ಪ್ರಧಾನಿ ಮೋದಿ ಭರ್ಜರಿ ಕೊಡುಗೆ

60 ವರ್ಷ ಮೇಲ್ಪಟ್ಟ ರೈತರಿಗೆ, ವರ್ತಕರಿಗೆ 3 ಸಾವಿರ ರೂಪಾಯಿ ಪಿಂಚಣಿ

Team Udayavani, Jun 1, 2019, 6:00 AM IST

e-33

ಹೊಸದಿಲ್ಲಿ: ಎಲ್ಲ ರೈತರಿಗೆ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ವಿಸ್ತರಣೆ, ಭಯೋತ್ಪಾದಕರ ಮತ್ತು ನಕ್ಸಲ್‌ ದಾಳಿಯಲ್ಲಿ ಹುತಾತ್ಮರಾಗುವ ರಾಜ್ಯ ಪೊಲೀಸರಿಗೂ ಪ್ರಧಾನಮಂತ್ರಿ ವಿದ್ಯಾರ್ಥಿ ವೇತನ ಯೋಜನೆ ಅನ್ವಯ, ರೈತ ರು ಹಾಗೂ ವರ್ತಕರಿಗಾಗಿ ಪಿಂಚಣಿ ಯೋಜನೆ… ಹೀಗೆ ನಾಲ್ಕು ಭರ್ಜರಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

ಎರಡನೇ ಅವಧಿಗಾಗಿ ಅಧಿಕಾರ ವಹಿಸಿ ಕೊಂಡಿ ರುವ ಮೋದಿ ನೇತೃತ್ವದ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಪ್ರಧಾನಮಂತ್ರಿ ಕಿಸಾನ್‌ ಯೋಜನೆಯನ್ನು ಎಲ್ಲ ರೈತರಿಗೆ ವಿಸ್ತರಿಸುವ ಬಗ್ಗೆ ತೀರ್ಮಾನ ಕೈಗೊಂಡಿದೆ. ಇದರಿಂದಾಗಿ 14.5 ಕೋಟಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರಿಗೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಸಂಪುಟ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 2 ಹೆಕ್ಟೇರ್‌ವರೆಗೆ ಜಮೀನು ಇರುವ ರೈತರಿಗೆ ಈ ಯೋಜನೆಯ ಲಾಭ ಸಿಗಲಿದೆ. ಕೇಂದ್ರ ಬೊಕ್ಕಸಕ್ಕೆ ಇದರಿಂದ ವಾರ್ಷಿಕವಾಗಿ 87 ಸಾವಿರ ಕೋಟಿ ರೂ.ಹೊರೆಯಾಗಲಿದೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಸಿದ್ಧಿ (ಪಿಎಂ- ಕಿಸಾನ್‌) ಯೋಜನೆಯನ್ನು ಫೆಬ್ರ ವರಿ ಯಲ್ಲಿ ಮಂಡಿಸಲಾಗಿದ್ದ ಮಧ್ಯಂತರ ಬಜೆಟ್‌ ನಲ್ಲಿ ಪ್ರಕಟಿಸಲಾಗಿತ್ತು. ಅರ್ಹ ರೈತರ ಖಾತೆಗೆ ಪ್ರತಿ ವರ್ಷ 6 ಸಾವಿರ ರೂ. ನೀಡುವ ವಾಗ್ಧಾನ ಮಾಡಲಾಗಿತ್ತು. ಈ ಯೋಜನೆಗೆ ರೈತರ ವಯಸ್ಸಿಗೆ ಅನುಗುಣವಾಗಿ ಪ್ರೀಮಿಯಂ ಪಾವತಿಸಬೇಕಾಗಿರುತ್ತದೆ.

ಕಿಸಾನ್‌ ಪಿಂಚಣಿ ಯೋಜನೆ
ಮತ್ತೂಂದು ಪ್ರಮುಖ ನಿರ್ಧಾರದಲ್ಲಿ ಕೇಂದ್ರ ಸಂಪುಟ ಪ್ರಧಾನ ಮಂತ್ರಿ ಕಿಸಾನ್‌ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿದೆ. ಸಣ್ಣ ಮತ್ತು ಮಧ್ಯಮ ರೈತರಿಗೆ ವಿಶೇಷ ವಾಗಿ 60 ವರ್ಷ ಮೇಲ್ಪಟ್ಟ ರೈತರಿಗೆ ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ನೀv ‌ಲಾಗುತ್ತದೆ. ಈ ಯೋಜನೆಯಿಂದ ಮೊದಲ ಹಂತದಲ್ಲಿ 5 ಕೋಟಿ ರೈತರಿಗೆ ಪ್ರಯೋಜನವಾಗಲಿದೆ. ಅದಕ್ಕಾಗಿ 10 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಎಂದು ತೋಮರ್‌ ತಿಳಿಸಿದರು.

