ನಾಮಪತ್ರ ಹಿಂತೆಗತಕ್ಕೆ ಪ್ರಗ್ಯಾಠಾಕೂರ್ ಮನ ಒಲಿಸಿದ ಪ್ರಗ್ಯಾ ಠಾಕೂರ್!
ಇದು ಒಂದೇ ಹೆಸರಿನ ಇಬ್ಬರು ಅಭ್ಯರ್ಥಿಗಳ ನಾಮಪತ್ರಕ್ಕೆ ಸಂಬಂಧಿಸಿದ ವಿಷಯ!
Team Udayavani, Apr 28, 2019, 4:20 PM IST
ಭೋಪಾಲ್ : ಚುನಾವಣಾ ಸಮಯಗಳಲ್ಲಿ ರಾಜಕೀಯ ನಾಯಕರ ಹೆಸರನ್ನೇ ಹೊಂದಿರುವ ಕೆಲವೊಂದು ಜನರಿಗೆ ಸಖತ್ ಬೇಡಿಕೆ ಬರುತ್ತದೆ. ಅದರಲ್ಲೂ ಒಂದು ಕ್ಷೇತ್ರ ಹೈ ಪ್ರೊಫೈಲ್ ಆಗಿ ಬದಲಾದರಂತೂ ಇಂತವರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು.
ಮೊನ್ನೆ ತಾನೆ ಮುಕ್ತಾಯಗೊಂಡ ನಮ್ಮ ರಾಜ್ಯದ ಚುನಾವಣೆಯಲ್ಲಿ ಹೈ ಪ್ರೊಫೈಲ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಹೆಸರಿನ ಹಲವರು ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದ ವಿಚಾರ ನಮಗೆಲ್ಲಾ ತಿಳಿದೇ ಇದೆ. ಇದರಲ್ಲಿ ಎದುರಾಳಿ ಪಕ್ಷದ ಅಭ್ಯರ್ಥಿಯ ಕೈವಾಡವೂ ಇರುತ್ತದೆ ಎನ್ನುವುದು ನಗ್ನಸತ್ಯ.
ತನ್ನ ಎದುರಾಳಿ ಬಲಿಷ್ಠನಾಗಿದ್ದಾಗ ಮತ್ತು ಆತ/ಆಕೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಎದುರಾಳಿ ಅಭ್ಯರ್ಥಿಗೆ ಅನ್ನಿಸಿದಾಗ ಒಂದೇ ಹೆಸರಿನ ಹೆಚ್ಚೆಚ್ಚು ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಮತದಾರರಲ್ಲಿ ಗೊಂದಲ ಮೂಡಿಸುವ ಯತ್ನಗಳು ಭಾರತೀಯ ಚುನಾವಣಾ ಇತಿಹಾಸದಲ್ಲಿ ಹಾಸುಹೊಕ್ಕಾಗಿದೆ.
ಇದಕ್ಕೆ ವ್ಯತಿರಿಕ್ತವಾಗಿರುವ ಕಥೆಯೊಂದು ಇಲ್ಲಿದೆ ನೋಡಿ.
ಮಧ್ಯಪ್ರದೇಶದ ಬೋಪಾಲ್ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸಾಧ್ವಿ ಪ್ರಗ್ಯಾ ಠಾಕೂರ್ ಅವರು ಕಾಂಗ್ರೆಸ್ ನ ದಿಗ್ವಿಜಯ ಸಿಂಗ್ ವಿರುದ್ಧ ಕಣಕ್ಕಿಳಿದಿದ್ದಾರೆ. ಇಲ್ಲಿ ಈ ಎರಡು ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ಇದೆ. ಹಾಗಾಗಿ ಪ್ರತೀ ಮತವೂ ಇಲ್ಲಿ ಅಭ್ಯರ್ಥಿಯ ಗೆಲುವನ್ನು ನಿರ್ಧರಿಸುತ್ತದೆ. ಹೀಗಿರುವಾಗ ಪ್ರಗ್ಯಾ ಠಾಕೂರ್ ಎಂಬ ಹೆಸರಿನ ಇಬ್ಬರು ಸ್ಪರ್ಧಿಸಿದರೆ ಸಹಜವಾಗಿಯೇ ಗೆಲ್ಲುವ ವಿಶ್ವಾಸದಲ್ಲಿರುವ ಅಭ್ಯರ್ಥಿಗೆ ಚಿಂತೆಯಾಗದೆ ಇರದು.
