ವೆಂಟಿಲೇಟರ್ ನಲ್ಲಿ ಪ್ರಣಬ್ ಮುಖರ್ಜಿ; ಮಾಜಿ ರಾಷ್ಟ್ರಪತಿ ಆರೋಗ್ಯ ಸ್ಥಿತಿ ಗಂಭೀರ
ವೈದ್ಯರ ತಂಡ ಮಾಜಿ ರಾಷ್ಟ್ರಪತಿ ಮುಖರ್ಜಿ ಅವರ ಆರೋಗ್ಯವನ್ನು ನಿರಂತರವಾಗಿ ಪರಿಶೀಲಿಸುತ್ತಿದೆ ಎಂದು ಹೇಳಿದೆ.
Team Udayavani, Aug 11, 2020, 4:52 PM IST
ನವದೆಹಲಿ: ಮೆದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84ವರ್ಷ) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮುಖರ್ಜಿ ಅವರು ಸೋಮವಾರ ಆರೋಗ್ಯ ತಪಾಸಣೆಗೆ ತೆರಳಿದ್ದ ವೇಳೆ ಕೋವಿಡ್ 19 ಪಾಸಿಟಿವ್ ಇದ್ದಿರುವುದು ದೃಢಪಟ್ಟಿತ್ತು.
ಪ್ರಣಬ್ ಮುಖರ್ಜಿ ಅವರಿಗೆ ಆರ್ಮಿ ರಿಸರ್ಚ್ ಮತ್ತು ರೆಫರ್ರೆಲ್ ಆಸ್ಪತ್ರೆಯಲ್ಲಿ ಮೆದುಳು ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಸರ್ಜರಿ ನಂತರ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದು, ವೆಂಟಿಲೇಟರ್ ಸಪೋರ್ಟ್ ನಲ್ಲಿ ಇಡಲಾಗಿದೆ ಎಂದು ವರದಿ ತಿಳಿಸಿದೆ.
ಮುಖರ್ಜಿ ಅವರ ಮೆದುಳಿನಲ್ಲಿ ದೊಡ್ಡ ಪ್ರಮಾಣದ ರಕ್ತ ಹೆಪ್ಪುಗಟ್ಟಿರುವುದನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದು ಹಾಕಲಾಗಿತ್ತು ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ವಿವರಿಸಿದೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸಿದ್ದೇವೆ. ವೈದ್ಯರ ತಂಡ ಮಾಜಿ ರಾಷ್ಟ್ರಪತಿ ಮುಖರ್ಜಿ ಅವರ ಆರೋಗ್ಯವನ್ನು ನಿರಂತರವಾಗಿ ಪರಿಶೀಲಿಸುತ್ತಿದೆ ಎಂದು ಹೇಳಿದೆ.
ಸೋಮವಾರ ಟ್ವೀಟ್ ಮಾಡಿದ್ದ ಪ್ರಣಬ್ ಮುಖರ್ಜಿ, ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಕೋವಿಡ್ 19 ಪಾಸಿಟಿವ್ ವರದಿ ಬಂದಿದೆ. ಈ ನಿಟ್ಟಿನಲ್ಲಿ ಕಳೆದ ವಾರ ಯಾರೆಲ್ಲಾ ನನ್ನ ಸಂಪರ್ಕಕ್ಕೆ ಬಂದಿದ್ದಾರೆಯೋ ಅವರೆಲ್ಲಾ ಸ್ವಯಂ ಐಸೋಲೇಶನ್ ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.