ಕೊರೋನಾ ಭೀತಿ: ಹೋಳಿ ಮಿಲನದಲ್ಲಿ ಪಾಲ್ಗೊಳ್ಳದಿರಲು ಮೋದಿ ನಿರ್ಧಾರ
Team Udayavani, Mar 4, 2020, 1:36 PM IST
ನವದೆಹಲಿ: ವಿಶ್ವಾದ್ಯಂತ ಕೋವಿಡ್ 19 ನೋವೆಲ್ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಹಾಗೂ ಭಾರತದಲ್ಲೂ ಕೆಲವು ಕಡೆಗಳಲ್ಲಿ ಈ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಸಾರ್ವಜನಿಕವಾಗಿ ಗುಂಪಾಗಿ ಸೇರುವುದನ್ನು ತಪ್ಪಿಸಿಕೊಳ್ಳಲು ತಾನು ಈ ಬಾರಿ ಯಾವುದೇ ಹೋಳಿ ಮಿಲನ್ ಕಾರ್ಯಕಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
Experts across the world have advised to reduce mass gatherings to avoid the spread of COVID-19 Novel Coronavirus. Hence, this year I have decided not to participate in any Holi Milan programme.
— Narendra Modi (@narendramodi) March 4, 2020
ಕೊರೋನಾ ವೈರಸ್ ವೇಗವಾಗಿ ಹರಡುವುದನ್ನು ತಡೆಗಟ್ಟಲು ಜನರು ಆದಷ್ಟು ಗುಂಪು ಸೇರುವುದನ್ನು ತಪ್ಪಿಸುವುದು ಉತ್ತಮ ಎನ್ನುವುದು ತಜ್ಞರ ಸಲಹೆಯಾಗಿರುವುದರಿಂದ ಈ ವರ್ಷ ನಾನು ಯಾವುದೇ ಹೋಳಿ ಮಿಲನ ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದ್ದೇನೆ ಎಂದು ಮೋದಿ ಅವರು ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಅದೇ ರೀತಿ ಆದಷ್ಟು ಗುಂಪು ಸೇರುವುದನ್ನು ತಪ್ಪಿಸಿಕೊಳ್ಳುವಂತೆ ಅವರು ದೇಶದ ಜನರಿಗೂ ಕರೆ ನೀಡಿದ್ದಾರೆ.
ಈ ನಡುವೆ ದೇಶದ ವಿವಿಧ ಭಾಗಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗುತ್ತಿರುವಂತೆ ಈ ವಿಚಾರದಲ್ಲಿ ಜನರು ಗಾಬರಿಗೊಳಗಾಗಬಾರದು ಎಂದು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.
Holi is a very important festival for we Indians but in the wake of Coronavirus, i have decided not to participate in any Holi Milan celebration this year.
I also appeal everyone to avoid public gatherings and take a good care of yourself & your family.
— Amit Shah (@AmitShah) March 4, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
Supreme Court: ಮಸೀದಿ ಆವರಣದೊಳಗೆ ಜೈ ಶ್ರೀರಾಮ್ ಎಂದರೆ ಅಪರಾಧವೇ: ಸುಪ್ರೀಂ
GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್‌ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.