ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Team Udayavani, Apr 25, 2024, 1:58 PM IST
ನವದೆಹಲಿ: ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಉಲ್ಲಂಘನೆ ದೂರುಗಳ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಚುನಾವಣಾ ಆಯೋಗ ಪ್ರತಿಕ್ರಿಯೆ ಕೇಳಿದೆ. ನೀತಿ ಸಂಹಿತೆ ಉಲ್ಲಂಘನೆ ದೂರುಗಳ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಗೆ ಆಯೋಗ ನೋಟಿಸ್ ಕಳುಹಿಸಿದೆ.
ಏಪ್ರಿಲ್ 29 ರಂದು ಬೆಳಿಗ್ಗೆ 11 ಗಂಟೆಯೊಳಗೆ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ಆಯೋಗವು ಎರಡೂ ಪಕ್ಷಗಳಿಗೆ ತಿಳಿಸಿದೆ. ಸಿಕ್ಕಿರುವ ಮಾಹಿತಿಗಳ ಪ್ರಕಾರ, ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯವರ ಭಾಷಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಈ ಸೂಚನೆ ನೀಡಿದೆ.
ಚುನಾವಣಾ ಪ್ರಚಾರದ ವೇಳೆ ನಡೆಸಿದ ಭಾಷಣಗಳಲ್ಲಿ ನೀತಿ ಸಂಹಿತೆ ಪಾಲನೆಯಾಗಿಲ್ಲ ಎಂದು ಆರೋಪಿಸಿ ಆಯೋಗದ ಮುಂದೆ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರ ದೂರು ನೀಡಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಭಾಷಣಗಳ ಮೂಲಕ ದ್ವೇಷವನ್ನು ಉಂಟುಮಾಡುವ ಹೇಳಿಕೆ ನೀಡಲಾಗಿದೆ ಎಂದು ರಾಹುಲ್ ಗಾಂಧಿ ಮತ್ತು ಪಿಎಂ ಮೋದಿ ವಿರುದ್ಧ ಆರೋಪಗಳನ್ನು ಎತ್ತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.