ಮಹದಾಯಿ ಅಭಯಾರಣ್ಯದ 22 ಕುಟುಂಬಗಳ ಸ್ಥಳಾಂತರಕ್ಕೆ ಸಿದ್ಧತೆ
Team Udayavani, Feb 16, 2020, 3:05 AM IST
ಪಣಜಿ: ಮಹದಾಯಿ ಅಭಯಾರಣ್ಯದ ನಾಲ್ಕು ಗ್ರಾಮಗಳಲ್ಲಿನ 22 ಕುಟುಂಬಗಳನ್ನು ಬೇರೆಡೆ ಸ್ಥಳಾಂತರಿಸಲು ಗೋವಾ ಅರಣ್ಯ ಇಲಾಖೆ ನಿರ್ಣಯಿಸಿದೆ. ಈ 22 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿ ಅವರ ಜಾನುವಾರುಗಳನ್ನು ಕೂಡ ಸ್ಥಳಾಂತರಿಸಲು ಸಜ್ಜಾಗಿದೆ.
ಗೋವಾದ ಸತ್ತರಿ ತಾಲೂಕಿನ ಸುರ್ಲಾ, ಸಾಟ್ರೆ, ಗೋಳಾವಲಿ, ಠಾಣೆ ಗ್ರಾಮಗಳ 12 ಕುಟುಂಬಗಳನ್ನು ಮೊದಲು ಬೇರೆಡೆ ಸ್ಥಳಾಂತರಿಸಲಾಗುವುದು. ಇನ್ನುಳಿದ ಕುಟುಂಬಗಳನ್ನು ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದು ಮುಖ್ಯ ವನಪಾಲಕ ಸಂತೋಷಕುಮಾರ್ ತಿಳಿಸಿದ್ದಾರೆ.
ಮಹದಾಯಿ ಅಭಯಾರಣ್ಯದಲ್ಲಿ ಹುಲಿಗಳ ರಕ್ಷಣೆಗೆ ಹೆಚ್ಚಿನ ಭದ್ರತೆ ಕಲ್ಪಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ 5 ಲಕ್ಷ ವೆಚ್ಚದಲ್ಲಿ 60 ಸ್ಮಾರ್ಟ್‌ಫೋನ್ ಖರೀದಿಸಲು ಮುಂದಾಗಿದೆ. ಅಭಯಾರಣ್ಯದಲ್ಲಿ ಯಾವುದೇ ಮೊಬೈಲ್ ನೆಟ್‌ವರ್ಕ್ ಇಲ್ಲದ ಕಾರಣ ಈ ಮೊಬೈಲ್‌ಗೆ ವಿಶೇಷ ಸಾಫ್ಟ್ವೇರ್ ಇರುವ ಚಿಪ್ ಅಳವಡಿಸಲಾಗುವುದು ಎಂದು ತಿಳಿಸಿದರು.
ಕೆಲ ದಿನಗಳ ಹಿಂದೆ ಮಹದಾಯಿ ಅಭಯಾರಣ್ಯದಲ್ಲಿ ಸ್ಥಳೀಯ ನಿವಾಸಿಗಳು ವಿಷ ಹಾಕಿ ನಾಲ್ಕು ಹುಲಿಗಳನ್ನು ಕೊಂದ ಘಟನೆ ನಡೆದಿತ್ತು. ತಮ್ಮ ಜಾನುವಾರುಗಳ ರಕ್ಷಣೆಗಾಗಿ ಕೃತ್ಯವೆಸಗಿರುವುದನ್ನು ಸ್ಥಳೀಯರು ಒಪ್ಪಿಕೊಂಡಿದ್ದಾರೆ. ಹೀಗಾಗಿ ಅರಣ್ಯ ಇಲಾಖೆ ಅಭಯಾರಣ್ಯ ಪರಿಸರದಲ್ಲಿರುವ ಕುಟುಂಬಗಳ ಸ್ಥಳಾಂತರಕ್ಕೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.