ಉಗ್ರರ ಹಿಡಿತದಲ್ಲಿ ಪಿಒಕೆ

ಪಾಕ್‌ ಆಕ್ರಮಿತ ಕಾಶ್ಮೀರ ಕುರಿತು ಸೇನಾ ಮುಖ್ಯಸ್ಥ ಜ|ರಾವತ್‌

Team Udayavani, Oct 26, 2019, 5:39 AM IST

a-83

ಹೊಸದಿಲ್ಲಿ/ಶ್ರೀನಗರ: “ಪಾಕ್‌ ಆಕ್ರಮಿತ ಕಾಶ್ಮೀರ(ಪಿಒಕೆ)ವು ಉಗ್ರರ ನಿಯಂತ್ರಣದಲ್ಲಿದೆ. ಅಲ್ಲದೆ ಪಿಒಕೆ ಮತ್ತು ಗಿಲ್ಗಿಟ್‌-ಬಾಲ್ಟಿಸ್ಥಾನವನ್ನು ಪಾಕಿಸ್ಥಾನವು ಅಕ್ರಮವಾಗಿ ಅತಿಕ್ರಮಣ ಮಾಡಿಕೊಂಡಿದೆ’ ಎಂದು ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಆರೋಪಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರ ರದ್ದು ಮಾಡಿದ ಬಳಿಕ, ಪಿಒಕೆಯನ್ನು ವಶಪಡಿಸಿಕೊಳ್ಳುವತ್ತ ಸರಕಾರ ಗಮನ ನೆಟ್ಟಿದೆ ಎಂಬ ಮಾತುಗಳು ಕೇಳಿಬರುತ್ತಿರುವ ನಡುವೆಯೇ ಜ.ರಾವತ್‌ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದಿದೆ.

ಶುಕ್ರವಾರ ಹೊಸದಿಲ್ಲಿಯಲ್ಲಿ ನಡೆದ ಸೇನಾ ಕಮಾಂಡರ್‌ಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು, “ಪಾಕಿಸ್ಥಾನವು ಅಕ್ರಮವಾಗಿ ವಶಪಡಿಸಿಕೊಂಡಿರುವ ಭೂಪ್ರದೇಶವನ್ನು ವಾಸ್ತವದಲ್ಲಿ ಪಾಕಿಸ್ಥಾನದ ಸರಕಾರ ನಿಯಂತ್ರಿಸುತ್ತಿಲ್ಲ. ಬದಲಿಗೆ, ಆ ಪ್ರದೇಶದ ಸಂಪೂರ್ಣ ನಿಯಂತ್ರಣ ಭಯೋತ್ಪಾದಕರ ಕೈಯ್ಯಲಿದೆ’ ಎಂದಿದ್ದಾರೆ.

ಜತೆಗೆ, ನಾವು ಜಮ್ಮು ಮತ್ತು ಕಾಶ್ಮೀರ ಎಂದರೆ, ಪಿಒಕೆ ಮತ್ತು ಗಿಲ್ಗಿಟ್‌ ಬಾಲ್ಟಿಸ್ತಾನವನ್ನೂ ಒಳಗೊಂಡ ಪರಿಪೂರ್ಣ ಜಮ್ಮು-ಕಾಶ್ಮೀರ ರಾಜ್ಯ ಎಂದರ್ಥ. ಹೀಗಾಗಿ ಪಿಒಕೆ ಮತ್ತು ಗಿಲ್ಗಿಟ್‌ ಬಾಲ್ಟಿಸ್ತಾನವನ್ನು ನಮ್ಮ ಪಶ್ಚಿಮದ ನೆರೆರಾಷ್ಟ್ರವು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ ಎಂದೇ ನಾವು ಹೇಳುತ್ತೇವೆ ಎಂದ ಜ.ರಾವತ್‌, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕದಡಲು ಪಾಕ್‌ ಪ್ರಯತ್ನಿಸುತ್ತಲೇ ಇದೆ ಎಂದಿದ್ದಾರೆ.

ಮಾರ್ಗಸೂಚಿ ಕೇಳಿದ ಅಮೆರಿಕ: ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಮತ್ತು ಆರ್ಥಿಕ ಸಹಜತೆ ತರಲು ಕೈಗೊಳ್ಳುವ ಕ್ರಮಗಳ ಕುರಿತ ಮಾರ್ಗಸೂಚಿಯೊಂದನ್ನು ಸಲ್ಲಿಸುವಂತೆ ಭಾರತ ಸರಕಾರಕ್ಕೆ ಶುಕ್ರವಾರ ಅಮೆರಿಕ ಕೇಳಿದೆ. ಜತೆಗೆ, ಕಣಿವೆ ರಾಜ್ಯದಲ್ಲಿ ವಶದಲ್ಲಿರುವ ಎಲ್ಲ ರಾಜಕೀಯ ನಾಯಕರನ್ನೂ ಬಿಡುಗಡೆ ಮಾಡುವಂತೆ ಆಗ್ರಹಿಸಿದೆ. ಇದೇ ವೇಳೆ, ಪಾಕಿಸ್ಥಾನದ ವಿರುದ್ಧ ಹರಿಹಾಯ್ದಿರುವ ಅಮೆರಿಕ, ಭಯೋತ್ಪಾದಕರ ವಿರುದ್ಧ ಸುಸ್ಥಿರ ಮತ್ತು ಕಠಿಣವಾದ ಕ್ರಮವನ್ನು ಕೈಗೊಳ್ಳುವಂತೆ ಆದೇಶಿಸಿದೆ. ಈ ನಡುವೆ, ಕಾಶ್ಮೀರದ ಮಾನವ ಹಕ್ಕುಗಳ ಕುರಿತಾದ ವಿಚಾರಣೆಯು ಪಕ್ಷಪಾತದಿಂದ ಕೂಡಿತ್ತು ಎಂದು ಕಾಶ್ಮೀರಿ ಪಂಡಿತರ ಗುಂಪೊಂದು ಆರೋಪಿಸಿದೆ.

