Power subsidy: ಹಿಮಾಚಲ ಪ್ರದೇಶ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು
ವಿದ್ಯುತ್ ಸಬ್ಸಿಡಿ ಬಿಟ್ಟು ಕೊಡಲು ಸಿಎಂ ಕರೆ
Team Udayavani, Jan 3, 2025, 6:55 AM IST
ಶಿಮ್ಲಾ: ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಹಿಮಾಚಲ ಪ್ರದೇಶದಲ್ಲಿ ಉದ್ಯೋಗಿಗಳಿಗೆ ವೇತನ ನೀಡಲೂ ಸರ್ಕಾರ ಪರದಾಡುವ ಪರಿಸ್ಥಿತಿ ಎದುರಾಗಿದೆ. ಏತನ್ಮಧ್ಯೆ, ಸಾಲದ ಸುಳಿಯಲ್ಲಿ ಸಿಲುಕಿರುವ ರಾಜ್ಯ ವಿದ್ಯುತ್ ಮಂಡಳಿಯನ್ನು ಉಳಿಸಲು ರಾಜ್ಯದ ಜನತೆಗೆ ವಿದ್ಯುತ್ ಸಬ್ಸಿಡಿ ಬಿಟ್ಟುಕೊಡಿ ಎಂದು ಸಿಎಂ ಸುಖ್ವಿಂದರ್ ಸಿಂಗ್ ಸುಖು ಮನವಿ ಮಾಡಿದ್ದಾರೆ.
ಇದರ ಮೊದಲ ಹೆಜ್ಜೆಯಾಗಿ ತಾವೂ ಸಬ್ಸಿಡಿ ಬಿಟ್ಟುಕೊಟ್ಟಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಜನತೆಗೆ 150 ಯೂನಿಟ್ ವಿದ್ಯುತ್ ಸಬ್ಸಿಡಿ ನೀಡುತ್ತಿತ್ತು. ಇದನ್ನು 300 ಯೂನಿಟ್ಗೆ ಹೆಚ್ಚಿಸುವುದಾಗಿ ಚುನಾವಣೆ ವೇಳೆ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೀಗ ಆ ಭರವಸೆ ಈಡೇರಿಸುವುದಕ್ಕೂ ಸಾಧ್ಯವಾಗದೇ ಪ್ರಸಕ್ತ ಇರುವ 150 ಯೂನಿಟ್ ಸಬ್ಸಿಡಿ ಬಿಟ್ಟುಕೊಡಲು ಕೇಳಿಕೊಂಡಿದೆ.
ಸಬ್ಸಿಡಿಗಾಗಿ ವಾರ್ಷಿಕ 22,000 ಕೋಟಿ ರೂ. ವ್ಯಯಿಸಲಾ ಗುತ್ತಿದೆ. ಸಬ್ಸಿಡಿ ಕಡಿತಗೊಂಡರೆ ಇಲಾಖೆಗೆ ಮಾಸಿಕ 200 ಕೋಟಿ ರೂ. ಉಳಿತಾಯವಾಗುತ್ತದೆ ಎಂಬುದು ಸರ್ಕಾರದ ಉದ್ದೇಶ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗಳದ್ದು, ಸರ್ಕಾರದಲ್ಲ: ಕೇರಳ ಸಚಿವ
Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್ ಹುತಾತ್ಮ
UP: ವಿವಾಹದ ಮಧ್ಯೆ ಬಾತ್ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
ISRO: ಅಂತರಿಕ್ಷದಲ್ಲಿ ಅಲಸಂದೆ ಬೀಜ ಮೊಳಕೆ: ಇಸ್ರೋ ಪ್ರಯೋಗಕ್ಕೆ ಯಶಸ್ಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.