ಪ್ರತಿಪಕ್ಷಗಳ ಧೋರಣೆ ಖಂಡಿಸಿ ಮೋದಿ ಉಪವಾಸ;ಸಂಸದರ ಸಾಥ್
Team Udayavani, Apr 12, 2018, 10:49 AM IST
ಹೊಸದಿಲ್ಲಿ: ಸಂಸತ್ ಸುಗಮ ಕಲಾಪ ನಡೆಸಲು ವಿಪಕ್ಷಗಳು ಅಡ್ಡಿಪಡಿಸುತ್ತಿವೆ ಮಾತ್ರವಲ್ಲದೆ ಸರ್ಕಾರದ ವಿರುದ್ಧ ಕೆಲ ವರ್ಗದ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಪ್ರಧಾನಿ ಯವರ ಗಾಂಧಿ ತತ್ವದ ಹೋರಾಟಕ್ಕೆ ಕೇಂದ್ರ ಸಚಿವರು ಮತ್ತು ಸಂಸದರು ಸಾಥ್ ನೀಡಿದ್ದು ಅವರವರ ಕ್ಷೇತ್ರಗಳಲ್ಲಿ ಉಪವಾಸ ನಿರತರಾಗಿದ್ದಾರೆ.
‘ಬಜೆಟ್ ಅಧಿವೇಶನದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದವರ ವಿರುದ್ಧ ಸತ್ಯಾಗ್ರಹ ನಡೆಸುತ್ತಿದ್ದೇವೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ತಮಿಳು ನಾಡು ಪ್ರವಾಸದಲ್ಲಿ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಅವರು ಚೆನ್ನೈ ಪ್ರವಾಸದಲ್ಲಿದ್ದು ವಿಮಾನ ನಿಲ್ದಾಣಕ್ಕಾಗಮಿಸಿದ ಪ್ರಧಾನಿ ಅವರಿಗೆ ಸಿಎಂ ಪಳನಿ ಸ್ವಾಮಿ, ಡಿಸಿಎಂ ಪನ್ನೀರ್ ಸೆಲ್ವಂ ಅವರು ಸ್ವಾಗತ ನೀಡಿದರು.
ವಿಮಾನ ನಿಲ್ದಾಣದ ಹೊರಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಕೆಲ ಸಂಘಟನೆಗಳ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ ಆಹಾರ ಸೇವಿಸದೆ ತಮ್ಮ ಎಂದಿನ ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಅನಾರೋಗ್ಯವಿರುವ ಸಂಸದರು ಉಪವಾಸ ಸತ್ಯಾಗ್ರಹ ನಡೆಸುತ್ತಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಹುಬ್ಬಳ್ಳಿಯಲ್ಲಿ ಶಾ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಹುಬ್ಬಳ್ಳಿ ಪ್ರವಾಸದಲ್ಲಿದ್ದು ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಯುವ ಸತ್ಯಾಗ್ರಹದಲ್ಲಿ ಅವರು ಪಾಲ್ಗೊಳ್ಳಲಿದ್ದು, ಸಂಸದ ಪ್ರಹ್ಲಾದ್ ಜೋಷಿ ಅವರು ಜೊತೆಯಲ್ಲಿದ್ದಾರೆ.
ಬೆಂಗಳೂರಿನಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಅನಂತ್ ಕುಮಾರ್ ಮತ್ತು ಸಂಸದ ಪಿ.ಸಿ.ಮೋಹನ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಜೊತೆಯಲ್ಲಿ ಕುಳಿತಿದ್ದಾರೆ. ರಾಜ್ಯದ ಇತರ ಬಿಜೆಪಿ ಸಂಸದರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಕಟ್ಟಪ್ಪಣೆ
ಯಾವುದೇ ಕಾರಣಕ್ಕೂ ಉಪವಾಸ ನಿರತ ಸಂಸದರು, ಸಚಿವರು ಆಹಾರ ಸೇವಿಸಲು ಮುಂದಾಗ ಬಾರದು ಎಂದು ಬಿಜೆಪಿ ಕಟ್ಟಪ್ಪಣೆ ಹೊರಡಿಸಿದೆ. ಕಳೆದ ಸೋಮವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಕಾಂಗ್ರೆಸ್ ಸಂಸದರು ಉಪವಾಸ ಸತ್ಯಾಗ್ರಹ ಪ್ರತಿಭಟನೆ ನಡೆಸಿದ್ದರು. ಉಪವಾಸ ನಿರತ ಕಾಂಗ್ರೆಸ್ ಸಂಸದರು ಆಹಾರ ಸೇವಿಸುತ್ತಿದ್ದ ಫೋಟೋಗಳು ವೈರಲ್ ಆಗಿತ್ತು. ಎಐಎಡಿಎಂಕೆ ಮುಖಂಡರು ಕಾವೇರಿ ನಿರ್ವಹಣಾ ಮಂಡಳಿ ರಚನೆಗಾಗಿ ಉಪವಾಸ ಸತ್ಯಾಗ್ರಹ ಪ್ರತಿಭಟನೆ ನಡೆಸಿದ ವೇಳೆ ಬಿರಿಯಾನಿ ತಿಂದ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.