ವರ್ತಕರಿಗೆ ಪಿಂಚಣಿ
ಚಿಲ್ಲರೆ ಮಾರಾಟಗಾರರಿಗೆ, ಸ್ವಯಂ ಉದ್ಯೋಗ ನಡೆಸುವವರಿಗೆ, ಅಂಗಡಿ ಮಾಲಕರಿಗೆ ಮಾಸಿಕ 3 ಸಾವಿರ ರೂ. ಪಿಂಚಣಿ ನೀಡುವ ಯೋಜನೆಗೆ ಸಮ್ಮತಿ ಸೂಚಿಸಲಾಗಿದೆ. 60 ವರ್ಷ ಪೂರ್ತಿಯಾದ ಬಳಿಕ ಇದರ ಲಾಭ ಸಿಗಲಿದೆ. ಹೊಸ ಯೋಜನೆಯಿಂದಾಗಿ 3 ಕೋಟಿ ಮಂದಿಗೆ ಲಾಭವಾಗಲಿದೆ. ಮುಂದಿನ ಮೂರು ವರ್ಷಗಳಲ್ಲಿ ಐದು ಕೋಟಿ ಮಂದಿ ಯೋಜನೆಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌ ತಿಳಿಸಿದರು. ವಾರ್ಷಿಕವಾಗಿ 1.5 ಕೋಟಿ ರೂ.ಗಿಂತ ಕಡಿಮೆ ಜಿಎಸ್‌ಟಿ ಮತ್ತು 18-40 ವರ್ಷ ವಯೋಮಿತಿಯುಳ್ಳವರು ಯೋಜನೆ ವ್ಯಾಪ್ತಿಗೆ ಬರಲು ಅರ್ಹರಾಗಿರುತ್ತಾರೆ.

ಪ್ರಧಾನಿ ಮೋದಿ ವಿದ್ಯಾರ್ಥಿ ವೇತನ ಪರಿಷ್ಕರಿಸುವ ಆದೇಶಕ್ಕೆ ಮೊದಲು ಸಹಿ ಹಾಕಿದ್ದಾರೆ. ಇದಾದ ಬಳಿಕ ಟ್ವೀಟ್‌ ಮಾಡಿರುವ ಅವರು “ದೇಶ ರಕ್ಷಣೆ ಮಾಡುವವರಿಗೆ ಮೊದಲ ಆದ್ಯತೆ’ ಎಂದು ಪ್ರಧಾನಿ ನರೇಂದ್ರ ಮೋದಿ ಬರೆದುಕೊಂಡಿದ್ದಾರೆ. ಹಿಂದಿನ ಸಂದರ್ಭಗಳಲ್ಲಿ ಉಗ್ರವಾದಿಗಳು ಮತ್ತು ನಕ್ಸಲರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ರಾಜ್ಯಗಳ ಪೊಲೀಸ್‌ ಸಿಬಂದಿ ಹುತಾತ್ಮರಾಗಿದ್ದರೆ, ಅವರ ಮಕ್ಕಳಿಗೆ ರಾಷ್ಟ್ರೀಯ ರಕ್ಷಣಾ ನಿಧಿ ವ್ಯಾಪ್ತಿಯಲ್ಲಿ ನೆರವು ಸಿಗುತ್ತಿರಲಿಲ್ಲ. 2008ರಲ್ಲಿ ಮುಂಬೈಗೆ ಪಾಕ್‌ ಪ್ರೇರಿತ ಉಗ್ರರು ದಾಳಿ ನಡೆಸಿದ್ದ ವೇಳೆ ಹುತಾತ್ಮರಾಗಿದ್ದ ಪೊಲೀಸ್‌ ಕಾನ್‌ಸ್ಟೆàಬಲ್‌ ತುಕಾರಾಮ ಓಂಬ್ಲೆ ಪುತ್ರನಿಗೆ ಈ ನಿಧಿಯಿಂದ ನೆರವು ಪಡೆಯಲು ಸಾಧ್ಯವಾಗಿರಲಿಲ್ಲ.

1962ರಲ್ಲಿ ಸ್ಥಾಪನೆ
ರಾಷ್ಟ್ರೀಯ ರಕ್ಷಣಾ ನಿಧಿ (ಎನ್‌ಡಿಎಫ್) ಅನ್ನು 1962ರಲ್ಲಿ ಸ್ಥಾಪಿಸಲಾಗಿತ್ತು. ಸ್ವಯಂಪ್ರೇರಿತವಾಗಿ ನಗದು ರೂಪದಲ್ಲಿ ನೀಡುವ ದೇಣಿಗೆಗಳನ್ನು ಸ್ವೀಕರಿಸುವ ನಿಟ್ಟಿನಲ್ಲಿ ಅದನ್ನು ಆರಂಭಿಸಲಾಯಿತು. ಪಿಎಂಎಸ್‌ಎಸ್‌ನಿಂದ ಹುತಾತ್ಮಾರಾದ ಯೋಧರ ಮಕ್ಕಳಿಗೆ ಎಂಜಿನಿಯರಿಂಗ್‌, ಮೆಡಿಕಲ್‌, ಎಂಬಿಎ, ಎಂಸಿಎ ಮತ್ತು ಇತರ ತಾಂತ್ರಿಕ ಕೋರ್ಸ್‌ಗಳನ್ನು ಕಲಿಯಲು ಅನುಕೂಲವಾಗುತ್ತದೆ.

