Assembly Elections: ಛತ್ತೀಸ್‌ಗಢ, ಮಿಜೋರಾಂನಲ್ಲಿ ಮತದಾನ ಆರಂಭ, ಬಿಗಿ ಭದ್ರತೆ
Team Udayavani, Nov 7, 2023, 8:34 AM IST
ರಾಯ್ಪುರ/ಐಜ್ವಾಲ್: ಛತ್ತೀಸ್‌ಗಢ ಹಾಗೂ ಮಿಜೋರಾಂನಲ್ಲಿ ವಿಧಾನಸಭೆ ಚುನಾವಣೆಯ ಮುನ್ನುಡಿ ಎಂಬಂತೆ ಇಂದು ಮತದಾನ ಆರಂಭವಾಯಿತು.
ಭ್ರಷ್ಟಾಚಾರ, ಬೆಲೆಯೇರಿಕೆ, ಹಗರಣಗಳು, ರಾಜಕೀಯ ನಾಯಕರ ರಾಲಿಗಳು ಸೇರಿ ಹಲವು ವಾಗ್ಯುದ್ಧಗಳಿಗೆ ಸಾಕ್ಷಿಯಾಗಿದ್ದ ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ಮಂಗಳವಾರ ಬೆಳಿಗ್ಗೆ ಆರಂಭಗೊಂಡಿದೆ. ಇದರೊಂದಿಗೆ ಒಟ್ಟು 20 ಕ್ಷೇತ್ರಗಳ 223 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು ಬರೆಯಲಿದ್ದಾರೆ.
ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗಳಿಗೆ ಭೇಟಿ ನೀಡಿ ಮತ ಚಲಾವಣೆ ಮಾಡುತ್ತಿದ್ದಾರೆ.
ಅದೇ ರೀತಿ ಮಿಜೋರಾಂನ ಎಲ್ಲ 40 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಮತದಾರರು ಸರತಿ ಸಾಲಿನಲ್ಲಿ ನಿಂತು ಮತಗಳನ್ನು ಚಲಾಯಿಸುತ್ತಿದ್ದಾರೆ. ಮಿಜೋರಾಂನಲ್ಲಿ ಆಡಳಿತಾರೂಢ ಮಿಜೋ ನ್ಯಾಶನಲ್ ಫ್ರಂಟ್, ವಿಪಕ್ಷ ಜೊರಾಂ ಪೀಪಲ್ಸ್ ಫ್ರಂಟ್ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 18 ಮಹಿಳೆಯರು ಸೇರಿ 174 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಛತ್ತೀಸ್‌ಗಢದಲ್ಲಿ ಎರಡನೇ ಹಂತದ ಮತದಾನ ನವೆಂಬರ್ 17 ರಂದು ನಡೆಯಲಿದ್ದು, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಕ್ರಮವಾಗಿ ನವೆಂಬರ್ 25 ಮತ್ತು 30 ರಂದು ಒಂದೇ ಹಂತದ ಮತದಾನ ನಡೆಯಲಿದೆ. ಎಲ್ಲಾ ರಾಜ್ಯಗಳ ಮತ ಎಣಿಕೆ ಡಿಸೆಂಬರ್ 3 ರಂದು ನಡೆಯಲಿದೆ.
ಈ ವಿಧಾನಸಭಾ ಚುನಾವಣೆಗಳು ಕೇಂದ್ರದಲ್ಲಿ ಬಿಜೆಪಿ, ಹೊಸದಾಗಿ ರೂಪುಗೊಂಡ ವಿರೋಧ ಪಕ್ಷವಾದ ಇಂಡಿಯಾ ಬಣ ಮತ್ತು ಪ್ರಾದೇಶಿಕ ಪಕ್ಷಗಳಿಗೆ ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ ಮತ್ತು ಇದರ ಫಲಿತಾಂಶವು ಮುಂಬರುವ 2024 ರ ಲೋಕಸಭಾ ಚುನಾವಣೆಯ ಕಾರ್ಯತಂತ್ರಗಳ ಮೇಲೆ ಪ್ರಭಾವ ಬೀರುವುದು ಖಚಿತ.
ಇದನ್ನೂ ಓದಿ: D.B.Chandregowda: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಇನ್ನಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.