ಪಂಜಾಬ್ ಸಿಎಂ ಸಿಂಗ್ ರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜೀನಾಮೆ..!
ರಾಷ್ಟ್ರೀಯ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲು ಕಿಶೋರ್ ಈ ನಿರ್ಧಾರ..?
Team Udayavani, Aug 5, 2021, 10:38 AM IST
ನವ ದೆಹಲಿ : ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತಾಗಿ ಸಿಂಗ್ ಗೆ ಕಿಶೋರ್ ಪತ್ರ ಬರೆದಿದ್ದು, “ಸಾರ್ವಜನಿಕ ಜೀವನದಲ್ಲಿ ಸಕ್ರಿಯನಾಗುವ ಉದ್ದೇಶದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳಲು ಬಯಸುತ್ತೇನೆ” ಎಂದು ಉಲ್ಲೇಖಿಸಿದ್ದಾರೆ ಎಂದು ವರಿಯಾಗಿದೆ.
ಭವಿಷ್ಯದ ಬಗ್ಗೆ ಈಗೇನೂ ಯೋಚನೆ ಮಾಡಿಲ್ಲ. ಮುಂದೆ ರಾಜಕೀಯದೊಂದಿಗೆಯೇ ಇರುತ್ತೇನೋ, ಇಲ್ಲವೋ ಎನ್ನುವುದರ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಎಂದು ಕೂಡ ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಸಂಪುಟದಲ್ಲಿ ಸಿಎಂ ಬೊಮ್ಮಾಯಿ ಬ್ಯಾಲೆನ್ಸ್: ಬಿಎಸ್ ವೈ- ಹೈಕಮಾಂಡ್ ಕೊಂಡಿ
“ನಿಮಗೆ ತಿಳಿದಿರುವಂತೆ, ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಉದ್ದೇಶದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳುವ ನನ್ನ ನಿರ್ಧಾರದ ದೃಷ್ಟಿಯಿಂದ, ನಿಮ್ಮ ಪ್ರಧಾನ ಸಲಹೆಗಾರನಾಗಿ ನಾನು ಜವಾಬ್ದಾರಿಯಿಂದ ಹೊರಬರಲು ಇಚ್ಛಿಸಿದ್ದೇನೆ. ನನ್ನ ಮುಂದಿನ ಕ್ರಮದ ಬಗ್ಗೆ ನಾನು ಇನ್ನೂ ತೀರ್ಮಾನಿಸದ ಕಾರಣ, ಈ ಜವಾಬ್ದಾರಿಯಿಂದ ನನ್ನನ್ನು ಮುಕ್ತಗೊಳಿಸುವಂತೆ ವಿನಂತಿಸುತ್ತೇನೆ “ಎಂದು ಪತ್ರದಲ್ಲಿ ಬರೆದಿರುವುದಾಗಿ ವರದಿ ತಿಳಿಸಿದೆ.
ಇನ್ನು, ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೊಂದಿಗೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ರಹಸ್ಯ ಸಭೆಯಲ್ಲಿ ಮಾತನಾಡಿದ್ದು, ರಾಷ್ಟ್ರೀಯ ಕಾಂಗ್ರೆಸ್ ಗೆ ಸೇರ್ಪಡೆಯಾಗುವ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.
ರಾಹುಲ್ ಗಾಂಧಿ, ಪ್ರಶಾಂತ್ ಕಿಶೋರ್ ಪಕ್ಷಕ್ಕೆ ಸೇರ್ಪಡೆಗೊಂಡರೇ ಹೇಗೆ..? ಅವರು ನಮ್ಮ ಪಕ್ಷದ ನೀತಿ, ನಿಯಮ, ಸಿದ್ಧಾಂತಗಳಿಗೆ ಒಪ್ಪುತ್ತಾರೆಯೇ ಎಂದು ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ಮಾಡಿರುವುದಾಗಿ ಹೆಸರನ್ನು ಬಹಿರಂಗ ಪಡಿಸಲಿಚ್ಛಿಸದ ಕೆಲವು ಹಿರಿಯ ಕಾಂಗ್ರೆಸ್ ನಾಯಕರು ತಿಳಿಸಿರುವುದಾಗಿ ಇತ್ತೀಚೆಗೆ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿದ್ದವು.
ಇದನ್ನೂ ಓದಿ : ಈ ರಾಶಿಯವರ ಹಲವು ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯಗಳು ಪುನರಾರಂಭ ಸಾಧ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.