Viral Video; ಮಗಳ ಹೆರಿಗೆಗೆ AC ರೂಂ ಇಲ್ಲವೆಂದು ಆಸ್ಪತ್ರೆ ಎದುರೇ ನೆಂಟರ ಬಡಿದಾಟ
Team Udayavani, Jul 5, 2023, 10:34 PM IST
ಬಾರಾಬಂಕಿ: ಹವಾನಿಯಂತ್ರಕವಿಲ್ಲದ ಆಸ್ಪತ್ರೆಯ ಕೊಠಡಿಯಲ್ಲಿ ತಮ್ಮ ಮಗಳಿಗೆ ಹೆರಿಗೆ ಮಾಡಿಸಿದ್ದೇಕೆ ಎಂದು ಪ್ರಶ್ನಿಸಿ ಕುಟುಂಬವೊಂದು ಕೋಪಗೊಂಡು ಪತಿಯ ಮನೆಯವರೊಂದಿಗೆ ಹೊಡೆದಾಡಿಕೊಂಡ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ.
ಹೆರಿಗೆಗೆಂದು ದಾಖಲಾದ ಮಹಿಳೆಯ ಪೋಷಕರು ಆಕ್ರೋಶಗೊಂಡು ಆಕೆಯ ಗಂಡನ ತಂದೆ ತಾಯಿ ಮತ್ತು ಸಹೋದರಿಯರನ್ನು ಥಳಿಸಿದ್ದಾರೆ, ಇದು ನೆಂಟರ ನಡುವೆ ಪೂರ್ಣ ಪ್ರಮಾಣದ ಜಗಳಕ್ಕೆ ಕಾರಣವಾಯಿತು. ಈ ಹೊಡೆದಾಟದ ವಿಡಿಯೋ ಸೆರೆಹಿಡಿಯಲಾಗಿದ್ದು, ಜನರು ಒಬ್ಬರಿಗೊಬ್ಬರು ಕಪಾಳಮೋಕ್ಷ ಮಾಡುವುದನ್ನು ಕಾಣಬಹುದಾಗಿದೆ.
घर का झगड़ा, सड़क पर..😢@Uppolice #Barabanki बहू के लिए अस्पताल में AC रूम न बुक करने पर मायके वालों ने की ससुराल पक्ष के लोगों से हाथापाई. #viralvideo pic.twitter.com/I6FiGstRry
— Tushar Rai (@tusharcrai) July 5, 2023
ಮಹಿಳೆಯ ಮನೆಯವರೇ ಹೊಡೆದಾಟಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಪತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.
ಹೆರಿಗೆಗೆಂದು ತನ್ನ ಸೊಸೆಯನ್ನು ಬಾರಾಬಂಕಿಯ ಸಿವಿಲ್ ಲೈನ್ಸ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆರಿಗೆಗೆ ಸಂಬಂಧಿಸಿದ ಎಲ್ಲ ವೆಚ್ಚವನ್ನು ತಾವೇ ಭರಿಸಿರುವುದಾಗಿ ಹೇಳಿದ್ದೇವು, ಆದರೆ ಅವರು ವ್ಯವಸ್ಥೆ ಮಾಡಲಿಲ್ಲ ಎಂದು ಹೆರಿಗೆಯಾದ ಮಹಿಳೆಯ ಮಾವ ರಾಮ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!
Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.