50 ಸಾವಿರ ಕೋಟಿ ರೂಪಾಯಿ ಮೊತ್ತದ ಗರೀಬ್ ಕಲ್ಯಾಣ್ ರೋಜ್ ಗಾರ್ ಅಭಿಯಾನಕ್ಕೆ ಪ್ರಧಾನಿ ಚಾಲನೆ
Team Udayavani, Jun 20, 2020, 1:43 PM IST
ನವದೆಹಲಿ: ಕೋವಿಡ್ 19 ಸಂಬಂಧಿತ ಲಾಕ್ ಡೌನ್ ಕಾರಣದಿಂದ ಸಂಕಷ್ಟಕ್ಕೊಳಗಾಗಿರುವ ಕಾರ್ಮಿಕರ ಸಂಕಷ್ಟಕ್ಕೆ ಕೇಂದ್ರ ಸ್ಪಂದಿಸಿದೆ.
ಈ ಉದ್ದೇಶಕ್ಕಾಗಿ ‘ಆತ್ಮ ನಿರ್ಭರ ಭಾರತ ಅಬಿಯಾನ’ದಡಿಯಲ್ಲಿ ಘೋಷಿತ ಆರ್ಥಿಕ ಪ್ಯಾಕೇಜ್ ನಲ್ಲಿ ಪ್ರಕಟಿಸಲಾಗಿದ್ದ 50 ಸಾವಿರ ಕೋಟಿ ರೂಪಾಯಿಳ ಬೃಹತ್ ‘ಗರೀಬ್ ಕಲ್ಯಾಣ ರೋಜ್ ಗಾರ್ ಯೋಜನೆ’ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದ್ದಾರೆ.
ಲಾಕ್ ಡೌನ್ ಕಾರಣದಿಂದ ತಮ್ಮ ಸ್ವಗ್ರಾಮಗಳಿಗೆ ಹಿಂತಿರುಗಿರುವ ಲಕ್ಷಾಂತರ ವಲಸೆ ಕಾರ್ಮಿಕರಿಗೆ ಉದ್ಯೋಗವನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಈ ಯೊಜನೆ ಸಹಕಾರಿಯಾಗಲಿದೆ.
ಪ್ರಧಾನ ಮಂತ್ರಿಯವರು ವರ್ಚ್ಯುವಲ್ ಸಭೆಯ ಮೂಲಕ ಇಂದು ಈ ಯೋಜನೆಗೆ ಚಾಲನೆ ನೀಡಿದರು. ಇದರ ಮೂಲಕ ಆರು ರಾಜ್ಯಗಳ 116 ಜಿಲ್ಲೆಗಳಲ್ಲಿ ಈ ಯೋಜನೆ ಮುಂದಿನ 125 ದಿನಗಳ ಕಾಲ ಒಂದು ಅಭಿಯಾನದ ರೂಪದಲ್ಲಿ ಕಾರ್ಯಾಚರಿಸಲಿದೆ.
ಬಿಹಾರದ ಖಗಾರಿಯಾ ಜಿಲ್ಲೆಯ ತೆಲಿಹಾರ್ ಗ್ರಾಮದಿಂದ ಈ ಯೋಜನೆ ಪ್ರಾರಂಭಗೊಂಡಿದ್ದು, ಬಿಹಾರ್, ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ಜಾರ್ಖಂಡ್ ಹಾಗೂ ಒಡಿಸ್ಸಾ ರಾಜ್ಯಗಳ 116 ಜಿಲ್ಲೆಗಳನ್ನು ಈ ಯೋಜನೆ ಒಳಗೊಳ್ಳಲಿದೆ.
‘ನಿಮ್ಮ ಭಾವನೆ ಹಾಗೂ ಅವಶ್ಯಕತೆಗಳನ್ನು ಈ ದೇಶವು ಅರ್ಥಮಾಡಿಕೊಳ್ಳುತ್ತದೆ. ಮತ್ತು ಈ ಅವಶ್ಯಕತೆ ಹಾಗೂ ಭಾವನೆಗಳನ್ನು ಸಾಕಾರಗೊಳಿಸುವ ಉದ್ದೇಶದಿಂದ ಗರೀಬ್ ಕಲ್ಯಾಣ್ ರೋಜ್ ಗಾರ್ ಅಭಿಯಾನ ಇದೀಗ ಬಿಹಾರದ ಖಗಾರಿಯಾ ಜಿಲ್ಲೆಯಿಂದ ಪ್ರಾರಂಭಗೊಳ್ಳುತ್ತಿದೆ’ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಅಭಿಯಾನಕ್ಕೆ ಚಾಲನೆ ನೀಡುತ್ತಾ ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಧಾನಿಯವರು ವಿವಿಧ ರಾಜ್ಯಗಳಿಗೆ ವಲಸೆ ಹೋಗಿದ್ದು ಇದೀಗ ಲಾಕ್ ಡೌನ್ ಕಾರಣದಿಂದ ತಮ್ಮ ಸ್ವಂತ ರಾಜ್ಯ ಬಿಹಾರಕ್ಕೆ ವಾಪಾಸಾಗಿರುವ ಹಲವು ವಲಸೆ ಕಾರ್ಮಿಕರೊಂದಿಗೆ ವಿಡಿಯೋ ಕಾನ್ಫೆರೆನ್ಸ್ ನಲ್ಲೇ ಮಾತನಾಡಿದರು.
ಈ ಲಾಕ್ ಡೌನ್ ಬಳಿಕ ಸುಮಾರು 30 ಲಕ್ಷಕ್ಕೂ ಅಧಿಕ ಬಿಹಾರ ರಾಜ್ಯದ ವಲಸೆ ಕಾರ್ಮಿಕರು ತಮ್ಮ ರಾಜ್ಯಕ್ಕೆ ವಾಪಾಸಾಗಿದ್ದರು.
ಈ ಯೋಜನೆಯ ಉದ್ಘಾಟನೆಯ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹಿತ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.