ ವಾಗಿ ಹೇಳಿದ್ದಾರೆ. ಜ. 16ರಂದು ಲಸಿಕೆ ವಿತರಣೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳ ಸಿಎಂಗಳ ಜತೆಗೆ ಸೋಮವಾರ ನಡೆ ಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಅವರು ಮಾತ ನಾಡಿ ದರು. ಹರಿ ಯಾಣದಲ್ಲಿ ಆದ್ಯತೆಯ ಪಟ್ಟಿಯಲ್ಲಿ ಶಾಸಕರು, ಸಂಸದರ ಹೆಸರುಗಳು ಇರುವ ಹಿನ್ನೆಲೆಯಲ್ಲಿ ಪ್ರಧಾನಿ ಈ ಎಚ್ಚರಿಕೆ ನೀಡಿದ್ದಾರೆ.
50 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವರು, ಮಧುಮೇಹ, ಅಧಿಕ ರಕ್ತದ ಒತ್ತಡ ಮತ್ತಿತರ ಆರೋಗ್ಯ ಸಮಸ್ಯೆಗಳಿಂದ ಬಳಲು ತ್ತಿರುವ 50 ವರ್ಷಕ್ಕಿಂತ ಕೆಳಗಿನ ವಯೋ ಮಾನದವರಿಗೂ ಲಸಿಕೆ ನೀಡುವುದನ್ನು ಆದ್ಯತೆಯಲ್ಲಿ ಪರಿಗಣಿಸಬೇಕು ಎಂದಿದ್ದಾರೆ.
ಮೊದಲ ಹಂತಕ್ಕೆ ಸರಕಾರಿ ನೆರವು :
ಮೊದಲ ಹಂತದಲ್ಲಿ 3 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಮತ್ತು ಕೊರೊನಾ ಸೇನಾನಿಗಳಿಗೆ ಲಸಿಕೆ ನೀಡ ಲಾಗು ತ್ತದೆ. ಅದರ ವೆಚ್ಚ ವನ್ನು ಕೇಂದ್ರ ಸರಕಾರ ಭರಿಸಲಿದೆ ಎಂದು ಮೋದಿ ಹೇಳಿದ್ದಾರೆ. ದೇಶದ ಲಸಿಕೆ ನೀಡಿಕೆ ಕಾರ್ಯಕ್ರಮ ಜಗತ್ತಿನಲ್ಲಿಯೇ ಅತ್ಯಂತ ದೊಡ್ಡದು ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಕಡಿಮೆ ವೆಚ್ಚ :
ದೇಶದಲ್ಲಿಯೇ ಸಿದ್ಧಗೊಂಡ 2 ಲಸಿಕೆಗಳು ಹೆಚ್ಚು ವೆಚ್ಚದಾಯಕ ಅಲ್ಲ. ಇದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ ಎಂದು ಪ್ರಧಾನಿ ಹೇಳಿದ್ದಾರೆ.
ವದಂತಿ ನಿಯಂತ್ರಿಸಿ :
ಲಸಿಕೆ ಬಗ್ಗೆ ಭೀತಿ ಹುಟ್ಟಿಸುವ ವದಂತಿಗಳನ್ನು ನಿಯಂತ್ರಿಸಬೇಕು. ಧಾರ್ಮಿಕ ಮತ್ತು ಸಾಮಾಜಿಕ ಗುಂಪು ಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮೂಲಕ ಸಾರ್ವಜನಿಕರಿಗೆ ಮನವರಿಕೆ ಮಾಡುವ ಕ್ರಮಗಳು ನಡೆಯಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ
ಲಸಿಕೆ ಸುರಕ್ಷಿತವಾಗಿಲ್ಲ ಎಂಬ ವರದಿಗಳೇ ಆಧಾರ ರಹಿತ. ಜ. 16ರಿಂದ ಲಸಿಕೆ ನೀಡಿಕೆ ಆರಂಭ ವಾಗಲಿದೆ. ಇತರ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಪರಿಸ್ಥಿತಿ ಉತ್ತಮವಾಗಿಯೇ ಇದೆ ಎಂದಿದ್ದಾರೆ.
ಪ್ರತೀ ಡೋಸ್‌ಗೆ 210 ರೂ. :
ಪುಣೆಯ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಲಸಿಕೆಗೆ ಪ್ರತೀ ಡೋಸ್‌ಗೆ ಜಿಎಸ್‌ಟಿ ಸೇರಿ 210 ರೂ. ತಗಲಲಿದೆ. ಈ ಬಗ್ಗೆ ಕೇಂದ್ರ ಸರಕಾರ ಮತ್ತು ಸೀರಮ್ ಸಂಸ್ಥೆ ಒಪ್ಪಂದಕ್ಕೆ ಬಂದಿವೆ. ಕೇಂದ್ರವು ಸೀರಮ್‌ನಿಂದ 110 ಲಕ್ಷ ಡೋಸ್ ಲಸಿಕೆ ಖರೀದಿಗೆ ಸೂಚನೆ ಹೊರಡಿಸಿದೆ. ಹೈದರಾಬಾದ್‌ನ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಖರೀದಿ ಬಗ್ಗೆಯೂ ಕೇಂದ್ರ ಸರಕಾರ ಒಪ್ಪಂದ ಮಾಡಿಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.