Union Ministers; ಅಧಿಕಾರ ಸ್ವೀಕರಿಸಿದ ರಾಜ್ಯದ ನಾಲ್ವರು ಸಚಿವರು
ಪ್ರಹ್ಲಾದ ಜೋಶಿ, ಎಚ್ಡಿಕೆ, ಸೋಮಣ್ಣ, ಶೋಭಾ ಕರಂದ್ಲಾಜೆ ಕಾರ್ಯಾರಂಭ
Team Udayavani, Jun 11, 2024, 9:47 PM IST
ನವದೆಹಲಿ: ಮೋದಿ 3.0 ಸರ್ಕಾರಕ್ಕೆ ಕರ್ನಾಟಕದಿಂದ ಆಯ್ಕೆಯಾಗಿರುವ ನಾಲ್ವರು ಸಚಿವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ. ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಎಚ್.ಡಿ.ಕುಮಾರಸ್ವಾಮಿ, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಪ್ರಹ್ಲಾದ್ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವರಾಗಿ ವಿ.ಸೋಮಣ್ಣ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಸಚಿವೆಯಾಗಿ ಶೋಭಾ ಕರಂದ್ಲಾಜೆ ಅವರು ಅಧಿಕಾರ ಸ್ವೀಕರಿಸಿದ್ದಾರೆ.
80 ಕೋಟಿ ಜನರಿಗೆ ಆಹಾರ ಧಾನ್ಯ: ಈ ವೇಳೆ ಮಾತನಾಡಿದ ಸಚಿವ ಪ್ರಹ್ಲಾದ ಜೋಶಿ, 80 ಕೋಟಿ ಜನರಿಗೆ ಆಹಾರ ಧಾನ್ಯ ಒದಗಿಸುವತ್ತ ಕೆಲಸ ಮಾಡುವುದಾಗಿ ಹೇಳಿದರು. ಚುನಾವಣೆಗೂ ಮುನ್ನ ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಕೋಟಾದಡಿಯಲ್ಲಿ ಸಚಿವ ಸ್ಥಾನ ಪಡೆದುಕೊಂಡ ಮಾಜಿ ಸಿಎಂ ಕುಮಾರಸ್ವಾಮಿ ಅವರೂ ಅಧಿಕಾರ ಸ್ವೀಕರಿಸಿದರು. 25 ವರ್ಷಗಳ ಬಳಿಕ ಜೆಡಿಎಸ್ಗೆ ಕೇಂದ್ರದಲ್ಲಿ ಮಂತ್ರಿಗಿರಿ ಸಿಕ್ಕಿದ್ದು, ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ವಿ.ಸೋಮಣ್ಣ ಅವರು, ಮೋದಿ ಅವರ ಅಧಿಕಾರವಧಿಯಲ್ಲಿ ದೇಶದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಅಶ್ವಿನಿ ವೈಷ್ಣವ್ ಅವರ ಮಾರ್ಗದರ್ಶನದಲ್ಲಿ ರೈಲ್ವೆ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವೆಯಾಗಿ ಶೋಭ ಕರಂದ್ಲಾಜೆ ಅವರು ಅಧಿಕಾರ ಸ್ವೀಕರಿಸಿದರು. ಇದಲ್ಲದೇ ಅವರಿಗೆ ಕಾರ್ಮಿಕ ಮತ್ತು ಉದ್ಯೋಗ ಖಾತೆಯ ಜವಾಬ್ದಾರಿ ಸಹ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.