Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Team Udayavani, Nov 16, 2024, 6:03 PM IST
ಹೊಸದಿಲ್ಲಿ: ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರ ಚುನಾವಣ ಆಯೋಗಕ್ಕೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ, ಚುನಾವಣ ಸಮಿತಿಯು ಶನಿವಾರ(ನ16) ಎರಡೂ ಪಕ್ಷಗಳ ಅಧ್ಯಕ್ಷರಿಗೆ ತಮ್ಮ ನಾಯಕರ ವಿರುದ್ಧ ಹೊರಿಸಲಾದ ಆರೋಪಗಳ ಬಗ್ಗೆ ಪ್ರತಿಕ್ರಿಯೆ ಕೇಳಿದೆ.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತ್ಯೇಕ ಪತ್ರ ಬರೆದಿರುವ ಚುನಾವಣ ಆಯೋಗ, ಎರಡು ಪಕ್ಷಗಳ ನಡುವೆ ದೂರುಗಳನ್ನು ವಿನಿಮಯ ಮಾಡಿ ಪ್ರತಿಕ್ರಿಯೆ ನೀಡುವಂತೆ ಕೇಳಿದೆ.
ಚುನಾವಣ ಆಯೋಗವು ಸೋಮವಾರ (ನ18) ಮಧ್ಯಾಹ್ನ 1 ಗಂಟೆಯೊಳಗೆ ಎರಡೂ ಪಕ್ಷದ ಅಧ್ಯಕ್ಷರಿಂದ ಔಪಚಾರಿಕ ಪ್ರತಿಕ್ರಿಯೆಗಳನ್ನು ಕೇಳಿದೆ, ಆದರೆ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸಾರ್ವಜನಿಕ ಸೌಹಾರ್ದತೆ ಉಂಟಾಗದಂತೆ ತಾರಾ ಪ್ರಚಾರಕರು ಮತ್ತು ನಾಯಕರನ್ನು ಹಿಡಿತದಲ್ಲಿಟ್ಟುಕೊಳ್ಳಲು ಆಯೋಗದ ಹಿಂದಿನ ಸಲಹೆಯನ್ನು ನೆನಪಿಸಿದೆ.
ಜಾರ್ಖಂಡ್ ಮತ್ತು ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಾಗಿ ಎರಡೂ ಪಕ್ಷಗಳ ಪ್ರಮುಖ ನಾಯಕರು ಪ್ರಚಾರ ನಿರತರಾಗಿದ್ದು ಪರಸ್ಪರ ಟೀಕಾ ಪ್ರಹಾರಗಳನ್ನು ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.