ಗೋವಾವನ್ನು ಪೋರ್ಚುಗೀಸರು ಲೂಟಿ ಮಾಡಿದ್ದನ್ನು ಅಲ್ಲಗಳೆಯುವಂತಿಲ್ಲ: ಸಾವಂತ್
ಅಗ್ವಾದ್ ಜೈಲ್ ಮ್ಯೂಸಿಯಂ ನಲ್ಲಿ ವಸ್ತುಪ್ರದರ್ಶನ
Team Udayavani, Aug 12, 2022, 4:51 PM IST
ಪಣಜಿ: ಶ್ರೀಮಂತ ಗೋವಾವನ್ನು ಪೋರ್ಚುಗೀಸರು 450 ವರ್ಷಗಳ ಕಾಲ ಲೂಟಿ ಮಾಡಿದರು ಎಂಬ ಅಂಶವನ್ನು ಅಲ್ಲಗಳೆಯುವಂತಿಲ್ಲ. ಈ ಹೋರಾಟವನ್ನು ಹೊಸ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಆಗ್ವಾದ್ ಜೈಲಿನಲ್ಲಿ ಭವ್ಯ ವಸ್ತುಪ್ರದರ್ಶನ ಏರ್ಪಡಿಸಲಾಗುತ್ತಿದೆ. ದೇಶದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅಗ್ವಾದ್ ಜೈಲ್ ಮ್ಯೂಸಿಯಂ ಅನ್ನು ಇಡೀ ವರ್ಷ ವಿದ್ಯಾರ್ಥಿಗಳಿಗೆ ತೆರೆದಿಡಲಾಗುವುದು ಎಂದು ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಮಾಹಿತಿ ನೀಡಿದರು.
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಪ್ರಾಣ ತ್ಯಾಗ ಮಾಡಿದ್ದಾರೆ. ಅವರಲ್ಲಿ ಹಲವರು ಆಗ್ವಾದ್ ಜೈಲಿನಲ್ಲಿ ಬಂಧಿಯಾಗಿದ್ದರು. ಇಂದು ಆ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಈ ಜೈಲಿನ ಪರಂಪರೆ ಹಾಗೂ ವಿಮೋಚನಾ ಹೋರಾಟದ ಚಾರಿತ್ರಿಕ ವಿವರಣೆ ಇಲ್ಲಿ ನಿಂತಿದೆ. ಸೆ.1ರಂದು ಈ ಮ್ಯೂಸಿಯಂ ಉದ್ಘಾಟನೆಗೊಳ್ಳಲಿದೆ ಎಂದು ಮುಖ್ಯಮಂತ್ರಿ ಪ್ರಕಟಿಸಿದರು.
ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ತ ಸಿಕೇರಿಯ ಕೋಟೆ ಅಗವಾಡ ಜೈಲಿನಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ ಅವರು ಮಾತನಾಡಿದರು
.
ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಮೈಕಲ್ ಲೋಬೋ, ಸಚಿವ ರೋಹನ್ ಖಂವಟೆ, ಪೊಲೀಸ್ ಮಹಾನಿರ್ದೇಶಕ ಜಸ್ಪಾಲ್ ಸಿಂಗ್, ಶಾಸಕ ಗಣೇಶ ಗಾಂವ್ಕರ್ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ರಾಯ ಶಿರೋಡ್ಕರ್ , ಶ್ಯಾಮಸುಂದರ್ ಕಲಾಂಗುಟ್ಕರ್ , ಪ್ರಭಾಕರ ನಾಯ್ಕ್ , ಸಂತಾನಾ ಡಯಾಸ್ , ರೋಹಿದಾಸ್ ದೇಸಾಯಿ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.
ದೇಶಕ್ಕಾಗಿ ಸಾಯಬೇಡಿ, ಕಲ್ಪನೆಗಳನ್ನು ನೀಡಿ!
ಅಮೃತ ಮಹೋತ್ಸವದ ಸಂದರ್ಭದಲ್ಲಿ ಸರ್ಕಾರ ಕೆಲವು ನಿರ್ಣಯಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಹೇಳಿದರು. ಇದರ ಅಡಿಯಲ್ಲಿ, ಶಾಲಾ ವಿದ್ಯಾರ್ಥಿಗಳು ಮತ್ತು ಯುವಕರು ದೇಶದ ಮುಂದಿನ 25 ವರ್ಷಗಳವರೆಗೆ 75 ಹೊಸ ಆಲೋಚನೆಗಳು, ನಿರ್ಣಯಗಳು, ಕಾರ್ಯಗಳು ಮತ್ತು ಸಾಧನೆಗಳನ್ನು ಸೂಚಿಸಬೇಕು. ಈಗ ದೇಶಕ್ಕಾಗಿ ಜೀವ ನೀಡುವ ಅಗತ್ಯವಿಲ್ಲ, ಆದರೆ ಹೊಸ ಆಲೋಚನೆಗಳನ್ನು ಪ್ರಸ್ತುತಪಡಿಸುವ ಅವಶ್ಯಕತೆಯಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.