Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್ ಸಿಲಿಂಡರ್ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!
ಮೀಪದಲ್ಲಿದ್ದ ಕೆಲವು ಮನೆಗಳ ಕಿಟಕಿ ಗಾಜುಗಳು ಒಡೆದು ಹೋಗಿದೆ
Team Udayavani, Nov 14, 2024, 10:51 AM IST
ಮಹಾರಾಷ್ಟ್ರ: ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ (Ambulance)ನ ಇಂಜಿನ್ ಗೆ ಬೆಂಕಿ ಹೊತ್ತುಕೊಂಡಿದ್ದು, ನಂತರ ಕೆಲವೇ ನಿಮಿಷದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಬುಧವಾರ ಸಂಜೆ ಮಹಾರಾಷ್ಟ್ರದ ಜಲ್ ಗಾಂವ್ ನಲ್ಲಿ ನಡೆದಿದ್ದು, ಗರ್ಭಿಣಿ ಮತ್ತು ಆಕೆಯ ಕುಟುಂಬ ಸದಸ್ಯರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿ ತಿಳಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋದಲ್ಲಿ, ಆಂಬುಲೆನ್ಸ್ ಗೆ ಬೆಂಕಿಹೊತ್ತಿಕೊಂಡ ಕೆಲವೇ ಹೊತ್ತಿನಲ್ಲಿ ಬೆಂಕಿ ಸುತ್ತಲೂ ಆವರಿಸುತ್ತಾ ಬಂದಿದ್ದು, ಬಳಿಕ ಆಂಬುಲೆನ್ಸ್ ಒಳಗಿದ್ದ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಸಮೀಪದಲ್ಲಿದ್ದ ಕೆಲವು ಮನೆಗಳ ಕಿಟಕಿ ಗಾಜುಗಳು ಒಡೆದು ಹೋಗಿರುವುದು ಸೆರೆಯಾಗಿದೆ.
ಆಂಬುಲೆನ್ಸ್ ನ ಇಂಜಿನ್ ನಲ್ಲಿ ಹೊಗೆ ಬರುವುದನ್ನು ಗಮನಿಸಿದ ಚಾಲಕ ಕೂಡಲೇ ಆಂಬುಲೆನ್ಸ್ ಅನ್ನು ನಿಲ್ಲಿಸಿ, ಕೆಳಗಿಳಿದು, ಗರ್ಭಿಣಿ ಹಾಗೂ ಆಕೆಯ ಕುಟುಂಬ ಸದಸ್ಯರನ್ನು ದೂರ ಕರೆದೊಯ್ದಿದ್ದರು. ನಂತರ ಇಂಜಿನ್ ಗೆ ಹೊತ್ತಿಕೊಂಡ ಬೆಂಕಿ ಎಲ್ಲೆಡೆ ಹಬ್ಬಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿರುವುದಾಗಿ ವರದಿ ತಿಳಿಸಿದೆ.
Watch: A fire broke out in an ambulance carrying a pregnant woman in Jalgaon, Maharashtra. The fire caused an oxygen cylinder inside the ambulance to explode. The blast shattered windows of nearby houses in the Dadvadi area pic.twitter.com/uMBfhC8Tj1
— IANS (@ians_india) November 14, 2024
ಮಹಾರಾಷ್ಟ್ರ ಜಲ್ ಗಾಂವ್ ನ ದಾಡಾವಾಡಿ ರಾಷ್ಟ್ರೀಯ ಹೆದ್ದಾರಿ ಫ್ಲೈಓವರ್ ಮೇಲೆ ಈ ಘಟನೆ ನಡೆದಿದೆ. ಗರ್ಭಿಣಿ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಎರ್ನಾಡೋಲ್ ಸರ್ಕಾರಿ ಆಸ್ಪತ್ರೆಯಿಂದ ಜಲ್ ಗಾಂವ್ ನ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.