ಸುಗ್ರೀವಾಜ್ಞೆಗೆ ಗ್ರೀನ್ ಸಿಗ್ನಲ್;ಆದ್ರೆ ತಮಿಳುನಾಡಿನಲ್ಲಿ ಪ್ರತಿಭಟನೆ
Team Udayavani, Jan 21, 2017, 12:48 PM IST
ಚೆನ್ನೈ:ಜನಪ್ರಿಯ ಗೂಳಿ ಕ್ರೀಡೆಯಾದ ನಿಷೇಧಿತ ಜಲ್ಲಿಕಟ್ಟು ಪರ ಜನಾಕ್ರೋಶ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಸರ್ಕಾರ ಕೊನೆಗೂ ಸುಗ್ರೀವಾಜ್ಞೆ ಹೊರಡಿಸಲು ಅನುಮೋದನೆ ನೀಡಿತ್ತು. ಆದರೆ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಪರ ಪ್ರತಿಭಟನೆ ಶನಿವಾರವೂ ಮುಂದುವರಿಯುವ ಮೂಲಕ 5ನೇ ದಿನಕ್ಕೆ ಕಾಲಿಟ್ಟಿದೆ.
ಸಾಂಪ್ರದಾಯಿಕ ಕ್ರೀಡೆಯ ಬಗ್ಗೆ ತಮಿಳುನಾಡಿನ ಜನರ ಭಾವನೆ ಅರ್ಥವಾಗಿದ್ದು, ಆ ನಿಟ್ಟಿನಲ್ಲಿ ಜಲ್ಲಿಕಟ್ಟು ಕ್ರೀಡೆ ಮೇಲಿನ ನಿಷೇಧ ತೆರವಿಗೆ ಎಲ್ಲಾ ರೀತಿಯಲ್ಲೂ ಸಹಕರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರಿಗೆ ಭರವಸೆ ನೀಡಿದ್ದರು. ಅದರಂತೆ ಕೇಂದ್ರ ಸರ್ಕಾರ ಜಲ್ಲಿಕಟ್ಟು ನಡೆಸಲು ಅಧ್ಯಾದೇಶಕ್ಕೆ ಅನುಮೋದನೆ ನೀಡಿತ್ತು. ಈಗ ಅದಕ್ಕೆ ರಾಷ್ಟ್ರಪತಿಗಳ ಅಂಕಿತ ದೊರೆಕಿ, ಬಳಿಕ ರಾಜ್ಯಪಾಲರು ಅಧಿಸೂಚನೆ ಹೊರಡಿಸಬೇಕಾಗಿದೆ.
ಆ ನಿಟ್ಟಿನಲ್ಲಿ ತಮಿಳುನಾಡಿನ ಮರೀನಾ ಬೀಚ್ ನಲ್ಲಿ ಜಲ್ಲಿಕಟ್ಟು ಕ್ರೀಡೆ ಮೇಲಿನ ನಿಷೇಧ ತೆರವಿನ ಬಗ್ಗೆ ಅಧಿಕೃತವಾಗಿ ಆದೇಶ ಹೊರಬೀಳುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಲಕ್ಷಾಂತರ ಮಂದಿ ಪಟ್ಟುಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Devotee: ಟೆಂಪಲ್ ರನ್ ಎನ್ನುವುದಾದರೆ ದೇಗುಲಗಳನ್ನು ಮುಚ್ಚಿಬಿಡಿ: ಡಿ.ಕೆ.ಶಿವಕುಮಾರ್
Jai Hanuman: ರಿಷಬ್ ಶೆಟ್ಟಿ ಚಿತ್ರತಂಡದ ವಿರುದ್ಧ ದೂರು
Threat: ಹೆಬ್ಬಾಳ್ಕರ್ ಕ್ಷಮೆ ಕೇಳದೆ ಹೋದ್ರೆ ಹತ್ಯೆ: ಸಿ.ಟಿ.ರವಿಗೆ ಬೆದರಿಕೆ ಪತ್ರ ರವಾನೆ
Daily Horoscope: ವಸ್ತ್ರ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಆರೋಗ್ಯ ತಕ್ಕಮಟ್ಟಿಗೆ ಉತ್ತಮ
Naxal Surrender: ‘ಶರಣಾಗುವಾಗ ಬಂದೂಕು ಹಿಡಿದುಕೊಂಡು ಬರುತ್ತಾರಾ?’: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.