ಕೇರಳದಲ್ಲಿ ಮತ್ತೆ ಐವರಿಗೆ ಕೊರೊನಾ ಸೋಂಕು: ದೇಶದಲ್ಲಿ ವೈರಾಣುಪೀಡಿತರ ಸಂಖ್ಯೆ 39ಕ್ಕೆ ಏರಿಕೆ
Team Udayavani, Mar 8, 2020, 12:10 PM IST
ತಿರುವನಂತಪುರಂ: ಕೇರಳದಲ್ಲಿ ಮತ್ತೆ ಐವರಿಗೆ ಕೊರೊನಾ ಸೋಂಕು ತಗುಲಿರುವ ಕುರಿತು ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಖಚಿತಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಒಟ್ಟಾರೆಯಾಗಿ 39 ಜನರಿಗೆ ವೈರಾಣು ತಗುಲಿರುವುದು ಧೃಡಪಟ್ಟಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಇತ್ತೀಚಿಗಷ್ಟೇ ಕೇರಳದ ಮೂವರು ವ್ಯಕ್ತಿಗಳು ಇಟಲಿಗೆ ತೆರಳಿ ಹಿಂದಿರುಗಿದ್ದರು. ಇವರಿಂದ ಇಬ್ಬರು ಸಂಬಂಧಿಕರಿಗೂ ಕೂಡ ಸೋಂಕು ತಗುಲಿದೆ ಎಂದು ಆರೋಗ್ಯ ಸಚಿವೆ ಶೈಲಜಾ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಇಟಲಿಗೆ ತೆರಳಿದ್ದ ವ್ಯಕ್ತಿಗಳು ತಮ್ಮ ಪ್ರಯಾಣದ ವಿವರವನ್ನು ಸಮರ್ಪಕವಾಗಿ ನೀಡಿರಲಿಲ್ಲ. ಆರೋಗ್ಯ ತಪಾಸಣೆಗೂ ನಿರಾಕರಿಸಿದ್ದರು. ಆದರೆ ಮನವೊಲಿಕೆಯ ನಂತರ ಪರೀಕ್ಷೆಗೊಳಪಡಿಸಿದಾಗ ಸೋಂಕು ಇರುವುದು ಪತ್ತೆಯಾಯಿತು ಎಂದಿದ್ದಾರೆ.
ತಿಂಗಳ ಹಿಂದಷ್ಟೇ ಕೇರಳದಲ್ಲಿ ಮೂವರು ವ್ಯಕ್ತಿಗಳಿಗೆ ಸೋಂಕು ತಗುಲಿರುವುದು ಖಚಿತಗೊಂಡಿತ್ತು.ಇದು ದೇಶದಲ್ಲಿ ದಾಖಲಾದ ಮೊದಲ 3 ಪ್ರಕರಣವಾಗಿತ್ತು. ಆ ಬಳಿಕ ಸೂಕ್ತ ಚಿಕಿತ್ಸೆಯಿಂದ ಆ ಮೂವರು ಸೋಂಕಿನಿಂದ ಪಾರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
Delhi: 9 ವರ್ಷಗಳಲ್ಲೇ ಡಿಸೆಂಬರ್ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!
Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್ ಮನವಿ
ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ
Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.