Panaji ಆ. 22 ರಂದು ಗೋವಾಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
Team Udayavani, Aug 16, 2023, 5:35 PM IST
ಪಣಜಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ಆ. 22 ರಂದು ಗೋವಾಕ್ಕೆ ಆಗಮಿಸಲಿದ್ದಾರೆ.
ದ್ರೌಪದಿ ಮುರ್ಮು ರವರು ಭಾರತದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಗೋವಾದ ಮೊದಲ ಭೇಟಿ ಇದಾಗಿದೆ. ಮೂರು ದಿನಗಳ ಭೇಟಿಯಲ್ಲಿ ರಾಷ್ಟ್ರಪತಿಗಳು ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಷ್ಟ್ರಪತಿ ಅವರು ಮುಂದಿನ ವಾರ ಆಗಸ್ಟ್ 22 ರಿಂದ 24 ರವರೆಗೆ ಮೂರು ದಿನಗಳ ಭೇಟಿಗಾಗಿ ಗೋವಾಕ್ಕೆ ಆಗಮಿಸಲಿದ್ದಾರೆ.
ಆ. 23ರ ಮಂಗಳವಾರ ಗೋವಾ ವಿಶ್ವವಿದ್ಯಾನಿಲಯದ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ, ಸಂಜೆ 4 ಗಂಟೆಗೆ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕಳೆದ ವರ್ಷ ರಾಷ್ಟ್ರಪತಿ ಚುನಾವಣೆಗೂ ಮುನ್ನ ದ್ರೌಪದಿ ಮುರ್ಮು ರವರು ಗೋವಾಕ್ಕೆ ಭೇಟಿ ನೀಡಿದ್ದರು. ಅಂದು ರಾಜ್ಯದಲ್ಲಿ ಮುಂಗಾರು ಅಧಿವೇಶನ ಆರಂಭವಾಗಿತ್ತು. ಈಗ ಗೋವಾ ಮುಂಗಾರು ಅಧಿವೇಶನ ಈಗಷ್ಟೇ ಮುಗಿದಿದ್ದು, ಮುರ್ಮು ಮುಂದಿನ ವಾರ ಗೋವಾಕ್ಕೆ ಬರಲಿದ್ದಾರೆ.
ವಿವಿಐಪಿ ಪ್ರವಾಸದಿಂದಾಗಿ ಅಧಿಕಾರಿಗಳ ರಜೆ ರದ್ದಾಗಿದೆ…
ರಾಷ್ಟ್ರಪತಿ ದ್ರೌಪದಿ ಮುರ್ಮು ಗೋವಾಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಗಳು, ಎಲ್ಲ ಇಲಾಖೆಗಳ ಮುಖ್ಯಸ್ಥರು, ಆಡಳಿತದ ಹಿರಿಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯದರ್ಶಿಗಳ ರಜೆ ರದ್ದುಗೊಳಿಸಲಾಗಿದೆ. ಸಿಬ್ಬಂದಿ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆ. 24ರವರೆಗೆ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ.
ರಾಷ್ಟ್ರಪತಿ ಭೇಟಿಯ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧವೂ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.