ಮಾಸಾಂತ್ಯದಲ್ಲಿ ಎಲ್ಲ ಮನೆಗಳಿಗೂ ವಿದ್ಯುತ್
Team Udayavani, Jan 21, 2019, 12:55 AM IST
ಹೊಸದಿಲ್ಲಿ: ಜನವರಿ ತಿಂಗಳ ಅಂತ್ಯದೊಳಗೆ ದೇಶದ ಎಲ್ಲ ಕುಟುಂಬಗಳೂ ವಿದ್ಯುತ್ ಪಡೆಯ ಲಿವೆ. ಕೇಂದ್ರ ಸರಕಾರದ ಮಹತ್ವಾ ಕಾಂಕ್ಷಿ ಯೋಜನೆಯಾಗಿರುವ ಸೌಭಾಗ್ಯ ಯೋಜನೆ ಅಡಿ 2.48 ಕೋಟಿ ಕುಟುಂಬಗಳಿಗೆ ವಿದ್ಯುತ್ ಒದ ಗಿಸುವ ಗುರಿ ಹಾಕಿಕೊಳ್ಳಲಾಗಿತ್ತು. 16,300 ಕೋಟಿ ರೂ. ವೆಚ್ಚದ ಈ ಯೋಜನೆಯಲ್ಲಿ ಈಗಾಗಲೇ 2.44 ಕೋಟಿ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ.
ಪ್ರತಿನಿತ್ಯ 30 ಸಾವಿರ ಕುಟುಂಬ ಗಳಿಗೆ ವಿದ್ಯುತ್ ಸಂಪರ್ಕ ಒದಗಿಸ ಲಾಗುತ್ತಿದೆ. ಹೀಗಾಗಿ ಉಳಿದ ನಾಲ್ಕು ಲಕ್ಷ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸವು ಈ ತಿಂಗ ಳೊಳಗೆ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಸೌಭಾಗ್ಯ ಯೋಜನೆ ಅಡಿಯಲ್ಲಿ ಎಲ್ಲ ಕುಟುಂಬಗಳಿಗೆ ವಿದ್ಯುತ್ ಒದಗಿಸಲು 2019ರ ಮಾ. 31ರ ವರೆಗೆ ಸಮಯವಿದೆ. ಆದರೆ 2018ರ ಡಿಸೆಂಬರ್ ಒಳಗೆ ಈ ಯೋಜನೆ ಪೂರ್ಣಗೊಳಿಸಲು ಇಂಧನ ಇಲಾಖೆ ಸ್ವಯಂ ಗುರಿ ಹಾಕಿಕೊಂಡಿತ್ತು.
ಕೆಲವೆಡೆ ಚುನಾ ವಣೆ ಮತ್ತು ನಕ್ಸಲ್ ಸಮಸ್ಯೆಯಿಂದಾಗಿ ವಿಳಂಬ ವಾಯಿತು. ಕೆಲವು ರಾಜ್ಯಗಳಲ್ಲಿ ಗುತ್ತಿಗೆ ದಾರರ ಸಮಸ್ಯೆಯನ್ನೂ ಎದು ರಿಸ ಬೇಕಾ ಯಿತು ಎಂದು ಅಧಿ ಕಾರಿ ಗಳು ಹೇಳಿ ದ್ದಾರೆ. ಸೌಭಾಗ್ಯ ಪೋರ್ಟಲ್‌ನಲ್ಲಿ ರುವ ಮಾಹಿತಿಯ ಪ್ರಕಾರ ಅಸ್ಸಾಂ, ರಾಜಸ್ಥಾನ, ಮೇಘಾಲಯ, ಛತ್ತೀಸ್ ಗಢ ದಲ್ಲಿ 3.58 ಲಕ್ಷ ಕುಟುಂಬ ಗಳಿಗೆ ವಿದ್ಯುತ್ ಒದಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.