ರಾಷ್ಟ್ರಪತಿ ಚುನಾವಣೆ ಜೂನ್ 23ಕ್ಕೆ ಅಭ್ಯರ್ಥಿ ಘೋಷಣೆ?
Team Udayavani, Jun 15, 2017, 3:45 AM IST
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಅತ್ತ ರಾಜಕೀಯ ಪಕ್ಷಗಳೂ ಬಿರುಸಿನ ಚಟುವಟಿಕೆ ಆರಂಭಿಸಿವೆ. ಎಲ್ಲವೂ ಅಂದುಕೊಂಡಂತಾದರೆ ಇದೇ 23 ರಂದು ಅಧಿಕೃತವಾಗಿ ಅಭ್ಯರ್ಥಿಯ ಹೆಸರು ಹೊರಬೀಳಲಿದೆ.
ಸದ್ಯದ ಮಟ್ಟಿಗೆ ಸರ್ವಸಮ್ಮತ ಅಭ್ಯರ್ಥಿಯ ಬಗ್ಗೆಯೇ ಸಾಕಷ್ಟು ಚರ್ಚೆಗಳಾಗುತ್ತಿವೆ. ಇದು ಶುಕ್ರವಾರ ಹೆಚ್ಚು ಕಡಿಮೆ ಗೊತ್ತಾಗಲಿದೆ. ರಾಷ್ಟ್ರಪತಿ ಚುನಾವಣಾ ಸಂಧಾನಕ್ಕಾಗಿಯೇ ನಿಯೋಜಿತವಾಗಿರುವ ಬಿಜೆಪಿ ಸಮಿತಿಯ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್ ಮತ್ತು ವೆಂಕಯ್ಯನಾಯ್ಡು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.
ಇನ್ನು ಪ್ರತಿಪಕ್ಷಗಳ ಕಡೆಯಿಂದ ರಚಿತವಾಗಿರುವ 10 ಸದಸ್ಯರ ಸಮಿತಿಯೂ ಬುಧವಾರ ಸಂಜೆ ರಾಷ್ಟ್ರಪತಿ ಚುನಾವಣೆ ಕುರಿತಂತೆ ಚರ್ಚಿಸಿದೆ. ಆದರೆ ಈ ಸಭೆಯಲ್ಲಿ ಅಭ್ಯರ್ಥಿ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಸರ್ಕಾರದ ಕಡೆಯಿಂದ ಯಾವ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂಬುದನ್ನು ನೋಡಿಕೊಂಡು ತಮ್ಮ ಅಭ್ಯರ್ಥಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಆಜಾದ್ ಹೇಳಿದ್ದಾರೆ.
ಮಾತು ಆರಂಭಿಸಿದ ಬಿಜೆಪಿ
ಸದ್ಯ ಅರುಣ್ ಜೇಟ್ಲಿ ಅವರು ವಿದೇಶ ಪ್ರವಾಸದಲ್ಲಿದ್ದು, ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿಲ್ಲ. ಆದರೆ ರಾಜನಾಥ್ ಸಿಂಗ್ ಮತ್ತು ವೆಂಕಯ್ಯ ನಾಯ್ಡು ಅವರು ಮೊದಲ ಸುತ್ತಿನ ಮಾತುಕತೆ ಆರಂಭಿಸಿದ್ದಾರೆ. ಎನ್ಸಿಪಿಯ ಪ್ರಫುಲ್ಲ ಪಟೇಲ್ ಮತ್ತು ಬಿಎಸ್ಪಿಯ ಸತೀಶ್ ಚಂದ್ರ ಶರ್ಮ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಎನ್ಡಿಎ ಅಭ್ಯರ್ಥಿಯ ಬಗ್ಗೆ ನೋಡಿಕೊಂಡು ನಂತರ ತಮ್ಮ ಆಯ್ಕೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಜೂ.23ಕ್ಕೆ ಅಭ್ಯರ್ಥಿ ಘೋಷಣೆ
ಇದುವರೆಗೆ ಆಗಿರುವ ವಿದ್ಯಮಾನಗಳ ಬಗ್ಗೆ ವೆಂಕಯ್ಯ ನಾಯ್ಡು ಮತ್ತು ರಾಜನಾಥ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ವಿವರಣೆ ನೀಡಿದ್ದಾರೆ ಎಂದು ಹೇಳಲಾಗಿದೆ. ಜೂ 25 ರಿಂದ ಎರಡು ದಿನ ಮೋದಿ ಅವರು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಅದಕ್ಕೂ ಮುನ್ನವೇ ಅಭ್ಯರ್ಥಿಯ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ವಿಪಕ್ಷ ನಾಯಕರು ಗಾಂಧೀಜಿ ಅವರ ಮೊಮ್ಮೊಗ ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ತೇಲಿಬಿಟ್ಟಿದ್ದಾರೆ ಎಂದು ಹೇಳಲಾಗಿದ್ದು, ಈ ಹೆಸರಿಗೆ ಸರ್ಕಾರದ ಕಡೆಯಿಂದ ಒಪ್ಪಿಗೆ ಸಿಕ್ಕಿಲ್ಲ. ಹೀಗಾಗಿ, ಒಂದು ವೇಳೆ ಚುನಾವಣೆ ನಡೆದರೂ, ಅದು ಗೋಪಾಲ ಕೃಷ್ಣ ಗಾಂಧಿ ಮತ್ತು ಎನ್ಡಿಎ ಅಭ್ಯರ್ಥಿ ನಡುವೆಯೇ ನಡೆಯಲಿದೆ ಎನ್ನಲಾಗಿದೆ.
ಸದ್ಯದ ಮಟ್ಟಿಗೆ ಎನ್ಡಿಎ ಪಾಲಿಗೆ ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಕಷ್ಟವೇನಲ್ಲ. ಈಗಿರುವ ನಂಬರ್ ಪ್ರಕಾರ, ಸರ್ಕಾರದ ಪಾಲಿಗೆ ಕೇವಲ 11 ಸಾವಿರ ಮತ ಬೇಕು. ಅಲ್ಲದೆ ಎನ್ಡಿಎ ಮೈತ್ರಿಕೂಟದಲ್ಲಿರುವ ಎಲ್ಜೆಪಿ ಈಗಾಗಲೇ ಮೋದಿ ಅವರು ಆರಿಸುವ ಅಭ್ಯರ್ಥಿಗೇ ಮತ ಎಂದು ಸ್ಪಷ್ಟವಾಗಿ ಹೇಳಿದೆ. ಶಿವಸೇನೆ ಕೈಕೊಟ್ಟರೂ, ಟಿಆರ್ಎಸ್ ಮತ್ತು ವೈಎಸ್ಆರ್ ಕಾಂಗ್ರೆಸ್ ಮೇಲೆ ಎನ್ಡಿಎ ಕಣ್ಣಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರ ಬಂಧನ
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರ ಬಂಧನ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.