ನಮೋ ನಿವಾಸದಲ್ಲಿ ಬಾಲಿವುಡ್ ತಾರೆಯರ ಸಮಾಗಮ ; ಇದಕ್ಕೆಲ್ಲಾ ಕಾರಣ ಗಾಂಧೀಜಿ!
Team Udayavani, Oct 19, 2019, 10:20 PM IST
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಧಾನಿ ನಿವಾಸದಲ್ಲಿ ಇಂದು ಶಾರುಕ್ ಖಾನ್, ಆಮೀರ್ ಖಾನ್ ಸೇರಿದಂತೆ ಬಾಲಿವುಡ್ ನ ಹಲವಾರು ಗಣ್ಯರು ಜಮಾಯಿಸಿದ್ದರು. ರಾಷ್ಟ್ರಪಿತ ಮಹಾತ್ಮಾ ಗಾಂಧೀ ಅವರ 150ನೇ ಜನ್ಮದಿನಾಚರಣೆ ಪ್ರಯುಕ್ತ ಪ್ರಧಾನ ಮಂತ್ರಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಬಿ-ಟೌನ್ ಇಲ್ಲಿ ನೆರೆದಿತ್ತು.
ಒಂದು ಸಾರ್ಥಕ ಉದ್ದೇಶಕ್ಕಾಗಿ ನಮ್ಮನ್ನೆಲ್ಲಾ ಒಂದೇ ವೇದಿಕೆಯಲ್ಲಿ ಒಟ್ಟು ಸೇರಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರು ಇದೇ ಸಂದರ್ಭದಲ್ಲಿ ಅಬಿಪ್ರಾಯಪಟ್ಟರು. ಮತ್ತು ಗಾಂಧೀಜಿ ಅವರ ವ್ಯಕ್ತಿತ್ವವನ್ನು ಭಾರತಕ್ಕೆ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಪುನರ್ ಪರಿಚಯಿಸುವ ಅಗತ್ಯವಿದೆ ಎಂದು ನನಗೆ ಅನ್ನಿಸುತ್ತಿದೆ ಎಂದು ಶಾರುಖ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಬಾಪು ಅವರ ಸಿದ್ಧಾಂತಗಳನ್ನು ಮತ್ತೆ ಜಗದಗಲ ಜನಪ್ರಿಯಗೊಳಿಸುವ ಆಲೋಚನೆ ಪ್ರಧಾನಮಂತ್ರಿ ಅವರ ಮನಸ್ಸಿನಲ್ಲಿ ಮೂಡಿದ್ದಕ್ಕೆ ನಾನು ಈ ಸಂದರ್ಭದಲ್ಲಿ ಅವರನ್ನು ಅಭಿನಂದಿಸುವುದಾಗಿ ಇನ್ನೋರ್ವ ನಟ ಆಮಿರ್ ಖಾನ್ ಅವರು ಹೇಳಿದರು. ಸದಾ ಕ್ರಿಯಾತ್ಮಕವಾಗಿ ಯೋಚಿಸುವ ವರ್ಗಕ್ಕೆ ಸೇರಿದವರಾದ ನಾವು ಗಾಂಧೀಜಿ ಅವರ ಚಿಂತನೆಗಳನ್ನು ಜನಪ್ರಿಯಗೊಳಿಸಲು ಸಾಕಷ್ಟು ಮಾಡಲು ಅವಕಾಶವಿದೆ. ಮತ್ತು ಈ ನಿಟ್ಟಿನಲ್ಲಿ ನಾವು ಮುಂಬರುವ ದಿನಗಳಲ್ಲಿ ಹೆಚ್ಚಿನ ಪ್ರಯತ್ನಗಳನ್ನು ನಡೆಸಲಿದ್ದೇವೆ ಎಂಬ ಭರವಸೆಯನ್ನು ನಾನು ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರಿಗೆ ನೀಡಲು ಬಯಸುತ್ತೇನೆ ಎಂದು ಆಮೀರ್ ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಕ್ರಿಯಾಶೀಲತೆ ಎನ್ನುವಂತದ್ದು ಬಹಳಷ್ಟು ಶಕ್ತಿಶಾಲಿಯಾಗಿರುವಂತದ್ದು. ಕ್ರಿಯಾಶೀಲತೆಯ ಮೂರ್ತರೂಪವೇ ಆಗಿದ್ದ ಗಾಂಧೀಜಿ ಚಿಂತನೆಗಳನ್ನು ನಾವಲ್ಲೆರೂ ತಿಳಿದುಕೊಂಡು ಅನುಸರಿಸುವ ಅಗತ್ಯವಿದೆ. ಮಹಾತ್ಮ ಗಾಂಧೀಜಿ ಅವರ ಸಿದ್ಧಾಂತಗಳನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಜಗತ್ತಿನ ಹಲವಾರು ಚಿತ್ರನಿರ್ಮಾತೃಗಳು ತಮ್ಮದೇ ಆಗಿರುವ ಕೊಡುಗೆಯನ್ನು ನೀಡಿದ್ದಾರೆ ಎಂದು ಬಾಲಿವುಡ್ ಮಂದಿಯನ್ನುದ್ದೇಶಿಸಿ ಮಾತನಾಡುತ್ತಾ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.