![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 21, 2023, 3:11 PM IST
ಹೊಸದಿಲ್ಲಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.
ಮೇ 28 ರಂದು ನೂತನವಾಗಿ ನಿರ್ಮಿಸಲಾಗಿರುವ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಳೆದ ಗುರುವಾರ ಮೋದಿ ಅವರನ್ನು ಭೇಟಿಯಾಗಿ ಹೊಸ ಕಟ್ಟಡವನ್ನು ಉದ್ಘಾಟಿಸಲು ಆಹ್ವಾನವನ್ನು ನೀಡಿದರು ಎಂದು ಲೋಕಸಭೆ ಸಚಿವಾಲಯ ತಿಳಿಸಿದೆ.
ಟ್ವಿಟರ್‌ನಲ್ಲಿ ರಾಹುಲ್ ಗಾಂಧಿ, “ರಾಷ್ಟ್ರಪತಿಗಳು ಹೊಸ ಸಂಸತ್ ಭವನವನ್ನು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ” ಎಂದು ಹೇಳಿದ್ದಾರೆ.
ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆಯು ಹಿಂದುತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್ ಅವರ ಜನ್ಮ ದಿನಾಚರಣೆಯಂದು ನಡೆಯಲಿದೆ. ಹಲವಾರು ವಿರೋಧ ಪಕ್ಷಗಳು ಈ ಬಗ್ಗೆ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದು, ಕಾಂಗ್ರೆಸ್ ಇದನ್ನು ದೇಶದ ಸ್ಥಾಪಕ ಪಿತಾಮಹರಿಗೆ “ಸಂಪೂರ್ಣ ಅವಮಾನ” ಎಂದು ಕರೆದಿದೆ.
ಹೊಸ ಸಂಸತ್ ಕಟ್ಟಡವು ಲೋಕಸಭೆಯ ಚೇಂಬರ್‌ನಲ್ಲಿ 888 ಸದಸ್ಯರು ಮತ್ತು ರಾಜ್ಯಸಭಾ ಚೇಂಬರ್‌ನಲ್ಲಿ 300 ಸದಸ್ಯರು ಆರಾಮವಾಗಿ ಕುಳಿತುಕೊಳ್ಳಬಹುದು ಎಂದು ಲೋಕಸಭೆ ಸಚಿವಾಲಯ ತಿಳಿಸಿದೆ.
ಉಭಯ ಸದನಗಳ ಜಂಟಿ ಅಧಿವೇಶನದ ಸಂದರ್ಭದಲ್ಲಿ, ಲೋಕಸಭೆಯ ಕೊಠಡಿಯಲ್ಲಿ ಒಟ್ಟು 1,280 ಸದಸ್ಯರಿಗೆ ಅವಕಾಶ ಕಲ್ಪಿಸಬಹುದು. ಪ್ರಧಾನಿಯವರು ಡಿಸೆಂಬರ್ 10, 2020 ರಂದು ಹೊಸ ಸಂಸತ್ತಿನ ಕಟ್ಟಡದ ಶಂಕುಸ್ಥಾಪನೆ ಮಾಡಿದ್ದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.