82 ದಿನ ಪೂರ್ಣ: ಕಣಿವೆ ರಾಜ್ಯದಲ್ಲಿ 370ನೇ ವಿಧಿ ರದ್ದುಗೊಳಿಸಿ ಶುಕ್ರವಾರ 82 ದಿನ ಪೂರ್ಣಗೊಂಡಿದೆ. ಪ್ರಮುಖ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆಗೆ ಇನ್ನೂ ಅವಕಾಶ ನೀಡದ ಕಾರಣ, ಶ್ರೀನಗರದಲ್ಲಿನ ಐತಿಹಾಸಿಕ ಜಾಮಿಯಾ ಮಸೀದಿಯು ಸತತ 12ನೇ ಶುಕ್ರವಾರವೂ ಬಾಗಿಲು ಮುಚ್ಚಿದ್ದು, ಸುತ್ತಲೂ ಭದ್ರತಾ ಪಡೆಗಳ ಬಿಗಿಭದ್ರತೆ ಮುಂದುವರಿದಿದೆ.

6 ಲಕ್ಷ ಮೆ.ಟ. ಹಣ್ಣು ಸಾಗಣೆ: ಈ ಮಧ್ಯೆ, ಕಳೆದ 3 ತಿಂಗಳ ಅವಧಿಯಲ್ಲಿ ಸುಮಾರು 6 ಲಕ್ಷ ಮೆಟ್ರಿಕ್‌ ಟನ್‌ ಹಣ್ಣುಗಳನ್ನು ಕಾಶ್ಮೀರದಿಂದ ಹೊರಕ್ಕೆ ಸಾಗಣೆ ಮಾಡಲಾಗಿದೆ ಎಂದು ಜಮ್ಮು-ಕಾಶ್ಮೀರ ಸರಕಾರದ ಅಧಿಕೃತ ವಕ್ತಾರರು ಮಾಹಿತಿ ನೀಡಿದ್ದಾರೆ. 11 ದಿನಗಳಲ್ಲಿ ಉಗ್ರರು ಕಾಶ್ಮೀರೇತರ ನಾಲ್ವರನ್ನು ಹತ್ಯೆಗೈದಿದ್ದು, ಈ ಪೈಕಿ ಮೂವರು ಹಣ್ಣು ಹಂಪಲು ಸಾಗಿಸುವ ಟ್ರಕ್‌ಗಳ ಚಾಲಕರಾಗಿದ್ದಾರೆ.

ಮತ್ತೆ ಮಧ್ಯಸ್ಥಿಕೆಯ ಮಾತು
ಕಾಶ್ಮೀರ ವಿವಾದಕ್ಕೆ ಸಂಬಂಧಿಸಿ ಮತ್ತೆ ಮಧ್ಯಸ್ಥಿಕೆ ವಿಚಾರ ಪ್ರಸ್ತಾಪವಾಗಿದೆ. ಭಾರತ ಮತ್ತು ಪಾಕ್‌ ಕೇಳಿಕೊಂಡರೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಮಧ್ಯಸ್ಥಿಕೆ ವಹಿಸಿಕೊಳ್ಳಲು ಸಿದ್ಧ ಎಂದು ಅಮೆರಿಕ ಶುಕ್ರವಾರ ಪುನರುಚ್ಚರಿಸಿದೆ. ಜತೆಗೆ ರಚನಾತ್ಮಕ ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥವಾಗಲಿ ಎಂದೂ ಹೇಳಿದೆ. ಇನ್ನೊಂದೆಡೆ ವಿಶ್ವಸಂಸ್ಥೆ ಮಹಾ ಕಾರ್ಯದರ್ಶಿ ಗುಟೆರಸ್‌ ಕೂಡ ಇದೇ ಧಾಟಿಯಲ್ಲಿ ಮಾತನಾಡಿದ್ದು, ಎರಡೂ ದೇಶಗಳು ಪರಸ್ಪರ ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳಬೇಕು ಎಂದಿದ್ದಾರೆ.

ಮತ ದಾಖಲೆಗೆ ಸಂತಸ
ಗುರುವಾರ ಜಮ್ಮು-ಕಾಶ್ಮೀರದಲ್ಲಿ ನಡೆದ ರಾಜ್ಯದ ಮೊತ್ತ ಮೊದಲ ಬ್ಲಾಕ್‌ ಡೆವಲಪ್‌ಮೆಂಟ್‌ ಕೌನ್ಸಿಲ್‌(ಬಿಡಿಸಿ) ಚುನಾವಣೆಯಲ್ಲಿ ಶೇ.98.3 ಮತದಾನ ದಾಖಲಾಗಿ ರುವುದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ವಿಶೇಷ ಸ್ಥಾನಮಾನ ರದ್ದತಿಯ ನಿರ್ಧಾರವೇ ದಾಖಲೆ ಮತದಾನಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಯ 22 ಸೇರಿದಂತೆ 27 ಅಭ್ಯರ್ಥಿಗಳು ಅವಿರೋಧವಾಗಿ ಚುನಾಯಿತರಾಗಿದ್ದಾರೆ.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.