Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Team Udayavani, Jan 6, 2025, 7:57 AM IST
ಹೊಸದಿಲ್ಲಿ: ಪಾಟ್ನಾದ ಗಾಂಧಿ ಮೈದಾನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ (Prashant Kishor) ಅವರನ್ನು ಸೋಮವಾರ (ಜ.06) ಬೆಳಗ್ಗೆ ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಪ್ರಶಾಂತ್ ಕಿಶೋರ್ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಬಲವಂತವಾಗಿ ಏಮ್ಸ್ ಗೆ ಕರೆದೊಯ್ಯಲಾಯಿತು. ಅವರನ್ನು ಎಲ್ಲರಿಂದ ಪ್ರತ್ಯೇಕಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಶಾಂತ್ ಕಿಶೋರ್ ಚಿಕಿತ್ಸೆಯನ್ನು ನಿರಾಕರಿಸಿದ್ದಾರೆ ಮತ್ತು ಆಮರಣಾಂತ ಉಪವಾಸವನ್ನು ಮುಂದುವರೆಸಲಿದ್ದಾರೆ ಎಂದು ವರದಿಯಾಗಿದೆ.
ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡ ವೀಡಿಯೊದಲ್ಲಿ, ಪಾಟ್ನಾ ಪೊಲೀಸರ ದೊಡ್ಡ ತಂಡವು ಪ್ರಶಾಂತ್ ಕಿಶೋರ್ ಅವರನ್ನು ಪ್ರತಿಭಟನಾ ಸ್ಥಳದಿಂದ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿರುವುದನ್ನು ಕಾಣಬಹು. ಇದೇ ವೇಳೆ ಅವರ ಸಹ ಪ್ರತಿಭಟನಾಕಾರರು ಅವರನ್ನು ಹಿಡಿದಿಡಲು ಪ್ರಯತ್ನಿಸುತ್ತಿದ್ದಾರೆ.
#WATCH | BPSC protest | Bihar: Patna Police detains Jan Suraaj chief Prashant Kishor who was sitting on an indefinite hunger strike at Gandhi Maidan pic.twitter.com/cOnoM7EGW1
— ANI (@ANI) January 5, 2025
ಇತ್ತೀಚೆಗಷ್ಟೆ ಪೂರ್ಣಾವಧಿ ರಾಜಕೀಯಕ್ಕೆ ಧುಮುಕಿದ ಪ್ರಶಾಂತ್ ಕಿಶೋರ್ ಅದಕ್ಕೂ ಮುನ್ನ ಚುನಾವಣಾ ತಂತ್ರಗಾರರಾಗಿದ್ದರು. ಬಿಹಾರ ಸಾರ್ವಜನಿಕ ಸೇವಾ ಆಯೋಗದಿಂದ (BPSC) ನಡೆಸುತ್ತಿರುವ ಸಮಗ್ರ 70ನೇ ಸಂಯೋಜಿತ (ಪ್ರಾಥಮಿಕ) ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಬೆಂಬಲಕ್ಕಾಗಿ ಜನವರಿ 2 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರಿಂದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Car Crash: ಕಾರು ರೇಸ್ ತರಬೇತಿ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ!
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.