ತಾರಕೇಶ್ವರದಲ್ಲಿಂದು ಮೋದಿ-ದೀದಿ ಮುಖಾಮುಖಿ.?ಕುತೂಹಲ ಹೆಚ್ಚಿಸಿದೆ ಉಭಯ ನಾಯಕರ ಪ್ರಚಾರ ಸಭೆ
Team Udayavani, Apr 3, 2021, 1:09 PM IST
ತಾರಕೇಶ್ವರ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಹಾಗೂ ಬಿಜೆಪಿ ನಡುವೆ ದೊಡ್ಡ ಮಟ್ಟದಲ್ಲಿ ನೇರ ಹಣಾಹಣಿ ನಡೆಯುತ್ತಿದ್ದು, ಸದ್ಯ ಮೂರನೇ ಹಂತದ ಚುನಾವಣಾ ಪ್ರಚಾರದಲ್ಲಿ ಉಭಯ ಪಕ್ಷಗಳು ತೊಡಗಿವೆ.
ಪಶ್ಚಿಮ ಬಂಗಾಳದ ಅಧಿಕಾರ ಹಿಡಿಯಬೇಕು ಎಂಬ ಕಾರಣದಿಂದ ದೊಡ್ಡ ಮಟ್ಟದ ಚುನಾವಣಾ ಪ್ರಚಾರವನ್ನು ಮಾಡುವುದರ ಮೂಲಕ ಜನರನ್ನು ಓಲೈಸಿಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿವೆ. ದಿನನಿತ್ಯ ಪ್ರಚಾರ ಸಭೆಗಳಲ್ಲಿ ಉಭಯ ಪಕ್ಷಗಳ ಪ್ರಭಾವಿ ನಾಯಕರ ವಾಗ್ಯುದ್ಧಗಳು ಚುನಾವಣೆಯ ಬಗ್ಗೆ ಕುತೂಹಲವನ್ನು ಹೆಚ್ಚಿಸುವಂತೆ ಮಾಡುತ್ತಿವೆ.
ಓದಿ : ಈ ಪರಿಸ್ಥಿತಿಯಲ್ಲಿ ಭಾರತದ ಜತೆ ಯಾವುದೇ ವ್ಯವಹಾರ ಇಲ್ಲ: ಇಮ್ರಾನ್ ಖಾನ್
ಪಶ್ಚಿಮ ಬಂಗಾಳವನ್ನು ಬಿಟ್ಟುಕೊಡಬಾರದೆಂಬ ಪೈಪೋಟಿಯಲ್ಲಿ ಉಭಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿವೆ. ಈ ನಡುವೆ ಇಂದು ಹೂಗ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಖಾಮುಖಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ ಹೂಗ್ಲಿಯಲ್ಲಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವುದರಿಂದ ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.
ಇಂದು ಮಧ್ಯಾಹ್ನ 1:30 ರ ಹೊತ್ತಿಗೆ ಆರಬಾಂಗ್ ಲೋಕಸಭಾ ಕ್ಷೇತ್ರದ ತಾರಕೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ಸಭೆಯನ್ನು ನಡೆಸಲಿದ್ದು, 2:30 ರ ಹೊತ್ತಿಗೆ ತಾರಕೇಶ್ವರದ ಪಕ್ಕದಲ್ಲೇ ಇರುವ ಹರಿಪಾಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.
ಒಟ್ಟಿನಲ್ಲಿ, ಉಭಯ ನಾಯಕರ ಆರೋಪ, ಪತ್ಯಾರೋಪಗಳ ಬಗ್ಗೆ ಕುತೂಹಲ ಮೂಡಿಸಿದೆ.
ಓದಿ : ಈಶ್ವರಪ್ಪರನ್ನು ಉಚ್ಚಾಟಿಸಿ ಇಲ್ಲವೇ ನೀವು ರಾಜೀನಾಮೆ ನೀಡಿ: ಸಿಎಂ ಗೆ ಡಿಕೆ ಶಿವಕುಮಾರ್ ಸವಾಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.