ಬಿಯಾಂಡ್ ಬೆಂಗಳೂರು ಸಮಾವೇಶಕ್ಕೆ ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್ ಗೆ ಆಹ್ವಾನ
Team Udayavani, Aug 23, 2022, 9:45 PM IST
ನವದೆಹಲಿ: ಹುಬ್ಬಳ್ಳಿ, ಮೈಸೂರು ಹಾಗೂ ಮಂಗಳೂರಿನಲ್ಲಿ ನಡೆಯಲಿರುವ “ಬಿಯಾಂಡ್ ಬೆಂಗಳೂರು’ ಸಮಾವೇಶಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ರಾಜೀವ್ ಚಂದ್ರಶೇಖರ್ ಅವರನ್ನು ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರಾಜ್ಯ ಸರ್ಕಾರದ ಪರವಾಗಿ ಮಂಗಳವಾರ ಆಹ್ವಾನಿಸಿದರು.
ಸೆ.26ರಂದು ಹುಬ್ಬಳ್ಳಿಯಲ್ಲಿ ಮತ್ತು ಅ.19, 20ರಂದು ಮೈಸೂರಿನಲ್ಲಿ “ಬಿಯಾಂಡ್ ಬೆಂಗಳೂರು’ ಟೆಕ್ ಸಮಾವೇಶ ನಡೆಯಲಿದೆ. ಇವುಗಳನ್ನು ಕ್ರಮವಾಗಿ ಪ್ರಹ್ಲಾದ್ ಜೋಶಿ ಮತ್ತು ರಾಜೀವ್ ಚಂದ್ರಶೇಖರ್ ಅವರು ಉದ್ಘಾಟಿಸಲಿದ್ದಾರೆ. ಆಹ್ವಾನವನ್ನು ಸ್ವೀಕರಿಸಿದ ಕೇಂದ್ರ ಸಚಿವರು ಸಮಾವೇಶಕ್ಕೆ ಬರುವುದಾಗಿ ಭರವಸೆ ನೀಡಿದರು.
ಬಳಿಕ ಮಾತನಾಡಿದ ಸಚಿವರು, ಬೆಂಗಳೂರು ನಗರದ ಆಚೆಗೂ ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕೆಗಳು ನೆಲೆಯೂರುವಂತೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಭಾಗವಾಗಿ, ನವೆಂಬರ್ನಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೂ (ಬಿಟಿಎಸ್) ಮುನ್ನ ಹುಬ್ಬಳ್ಳಿ, ಮೈಸೂರು ಮತ್ತು ಮಂಗಳೂರಿನಲ್ಲಿ “ಬಿಯಾಂಡ್ ಬೆಂಗಳೂರು’ ಸಮಾವೇಶಗಳನ್ನು ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.