ಕೋವಿಡ್-19 ಕಳವಳ: ಇಂದು ಬೆಳಗ್ಗೆ 9 ಗಂಟೆಗೆ ಪ್ರಧಾನಿ ಮೋದಿ ವಿಡಿಯೋ ಸಂದೇಶ
Team Udayavani, Apr 3, 2020, 8:12 AM IST
ನವದೆಹಲಿ: ಪ್ರಧಾನಿ ಮೋದಿ ಇಂದು ( ಶುಕ್ರವಾರ ) ಬೆಳಗ್ಗೆ 9 ಗಂಟೆಗೆ ದೇಶದ ಜನತೆಗಾಗಿ ವಿಡಿಯೋ ಸಂದೇಶವೊಂದನ್ನು ನೀಡಿಲಿದ್ದಾರೆ. ಈ ವಿಚಾರವನ್ನು ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
ರಾಷ್ಟ್ರಾದ್ಯಂತ ಕೋವಿಡ್-19 ವೈರಸ್ ಭೀತಿ ಹೆಚ್ಚಾಗುತ್ತಲೇ ಇದ್ದು ಸೋಂಕಿತರ ಸಂಖ್ಯೆ ಮತ್ತು ಮೃತಪಡುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಏತನ್ಮಧ್ಯೆ ಕೋವಿಡ್19 ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ವಿಡಿಯೋ ಸಂದೇಶವನ್ನು ಇಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡಲಿದ್ದಾರೆ.
ಒಂಭತ್ತು ಗಂಟೆಗೆ ನನ್ನ ದೇಶವಾಸಿಗಳಿಗೆ ಸಣ್ಣ ವಿಡಿಯೋ ಸಂದೇಶವನ್ನು ಹಂಚಿಕೊಳ್ಳಲಿದ್ದೇನೆ ಎಂದು ಪ್ರಧಾನಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ದೇಶದಲ್ಲಿ ಮಾರಕ ಸೋಂಕು ಹರಡಲು ಆರಂಭವಾದ ದಿನದಿಂದ ಈವರೆಗೆ ಪ್ರಧಾನಿ ಮೋದಿ ಅವರು ಎರಡು ಬಾರಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ದೇಶವನ್ನು 21 ದಿನಗಳ ಕಾಲ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದ್ದರು. ಮಾತ್ರವಲ್ಲದೆ ಈ ಕ್ವಾರಂಟೈನ್ ಅವಧಿಯ ಸಮರ್ಪಕ ಬಳಕೆಗೆ ಪ್ರಧಾನಿ ಮೋದಿ ಹಲವು ಸಲಹೆ ಸೂಚನೆಗಳನ್ನು ನೀಡಿದ್ದರು. ಜೊತೆಗೆ ಯೋಗಾಭ್ಯಾಸ ಹಾಗೂ ಯೋಗ ನಿದ್ರೆಗೆ ಸಂಬಂಧಿಸಿ ವಿಡಿಯೋಗಳನ್ನು ಹಂಚಿಕೊಂಡು ಫಿಟ್ನೆಸ್ ಕಾಳಜಿ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.