ಜನಧನದಿಂದ ಬಡತನ ನೀಗಲು ಯತ್ನ: ಯೋಜನೆ ಆರು ವರ್ಷ ಪೂರೈಸಿದ್ದಕ್ಕೆ ಮೋದಿ ಹರ್ಷ
Team Udayavani, Aug 29, 2020, 6:13 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೊಳಿಸಿದ ‘ಜನ ಧನ’ ಯೋಜನೆ ಬಡತನ ನಿವಾರಣೆಯ ಪ್ರಯತ್ನ.
ಅದೊಂದು ದೂರಗಾಮಿ ಬದಲಾವಣೆ ತರುವಂಥದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿಯವರು ಘೋಷಣೆ ಮಾಡಿರುವ ಯೋಜನೆಗೆ ಆರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಟ್ವೀಟ್ ಮಾಡಿದ್ದಾರೆ.
‘ಶುಕ್ರವಾರಕ್ಕೆ ಜನಧನ ಯೋಜನೆ ಜಾರಿಯಾಗಿ ಆರು ವರ್ಷಗಳು ಪೂರ್ತಿಯಾದವು.
ಬ್ಯಾಂಕಿಂಗ್ ವ್ಯವಸ್ಥೆ ಹೊಂದಿಲ್ಲದವರಿಗೆ ಅದನ್ನು ನೀಡುವ ಉದ್ದೇಶದಿಂದ ಯೋಜನೆ ಜಾರಿಗೊಳಿಸಲಾಗಿತ್ತು.
ಇದರಿಂದಾಗಿ ಧನ್ಮಾತ್ಮಕವಾದ ಬದಲಾಣೆಗಳು ಉಂಟಾಗಿವೆ. ಕೋಟ್ಯಂತರ ಮಂದಿಗೆ ಅನುಕೂಲವಾಗುವುದರ ಜತೆಗೆ ಬಡತನ ನಿರ್ಮೂಲನೆಯ ನಿಟ್ಟಿನಲ್ಲಿಯೂ ಉತ್ತಮ ಹೆಜ್ಜೆಯನ್ನಿಟ್ಟಂತಾಗಿದೆ’ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.
17.90 ಕೋಟಿ ಖಾತೆ: 2015ರ ಆಗಸ್ಟ್‌ನಲ್ಲಿ ದೇಶಾದ್ಯಂತ 17.90 ಕೋಟಿ ಖಾತೆಗಳು ಇದ್ದವು. ಹಾಲಿ ತಿಂಗಳಲ್ಲಿ ಖಾತೆಗಳ ಜಂಖ್ಯೆ 40.35 ಕೋಟಿಗಳಿಗೆ ಏರಿದೆ ಎಂದು ಪ್ರಧಾನಿ ಹರ್ಷ ವ್ಯಕ್ತಪಡಿಸಿದ್ದಾರೆ.
‘ಪ್ರಧಾನಮಂತ್ರಿ ಜನ ಧನ ಯೋಜನೆಯಿಂದಾಗಿ ಹಲವು ಕುಟುಂಬಗಳ ಆರ್ಥಿಕ ಭವಿಷ್ಯ ಸುಭದ್ರವಾಗಿದೆ. ಶೇ.63ರಷ್ಟು ಜನ ಫಲಾನುಭವಿಗಳು ಗ್ರಾಮೀಣ ಪ್ರದೇಶದವರು. ಶೇ.55ರಷ್ಟು ಮಂದಿ ಮಹಿಳೆಯರೇ ಆಗಿದ್ದಾರೆ. ನಗರ ಪ್ರದೇಶಗಳಲ್ಲಿ ಶೇ.36.4ರಷ್ಟು ಮಂದಿ ಪ್ರಯೋಜನ ಪಡೆದುಕೊಂಡಿದ್ದಾರೆ” ಎಂದು ಪ್ರಧಾನಿಯವರು ಬರೆದುಕೊಂಡಿದ್ದಾರೆ.
Thanks to the Pradhan Mantri Jan Dhan Yojana, the future of several families has become secure. A high proportion of beneficiaries are from rural areas and are women. I also applaud all those who have worked tirelessly to make PM-JDY a success. #6YearsOfJanDhanYojana pic.twitter.com/XqvCxop7AS
— Narendra Modi (@narendramodi) August 28, 2020
ಪ್ರಯೋಜನವೇನು?
– ಮೈಕ್ರೋ ಪಿಂಚಣಿ, ವಿಮೆ
– 2 ಲಕ್ಷ ರೂ.ವರೆಗೆ ಅಪಘಾತ ವಿಮೆ
– ಡೆಬಿಟ್ ಕಾರ್ಡ್
– ಶೂನ್ಯ ಠೇವಣಿ ಇರುವ ಉಳಿತಾಯ ಖಾತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.