Viral: ಪ್ರಕಾಶ್ ರಾಜ್ ಬಿಜೆಪಿಗೆ ಸೇರಲಿದ್ದಾರೆ.. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ವೈರಲ್
Team Udayavani, Apr 4, 2024, 5:09 PM IST
ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಇತ್ತೀಚಿನ ದಿನಗಳಲ್ಲಿ ರಾಜಕೀಯ ವಿಚಾರದಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಅವರು ಕೇಂದ್ರ ಸರ್ಕಾರವನ್ನು ಒಂದಲ್ಲ ಒಂದು ವಿಚಾರದಲ್ಲಿ ಟೀಕಿಸುತ್ತಲೇ ಇರುತ್ತಾರೆ.
ಕಳೆದ ಕೆಲ ಸಮಯದಿಂದ ಅವರು ಟ್ವೀಟ್ ಮೂಲಕವೇ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೇರವಾಗಿಯೇ ಟೀಕಿಸಿದ್ದಾರೆ. ಸೈದ್ಧಾಂತಿಕವಾಗಿ ತನ್ನ ವಿಚಾರಗಳನ್ನು ಹೇಳುವ ಪ್ರಕಾಶ್ ಅನೇಕರ ಟೀಕೆಗೂ ಒಳಗಾಗಿದ್ದಾರೆ.
ಪ್ರಕಾಶ್ ರಾಜ್ ಬಿಜೆಪಿಗೆ ಸೇರುತ್ತಾರೆ ಎನ್ನುವ ಟ್ವೀಟ್ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ʼದಿ ಸ್ಕಿನ್ ಡಾಕ್ಟರ್ʼ ಎನ್ನುವ ಟ್ವಿಟರ್ ಬಳಕೆದಾರರೊಬ್ಬರು ‘ಶ್ರೇಷ್ಠ ನಟ ಪ್ರಕಾಶ್ ರಾಜ್ ಅವರು ಇಂದು ಬಿಜೆಪಿಗೆ ಸೇರಲಿದ್ದಾರೆʼ ಎನ್ನುವ ಟ್ವೀಟ್ ವೊಂದನ್ನು ಮಾಡಿದ್ದಾರೆ.
ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟ್ವೀಟ್ ಗೆ ಸ್ವತಃ ಪ್ರಕಾಶ್ ರಾಜ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. “ಅವರು ಪ್ರಯತ್ನಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ ನನ್ನನ್ನು ಖರೀದಿಸುವಷ್ಟು (ಸೈದ್ಧಾಂತಿಕವಾಗಿ) ಅವರು ಶ್ರೀಮಂತರಲ್ಲ ಎಂದು ಅರಿತುಕೊಂಡಿರಬೇಕು.. ನಿಮ್ಮ ಅಭಿಪ್ರಾಯವೇನು ಸ್ನೇಹಿತರೇ” ಎಂದು ಪ್ರಕಾಶ್ ರಾಜ್ ಬರೆದುಕೊಂಡಿದ್ದಾರೆ.
ಪ್ರಕಾಶ್ ರಾಜ್ ಈ ಹಿಂದೆ ಚಂದ್ರಯಾನ ಹಾಗೂ ಪ್ರಧಾನಿ ಅವರನ್ನು ಹೋಲಿಸಿಕೊಂಡು ಟ್ವೀಟ್ ಮಾಡಿ ಟೀಕೆಗೆ ಗುರಿಯಾಗಿದ್ದರು. ಇದಲ್ಲದೇ ಇತ್ತೀಚೆಗೆ ಪ್ರಧಾನಿ ಅವರು ನವಿಲಿನ ಜೊತೆ ಹಾಕಿದ ಫೋಟೋಗೆ ಹಾಕಿ ಹುಷಾರ್ರಪ್ಪಾ..!!! ಮೊದ್ಲು ಕಾಳಾಕಿ.. ಆಮೇಲೆ ಪುಕ್ಕ ಕಿತ್ಕೊತಾರೆ ಎಂದು ಬರೆದು ಟೀಕಿಸಿದ್ದರು.
I guess they tried 😂😂😂 must have realised they were not rich enough (ideologically) to buy me.. 😝😝😝.. what do you think friends #justasking pic.twitter.com/CCwz5J6pOU
— Prakash Raj (@prakashraaj) April 4, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.