ಹೊಸ ಯೋಜನೆಗೆ ಅಂಗೀಕಾರ
ಜಾನುವಾರುಗಳಲ್ಲಿ ಕಂಡುಬರುವ ಕಾಲು ಬಾಯಿ ರೋಗ, ಬ್ರುಕಲೋಸಿಸ್‌ ನಿಯಂತ್ರಣಕ್ಕೆ ವಿಶೇಷ ಯೋಜನೆಗೆ ಕೇಂದ್ರ ಸಂಪುಟ ಅನುಮೋ ದನೆ ನೀಡಿದೆ. ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಪ್ರಕಾಶ್‌ ಜಾಬ್ಡೇಕರ್‌ ಈ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿ ವೇತನ ಯೋಜನೆ ವಿಸ್ತರಣೆ
ಭಯೋತ್ಪಾದಕರ ಮತ್ತು ನಕ್ಸಲ್‌ ದಾಳಿಯಲ್ಲಿ ಹುತಾತ್ಮರಾದ ಸೇನಾ ಸಿಬಂದಿಯ ಮಕ್ಕಳಿಗೆ ನೀಡಲಾಗುವ ಪ್ರಧಾನಮಂತ್ರಿ ವಿದ್ಯಾರ್ಥಿ ವೇತನ ಯೋಜನೆ (ಪಿಎಂಎಸ್‌ಎಸ್‌) ಸೌಲಭ್ಯವನ್ನು ಇನ್ನು ಮುಂದೆ ರಾಜ್ಯ ಪೊಲೀಸರಿಗೂ ವಿಸ್ತರಿಸಲಾಗುತ್ತದೆ. ಅದನ್ನು ರಾಷ್ಟ್ರೀಯ ರಕ್ಷಣಾನಿಧಿ (ನ್ಯಾಷನಲ್‌ ಡಿಫೆನ್ಸ್‌ ಫ‌ಂಡ್‌)ಯಿಂದ ಭರಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೊದಲ ಸಂಪುಟ ಸಭೆ ಅಂಗೀಕಾರ ನೀಡಿದೆ. ಮಾತ್ರವಲ್ಲದೆ ಸ್ಕಾಲರ್‌ಶಿಪ್‌ ಮೊತ್ತವನ್ನು ಬಾಲಕರಿಗೆ 2 ಸಾವಿರ ರೂ.ಗಳಿಂದ 2,500 ರೂ. ಮತ್ತು ಬಾಲಕಿಯರಿಗೆ 2,250ರಿಂದ 3 ಸಾವಿರ ರೂ.ಗಳ ವರೆಗೆ ಪರಿಷ್ಕರಿಸುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗಿದೆ.

ಜು.5ರಂದು ಬಜೆಟ್‌
ಸಂಸತ್‌ನ ಬಜೆಟ್‌ ಅಧಿವೇಶನ ಜೂ.17ರಿಂದ ಜು.26ರ ವರೆಗೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್‌ ಜೂ.20ರಂದು ಜಂಟಿ ಅಧಿವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌ ತಿಳಿಸಿದ್ದಾರೆ. ಹಣಕಾಸು ಸಚಿವ ರಾಗಿರುವ ನಿರ್ಮಲಾ ಸೀತಾ ರಾಮನ್‌ ಇದೇ ಮೊದಲ ಬಾರಿಗೆ ಜು.5ರಂದು ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಿದ್ದಾರೆ. ಜು.4ರಂದು ಆರ್ಥಿಕ ಸಮೀಕ್ಷೆ ಮಂಡಿಸಲಾಗುತ್ತದೆ. ಜೂ.19ರಂದು ಲೋಕಸಭೆಯ ನೂತನ ಸ್ಪೀಕರ್‌ ಆಯ್ಕೆ ನಡೆಯಲಿದೆ ಎಂದಿದ್ದಾರೆ. ಫೆ.1ರಂದು ಹಣಕಾಸು ಸಚಿವರಾಗಿದ್ದ ಪಿಯೂಷ್‌ ಗೋಯಲ್‌ ಮಧ್ಯಂತರ ಬಜೆಟ್‌ ಮಂಡಿಸಿದ್ದರು.

ಟಾಪ್ ನ್ಯೂಸ್

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.