Ladakh: ಸೇನಾ ಟ್ರಕ್ ಉರುಳಿ ಬಿದ್ದು 9 ಯೋಧರು ಹುತಾತ್ಮ: ಪ್ರಧಾನಿ ಮೋದಿ ಸಂತಾಪ
Team Udayavani, Aug 20, 2023, 8:57 AM IST
ಲಡಾಕ್: ಸೇನಾ ವಾಹನ ನದಿಗೆ ಉರುಳಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿ ಎಂಟು ಜವಾನರು ಹುತಾತ್ಮರಾಗಿದ್ದು ಈ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಲೇಹ್ ಬಳಿ ನಡೆದ ದುರ್ಘಟನೆಯಲ್ಲಿ ನಾವು ನಮ್ಮ ಭಾರತೀಯ ಸೇನೆಯ ಸಿಬ್ಬಂದಿಗಳನ್ನು ಕಳೆದುಕೊಂಡಿದ್ದೇವೆ ಎಂದು ಹೇಳಲು ನೋವಾಗುತ್ತಿದೆ. ದೇಶಕ್ಕೆ ಅವರು ನೀಡಿರುವ ಉತ್ಕೃಷ್ಟ ಸೇವೆ ಸದಾ ಸ್ಮರಣೀಯ. ಮೃತ ಕುಟುಂಬಗಳಿಗೆ ಸಂತಾಪಗಳು ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಟ್ವಿಟರ್ ಏಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲೇಹ್‌ನಿಂದ 150 ಕಿಮೀ ದೂರದಲ್ಲಿರುವ ಕಿಯಾರಿಯಲ್ಲಿ ಸಂಜೆ 4.45ಕ್ಕೆ ಅಪಘಾತ ಸಂಭವಿಸಿದೆ ಎಂದು ಲೇಹ್‌ನಲ್ಲಿರುವ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪಿಡಿ ನಿತ್ಯಾ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಟ್ರಕ್‌ನಲ್ಲಿ 10 ಸೈನಿಕರು ಪ್ರಯಾಣಿಸುತ್ತಿದ್ದರು ಮತ್ತು ಬೆಂಗಾವಲು ಪಡೆಯಲ್ಲಿ ಐದು ವಾಹನಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರ್ಘಟನೆಯಲ್ಲಿ ಇನ್ನೂ ಒಬ್ಬ ಜವಾನ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Pained by the mishap near Leh in which we have lost personnel of the Indian Army. Their rich service to the nation will always be remembered. Condolences to the bereaved families. May those who are injured recover at the earliest: PM @narendramodi
— PMO India (@PMOIndia) August 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.