ಏಕಕಾಲದ ಚುನಾವಣೆಗೆ ನೀತಿ ಆಯೋಗ ಬೆಂಬಲ

Team Udayavani, Aug 28, 2017, 7:10 AM IST

Election-02.jpg

ನವದೆಹಲಿ: ಚುನಾವಣೆ ವೆಚ್ಚ, ನಿರ್ವಹಣೆ ಸುಲಭವಾಗಿಸುವ ಉದ್ದೇಶದಿಂದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವುದರ ಬಗ್ಗೆ ದೇಶದ ಚಿಂತಕ ಚಾವಡಿ, ನೀತಿ ಆಯೋಗ ಬೆಂಬಲ ವ್ಯಕ್ತಪಡಿಸಿದೆ. 2024ರಿಂದ ಈ ಪದ್ಧತಿಯನ್ನು “ರಾಷ್ಟ್ರಿಯ ಹಿತಾಸಕ್ತಿ’ಗೆ ಅನುಗುಣವಾಗಿ ಜಾರಿಗೊಳಿಸುವುದಕ್ಕೆ ಬೆಂಬಲ ಸೂಚಿಸಿದೆ.

ದೇಶದಲ್ಲಿ ನಡೆವ ಎಲ್ಲಾ ಚುನಾವಣೆಗಳು, ಮುಕ್ತ ಪಾರದರ್ಶಕವಾಗಿ ಮತ್ತು ಏಕಕಾಲಕ್ಕೆ ನಡೆಯಬೇಕು. ಇದು ಕನಿಷ್ಠ ಪ್ರಚಾರದಿಂದ ಕೂಡಿದ್ದು, ಆಡಳಿತಕ್ಕೆ ಭಂಗ ತರದೇ ಇರಬೇಕು ಎಂದು ನೀತಿ ಆಯೋಗ ತನ್ನ “ಮೂರು ವರ್ಷದ ಕಾರ್ಯಕಾರಿ ಯೋಜನೆ 2017-18ರಿಂದ 2019-20’ರ ವರದಿಯಲ್ಲಿ ಹೇಳಿದೆ. 

2024ರಿಂದ  ಏಕಕಾಲಕ್ಕೆ ಚುನಾವಣೆಗಳನ್ನು ನಡೆಸುವುದರ ಬಗ್ಗೆ ನಾವು ಕೆಲಸ ಆರಂಭವಿಸುವ ನಿರೀಕ್ಷೆ ಇದೆ. ಹೀಗೆ ಮಾಡಲು ಕೆಲವು ವಿಧಾನಸಭೆಗಳ ಅವಧಿ ಮೊಟಕುಗೊಳ್ಳಬಹುದು ಅಥವಾ ವಿಸ್ತಾರವಾಗ ಬಹುದು. ಈ ಪದ್ಧತಿಯನ್ನು ರಾಷ್ಟ್ರೀಯ ಹಿತಾಸಕ್ತಿಗಾಗಿ ಜಾರಿಗೊಳಿಸಲು, ಸಂವಿಧಾನ ತಜ್ಞರು, ಚಿಂತಕರು, ಸರ್ಕಾರಿ ಅಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮಿತಿಯೊಂದನ್ನು ರಚಿಸಬೇಕಿದ್ದು, ಈ ಬಗ್ಗೆ ಗಹನವಾದ ಚರ್ಚೆ ನಡೆಸಬೇಕಿದೆ. ಜೊತೆಗೆ ಇದಕ್ಕೆ ಸಂವಿಧಾನ ತಿದ್ದು ಪಡಿಯ ಕರಡನ್ನೂ ರೂಪಿಸಬೇಕಿದ್ದು, ರೂಪುರೇಷೆ ಗಳನ್ನು ಸಿದ್ಧಪಡಿಸ ಬೇಕಿದೆ ಎಂದಿದೆ. ಇದರೊಂದಿಗೆ ಏಕಕಾಲಕ್ಕೆ ಚುನಾ ವಣೆ ನಡೆಸುವ ಶಿಫಾರಸಿನ ಬಗ್ಗೆ ಚುನಾವಣಾ ಆಯೋಗ, ದೃಷ್ಟಿ ಹರಿಸಬೇಕಿದ್ದು, ಮಾ.2018ರ ವೇಳೆಗೆ ಒಂದು ಸಮಯದ ಚೌಕಟ್ಟು ರೂಪಿಸಬೇಕಿದೆ ಎಂದೂ ಹೇಳಿದೆ.
 
ಪ್ರಧಾನಿ ನರೇಂದ್ರ ಮೋದಿ ಬಹು ದಿನಗಳಿಂದಲೇ ಈ ವಿಚಾರದ ಬಗ್ಗೆ ಹೇಳುತ್ತಲೇ ಬಂದಿದ್ದು, ವಿವಿಧ ವೇದಿಕೆಗಳಲ್ಲೂ ಪ್ರಸ್ತಾಪ ಮಾಡಿದ್ದಾರೆ.

ಟ್ರಾಫಿಕ್‌ ಕೇಸು ವಿಚಾರಣೆ ಪ್ರತ್ಯೇಕ ಕೋರ್ಟ್‌ : ಇನ್ನು, ಟ್ರಾಫಿಕ್‌ ಕೇಸುಗಳ ವಿಚಾರಣೆಗೆ ಪ್ರತ್ಯೇಕ ಕೋರ್ಟ್‌ ಸ್ಥಾಪಿಸುವಂತೆ ನೀತಿ ಆಯೋಗ ಶಿಫಾರಸು ಮಾಡಿದೆ. ಈ ಕೋರ್ಟ್‌ಗಳಲ್ಲಿ ನ್ಯಾಯಾಧೀಶರು ದಂಡ ಕಟ್ಟುವಂತೆ ಹೇಳುವವರೆಗೂ, ದಂಡ ಕಟ್ಟ ಬೇಕೆಂದಿಲ್ಲ. ಶಿಫಾರಸನ್ನು ಕೇಂದ್ರ ಕಾನೂನು ಸಚಿ ವಾಲಯಕ್ಕೆ ಸಲ್ಲಿಸಲಾಗಿದ್ದು, ಈ ವಿಶೇಷ ಕೋರ್ಟ್‌ ಗಳಿಗೆ ಕಾನೂನು ಪದವೀಧರರನ್ನು ನ್ಯಾಯದಾನಕ್ಕಾಗಿ ನೇಮಕ ಮಾಡಿಕೊಳ್ಳಬೇಕು ಎಂದಿದೆ. ಇದರಿಂದ ಕೆಳ ಹಂತದ ಕೋರ್ಟ್‌ಗಳು ಇತರ ಪ್ರಕರಣಗಳಲ್ಲಿ ನ್ಯಾಯದಾನ ಮಾಡುವುದು ಸುಲಭವಾಗುತ್ತದೆ. ಕೇಸುಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಈ ಹೊಸ ಐಡಿಯಾವೊಂದನ್ನು ನೀತಿ ಆಯೋಗ ನೀಡಿದೆ.

ಟಾಪ್ ನ್ಯೂಸ್

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.