ಜೈಲಿನಲ್ಲಿ ಮಾಜಿ ಸಚಿವನಿಗೆ ತಕ್ಕುದಾದ ಸೌಕರ್ಯ: ಪ್ರಜಾಪತಿ ಆಗ್ರಹ
Team Udayavani, Jul 8, 2017, 5:00 PM IST
ಲಕ್ನೋ : ಗ್ಯಾಂಗ್ ರೇಪ್ ಪ್ರಕರಣದ ಆರೋಪಿಯಾಗಿ ಜೈಲು ಪಾಲಾಗಿರುವ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ, ಜೈಲಿನಲ್ಲಿ ತನಗೆ ಮಾಜಿ ಸಚಿವ ಹಾಗೂ ಮಾಜಿ ಶಾಸಕನ ಸ್ಥಾನಮಾನಕ್ಕೆ ತಕ್ಕುದಾದ ಸೌಲಭ್ಯ – ಸೌಕರ್ಯಗಳನ್ನು ನೀಡುವಂತೆ ಆಗ್ರಹಿಸಿದ್ದಾರೆ.
ಇಲ್ಲಿನ ಜಿಲ್ಲಾ ಬಂಧೀಖಾನೆಯ ಸೆರೆಮನೆಯಲ್ಲಿ ಪ್ರಜಾಪತಿಯನ್ನು ಇರಿಸಲಾಗಿದೆ. ನಿನ್ನೆ ಶುಕ್ರವಾರ ಬಂಧೀಖಾನೆಗೆ ಅಚ್ಚರಿಯ ಭೇಟಿ ನೀಡಿದ ತಂಡಕ್ಕೆ ಪ್ರಜಾಪತಿ ‘ನನಗೆ ನನ್ನ ಸ್ಥಾನಮಾನಕ್ಕೆ ತಕ್ಕುದಾದ ಸೌಕರ್ಯಗಳನ್ನು ಜೈಲಿನಲ್ಲಿ ನೀಡಬೇಕು’ ಎಂದು ಆಗ್ರಹಿಸಿದರು ಎಂಬುದಾಗಿ ಲಕ್ನೋ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ ಹೇಳಿದರು.
ಈ ಬಗ್ಗೆ ಜಿಲ್ಲಾ ಆಡಳಿತಕ್ಕೆ ಮತ್ತು ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸುವಂತೆ ಪ್ರಜಾಪತಿಗೆ ಸೂಚಿಸಲಾಯಿತು ಎಂದು ಶರ್ಮಾ ತಿಳಿಸಿದರು.
‘ಪ್ರಕೃತ ಪ್ರಜಾಪತಿ ಅವರು ಸಾಮಾನ್ಯ ಕೈದಿಯಾಗಿ ಜೈಲಿನಲ್ಲಿ ಇದ್ದಾರೆ. ಚಾಪೆಯಲ್ಲಿ ಮಲಗುತ್ತಾರೆ, ಜೈಲಿನ ಆಹಾರವನ್ನು ಸ್ವೀಕರಿಸುತ್ತಾರೆ ಮತ್ತು ಯಾವುದೇ ವಿಶೇಷ ಸೌಕರ್ಯಗಳನ್ನು ಅವರಿಗೆ ನೀಡಲಾಗುತ್ತಿಲ್ಲ’ ಎಂದು ಶರ್ಮಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.