Poonch Attack: ಪೂಂಛ್ ದಾಳಿಯಲ್ಲಿ ಅಮೆರಿಕಾ ನಿರ್ಮಿತ M4 ಬಂದೂಕು ಬಳಕೆ.. ಚಿತ್ರ ಬಿಡುಗಡೆ
Team Udayavani, Dec 22, 2023, 2:59 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೂಂಛ್ ನಲ್ಲಿ ನಡೆದ ದಾಳಿಯಲ್ಲಿ ಉಗ್ರರು ಅಮೆರಿಕ ನಿರ್ಮಿತ ಎಂ4 ಬಂದೂಕು ಬಳಸಿರುವುದಾಗಿ ಭಾರತೀಯ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಯ ಸಹವರ್ತಿ ಸಂಘಟನೆಯಾದ ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್‌ಎಫ್) ಪೂಂಛ್ ನ ಭಯೋತ್ಪಾದಕ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.
ಭಯೋತ್ಪಾದಕರು ದಾಳಿ ಸ್ಥಳದ ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದು, ಇದರಲ್ಲಿ ಅತ್ಯಾಧುನಿಕ ಯುಎಸ್ ನಿರ್ಮಿತ ಎಂ4 ಕಾರ್ಬೈನ್ ರೈಫಲ್‌ಗಳನ್ನು ಬಳಸಿರುವುದು ಬೆಳಕಿಗೆ ಬಂದಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.
ಗುರುವಾರ ಪೂಂಛ್ ನಲ್ಲಿ ಮಧ್ಯಾಹ್ನ ನಡೆದ ಈ ಹೊಂಚುದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು ಮೂವರು ಗಾಯಗೊಂಡಿದ್ದಾರೆ.
M4 ಬಂದೂಕು ಹಗುರವಾದ, ಅನಿಲ-ಚಾಲಿತ, ಮ್ಯಾಗಜೀನ್-ಫೆಡ್ ಕಾರ್ಬೈನ್ ಆಗಿದ್ದು, 1980 ರ ದಶಕದಲ್ಲಿ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಅಭಿವೃದ್ಧಿಪಡಿಸಲಾಯಿತು. ಇದು ಅಮೇರಿಕ ಸಶಸ್ತ್ರ ಪಡೆಗಳ ಆಯುಧವಾಗಿದೆ ಮತ್ತು 80 ಕ್ಕೂ ಹೆಚ್ಚು ದೇಶಗಳು ಇದನ್ನು ಬಳಸುತ್ತಿದೆ ಎಂದು ಹೇಳಲಾಗಿದೆ.
ತನಿಖೆಗೆ ಎನ್‌ಐಎ ತಂಡ :
ದಾಳಿಯ ತನಿಖೆಗಾಗಿ, ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ನಾಲ್ಕು ಸದಸ್ಯರ ತಂಡವು ಜಮ್ಮುವಿನ ರಜೌರಿಗೆ ತಲುಪಿದೆ. ಭದ್ರತಾ ಸಿಬ್ಬಂದಿ ಡೇರಾ ಬೀದಿಯ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಭಯೋತ್ಪಾದಕ ದಾಳಿಯ ಪ್ರಕರಣಕ್ಕೆ ಸಂಬಂಧಿಸಿ ಸೇನೆಯು ಕೆಲವು ಸ್ಥಳೀಯ ಶಂಕಿತರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: Retire; ಭಾರತ ಟೆಸ್ಟ್ ಸರಣಿಯೊಂದಿಗೆ ವೃತ್ತಿ ಜೀವನಕ್ಕೆ ತೆರೆ ಎಳೆಯಲಿದ್ದಾರೆ ಡೀನ್ ಎಲ್ಗರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.