ಕೃಷಿ ಸಮಸ್ಯೆ ನೀಗಲು ತಜ್ಞರ ಜತೆ ಪಿಎಂ ಚರ್ಚೆ
Team Udayavani, Feb 15, 2018, 10:35 AM IST
ಹೊಸದಿಲ್ಲಿ: 2022ರ ಹೊತ್ತಿಗೆ ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ, ತಮ್ಮ ಗುರಿ ಸಾಕಾರಕ್ಕಾಗಿ ದೇಶದ ಆರ್ಥಿಕ, ಶಿಕ್ಷಣ ತಜ್ಞರು, ಸಚಿವಾಲಯಗಳ ಅಧಿಕಾರಿಗಳುಳ್ಳ ಸಮಾವೇಶವನ್ನು ಕೇಂದ್ರ ಕೃಷಿ ಇಲಾಖೆ ಆಯೋಜಿಸಿದೆ.
ಇದೇ ತಿಂಗಳ 18, 19ರಂದು ದಿಲ್ಲಿಯ ಪುಸಾ ಅಗ್ರಿಕಲ್ಚರಲ್ ಕಾಂಪ್ಲೆಕ್ಸ್‌ನಲ್ಲಿ ಈ ಸಮ್ಮೇಳನ ನಡೆಯಲಿದ್ದು, ಇಲ್ಲಿ ರೈತರ ಕೃಷಿ ಸಂಬಂಧಿ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ರೈತರ ಆದಾಯ ದ್ವಿಗುಣಗೊಳಿಸುವ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚಿಂತನ- ಮಂಥನ ನಡೆಸಲಾಗುತ್ತದೆ. ಸಮ್ಮೇಳನಕ್ಕೆ ರೈತ ಸಮುದಾಯದ ಪ್ರತಿನಿಧಿಗಳನ್ನೂ ಆಹ್ವಾನಿಸಲಾಗಿದೆ. ರೈತರಿಂದ ಬರುವ ಬೇರುಮಟ್ಟದ ಸಮಸ್ಯೆಗಳ ಮೇಲೆಯೇ ಸಮ್ಮೇಳನದಲ್ಲಿ ಚರ್ಚಿಸುವ ಉದ್ದೇಶವನ್ನು ಹೊಂದಲಾಗಿದೆ. ಇಲ್ಲಿ ಕೈಗೊಂಡ ತೀರ್ಮಾನಗಳನ್ನು ಪರಿಶೀಲಿಸಿ, ಇವನ್ನು ಮಾದರಿ ಸೂತ್ರಗಳನ್ನಾಗಿಸಿ ಶೀಘ್ರವೇ ಅನುಷ್ಠಾನಗೊಳಿಸಲು ಕೇಂದ್ರ ಆಲೋಚಿಸಿದೆ.
ಇದಲ್ಲದೆ, ಬೆಂಬಲ ಬೆಲೆಯೂ ಸೇರಿ, ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ, ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಕೆ, ಉತ್ತಮ ದರ್ಜೆಯ ಬೀಜ, ಗರಿಷ್ಠ ಫಸಲು ಸಾಧಿಸಲು ಕ್ರಮ, ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಸುಧಾರಣೆ ಮುಂ ತಾದ ಉದ್ದೇಶಗಳನ್ನು ಸಾಧಿಸುವ ಬಗ್ಗೆ ತಜ್ಞರ, ರೈತರ ಸಲಹೆ ಪಡೆಯಲಾಗುತ್ತದೆ.
ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗದೇ ರೈತರು ತಮ್ಮ ಫಸಲನ್ನು ರಸ್ತೆಗೆ ಸುರಿದು ಪ್ರತಿಭಟಿಸುವಂಥ ಘಟನೆಗಳು ಆಗಾಗ ಜರುಗುತ್ತಲೇ ಇರುವುದನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿ, ಇಂಥ ಸಮಸ್ಯೆಗಳು ಬಾರದಂತೆ ಕ್ರಮ ಕೈಗೊಳ್ಳಲು ಉದ್ದೇಶಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.