ಎಸ್‌ಎಫ್ಐಒ ಮುಂದೆ ಪಿಎನ್‌ಬಿ ಮುಖ್ಯಸ್ಥ ಸುನೀಲ್ ಮೆಹ್ತಾ
Team Udayavani, Mar 8, 2018, 7:30 AM IST
ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ನಡೆದಿರುವ 12,600 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ನ ಸಿಇಒ ಸುನೀಲ್ ಮೆಹ್ತಾರನ್ನು ಐದು ತಾಸುಗಳ ವರೆಗೆ ಗಂಭೀರ ಆರ್ಥಿಕ ಅಪರಾಧಗಳ ತನಿಖಾ ವಿಭಾಗ (ಎಸ್‌ಎಫ್ಐಒ) ವಿಚಾರಣೆ ನಡೆಸಿದೆ. ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಚಾರಣೆ ನಡೆಸಲಾಗಿದೆ. ಅವ್ಯವಹಾರ ನಡೆದಿದ್ದು ಹೇಗೆ ಮತ್ತು ಯಾಕೆ ಬೆಳಕಿಗೆ ಬರಲಿಲ್ಲ ಎಂಬುದನ್ನು ತಿಳಿಯುವ ಉದ್ದೇಶದಿಂದ ವಿಚಾರಣೆ ನಡೆಸಲಾಗಿದೆ. ಈ ಮಧ್ಯೆ ಐಸಿಐಸಿಐ ಮತ್ತು ಆಕ್ಸಿಸ್ ಬ್ಯಾಂಕ್‌ನ ಅಧಿಕಾರಿಗಳು ವಿಚಾರಣೆಯ ವೇಳೆ, ನೀರವ್ ಸಂಸ್ಥೆಯಿಂದ ಸಾಲ ವಸೂಲಾತಿ ಮಾಡುವ ಯಾವುದೇ ಅವಕಾಶವಿಲ್ಲ ಎಂದಿದ್ದಾರೆ ಎಂಬುದು ತಿಳಿದುಬಂದಿದೆ.
ನೀರವ್ ವಿರುದ್ಧದ ಕೇಸ್ ಸಡಿಲ?: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 12600 ಕೋಟಿ ರೂ. ಮೋಸ ಮಾಡಿರುವ ನೀರವ್ ಮೋದಿ ವಿರುದ್ಧದ ಪ್ರಕರಣ ಅಷ್ಟೇನೂ ಗಟ್ಟಿಯಾಗಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ ಜಾರಿ ನಿರ್ದೇಶನಾಲಯಕ್ಕೆ ಈ ಸಂಬಂಧ ನೋಟಿಸನ್ನೂ ಕೋರ್ಟ್ ನೀಡಿದೆ. ನೀರವ್ ವಿರುದ್ಧದ ಪ್ರಕರಣವು ಕಲ್ಪನೆ ಆಧರಿತವಾಗಿದೆ ಎಂದೆನಿಸುತ್ತಿದೆ ಎಂದು ದೆಹಲಿ ಹೈಕೋರ್ಟ್ ಜಡ್ಜ್ ಹೇಳಿದ್ದಾರೆ.
ಸ್ವತ್ತು ವಾಪಸ್ ನೀಡಿ ಎಂದ ನೀರವ್: ಲಕ್ಷುರಿ ಕಾರುಗಳು ಹಾಗೂ ಆಮದು ಮಾಡಿದ ವಾಚ್‌ಗಳನ್ನು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿರುವುದಕ್ಕೆ ನೀರವ್ ಆಕ್ಷೇಪಿಸಿ ದ್ದಾರೆ. ಈ ಸ್ವತ್ತುಗಳನ್ನು ಕಾನೂನು ಬಾಹಿರವಾಗಿ ವಶಪಡಿಸಿ ಕೊಳ್ಳಲಾ ಗಿದ್ದು, ನನಗೆ ಪುನಃ ನೀಡಬೇಕು ಎಂದು ಅವರು ಕೋರಿದ್ದಾರೆ. ಜಪ್ತಿ ಮಾಡುವಾಗ ವಾರಂಟ್‌ನ ಪ್ರತಿಯನ್ನು ಅಧಿಕಾರಿಗಳಿಗೆ ನೀಡಿಲ್ಲ ಎಂದೂ ಅವರು ಆಕ್ಷೇಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.