Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್
Team Udayavani, May 26, 2024, 12:56 PM IST
ಹೊಸದಿಲ್ಲಿ: ಬಿಜೆಪಿ ಎಂದಿಗೂ ಭಾರತೀಯ ಸಂವಿಧಾನದ ಪೀಠಿಕೆಯನ್ನು ಬದಲಾಯಿಸುವುದಿಲ್ಲ ಅಥವಾ ಮೀಸಲಾತಿಯನ್ನು ಕೊನೆಗೊಳಿಸುವುದಿಲ್ಲ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
1976 ರಲ್ಲಿ ಕಾಂಗ್ರೆಸ್ ಸಂವಿಧಾನದ ಪೀಠಿಕೆಯನ್ನು ಬದಲಾಯಿಸಿತ್ತು, ಆದರೆ ಈಗ ಅನಗತ್ಯವಾಗಿ ಬಿಜೆಪಿಯನ್ನು ಗುರಿಯಾಗಿಸಲು ಮತ್ತು ಅದನ್ನು ಚುನಾವಣಾ ವಿಷಯವಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಎನ್‌ಡಿಟಿವಿ ಸಂದರ್ಶನದಲ್ಲಿ ಸಿಂಗ್ ಹೇಳಿದರು.
“1976ರಲ್ಲಿ ಮೊದಲ ಬಾರಿಗೆ ಭಾರತದ ಸಂವಿಧಾನದ ಪೀಠಿಕೆಯನ್ನು ಬದಲಾವಣೆ ಮಾಡಲಾಯಿತು. ಅದು ಇಂದಿರಾ ಗಾಂಧಿ ಮಾಡಿದ್ದು” ಎಂದು ರಾಜನಾಥ್ ಸಿಂಗ್ ಹೇಳಿದರು.
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಎಸೆಯುತ್ತಾರೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆಗೆ ರಾಜನಾಥ್ ಸಿಂಗ್ ಅವರು ಈ ತಿರುಗೇಟು ನೀಡಿದ್ದಾರೆ.
ಜಾತಿ ಆಧಾರಿತ ಮೀಸಲಾತಿ ವ್ಯವಸ್ಥೆಯನ್ನು ಬದಲಾವಣೆ ಮಾಡಲು ಬಿಜೆಪಿ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದರು.
“ನಾವು ಮೀಸಲಾತಿಯನ್ನು ಏಕೆ ಕೊನೆಗೊಳಿಸುತ್ತೇವೆ? ಈ ದೇಶಕ್ಕೆ ಒಬಿಸಿ, ಎಸ್‌ಟಿ ಮೀಸಲಾತಿ ಬೇಕು. ಅವರು (ವಿರೋಧ ಪಕ್ಷ) ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ನಾವು ಯಾವುದೇ ಪರಿಸ್ಥಿತಿಯಲ್ಲಿ ಧರ್ಮಾಧಾರಿತ ಮೀಸಲಾತಿಯನ್ನು ಸಂವಿಧಾನವಾಗಿ ನೀಡುವುದಿಲ್ಲ ಎಂದು ಹೇಳುತ್ತೇವೆ. ಅದಕ್ಕೆ ಅವಕಾಶ ನೀಡುವುದಿಲ್ಲ” ಎಂದು ರಕ್ಷಣಾ ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.