ಹಾಗಾಗಿ ಸಾಧ್ವಿ ಪ್ರಗ್ಯಾ ಠಾಕೂರ್ ಅವರು ಈ ಸಮಸ್ಯೆಯನ್ನು ‘ಸಾಮ’ದಿಂದಲೇ ಬಗೆಹರಿಸಲು ನಿರ್ಧರಿಸಿದರು. ಮತ್ತು ಅವರ ಈ ಪ್ರಯತ್ನ ಇದೀಗ ಯಶಸ್ವಿಯೂ ಆಗಿದೆ. ಸಾಧ್ವಿ ಪ್ರಗ್ಯಾ ಠಾಕೂರ್ ಅವರನ್ನು ಬಿಜೆಪಿಯು ಭೋಪಾಲ್ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪ್ರಕಟಿಸುವುದಕ್ಕೂ ಮುಂಚೆಯೇ ಪ್ರಗ್ಯಾ ಠಾಕೂರ್ ಎಂಬ ಮಹಿಳೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಆದರೆ ಇದೀಗ ಕೇಸರಿ ಪಕ್ಷದಿಂದಲೂ ಪ್ರಗ್ಯಾ ಠಾಕೂರ್ ಎಂಬ ಅಭ್ಯರ್ಥಿಯೇ ಕಣದಲ್ಲಿರುವುದರಿಂದ ಮತದಾರರಲ್ಲಿ ಹೆಸರಿನ ಗೊಂದಲ ಉಂಟಾಗಬಾರದು ಎನ್ನುವ ಕಾರಣಕ್ಕಾಗಿ ಸಾಧ್ವಿ ಪ್ರಗ್ಯಾ ಠಾಕೂರ್ ಅವರು ತನ್ನದೇ ಹೆಸರಿನ ಸ್ವತಂತ್ರ ಅಭ್ಯರ್ಥಿಯನ್ನು ಮನೆಗೆ ಕರೆಯಿಸಿಕೊಂಡು ಮಾತುಕತೆ ನಡೆಸಿ ಅವರ ನಾಮಪತ್ರವನ್ನು ಹಿಂಪಡೆಯುವಂತೆ ಮನ ಒಲಿಸುವಲ್ಲಿ ಸಾಧ್ವಿ ಯಶಸ್ವಿಯಾಗಿದ್ದಾರೆ.
ಮಾತುಕತೆಯ ಬಳಿಕ ಸ್ವತಂತ್ರ ಅಭ್ಯರ್ಥಿ ಪ್ರಗ್ಯಾ ಠಾಕೂರ್ ಅವರ ಜೊತೆಯಲ್ಲೇ ಮಾಧ್ಯಮದವರ ಮುಂದೆ ಕಾಣಿಸಿಕೊಂಡ ಸಾಧ್ವಿ ಪ್ರಗ್ಯಾ ಠಾಕೂರ್ ಭೋಪಾಲ್ ಕ್ಷೇತ್ರದಲ್ಲಿ ಇಬ್ಬಿಬ್ಬರು ಪ್ರಗ್ಯಾ ಠಾಕೂರ್ ಗಳು ಸ್ಪರ್ಧಿಸುತ್ತಿಲ್ಲ ಎಂಬ ವಿಚಾರವನ್ನು ಬಹಿರಂಗಪಡಿಸಿದರು. ಮಾತ್ರವಲ್ಲದೇ ಸ್ವತಂತ್ರ ಅಭ್ಯರ್ಥಿಯಾಗಿದ್ದ ಪ್ರಗ್ಯಾ ಠಾಕೂರ್ ಅವರು ಬಿಜೆಪಿ ಅಭ್ಯರ್ಥಿ ಪ್ರಗ್ಯಾಠಾಕೂರ್ ಅವರಿಗೆ ಈ ಚುನಾವಣೆಯಲ್ಲಿ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಎಂದೂ ಸಹ ಸಾಧ್ವಿ ತಿಳಿಸಿದರು.
2014ರ ಲೋಕಸಭಾ ಚುನಾವಣೆಯಲ್ಲಿ ಛತ್ತೀಸ್ ಗಢದ ಮಹಾಸಮುಂದ್ ಲೋಕಸಭಾ ಕ್ಷೇತ್ರದಲ್ಲಿ ಚಂದೂ ಲಾಲ್ ಸಾಹೂ ಹೆಸರಿನ 10 ಜನ ಅಭ್ಯರ್ಥಿಗಳು ಕಣದಲ್ಲಿದ್ದರು. ಇಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಚಂದೂ ಲಾಲ್ ಸಾಹೂ ಮತ್ತು ರಾಜ್ಯದ ಮಜೀ ಮುಖ್ಯಮಂತ್ರಿ ಅಜಿತ್ ಜೋಗಿ ನಡುವೆ ತುರುಸಿನ ಪೈಪೋಟಿ ಏರ್ಪಟ್ಟಿತ್ತು. ಹಾಗಾಗಿ ಅಜಿತ್ ಜೋಗಿ ಚಿತಾವಣೆಯಿಂದಲೇ ಬಿಜೆಪಿ ಅಭ್ಯರ್ಥಿಯ ಹೆಸರನ್ನೇ ಹೋಲುವ 10 ಜನ ಚಂದೂ ಲಾಲ್ ಸಾಹುಗಳು ಸ್ವತಂತ್ರವಾಗಿ ಸ್ಪರ್ಧಿಸಿದ್ದರಬಹುದು ಎಂಬ ಮಾತುಗಳು ಆಗ ರಾಜಕೀಯ ವಲಯದಲ್ಲಿ ಕೇಳಿಬಂದಿತ್ತು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.