PM Visit: ಫೆ.6 ರಂದು ಪ್ರಧಾನಿ ನರೇಂದ್ರ ಮೋದಿ ಗೋವಾಕ್ಕೆ ಭೇಟಿ
Team Udayavani, Feb 5, 2024, 5:48 PM IST
ಪಣಜಿ: ಪ್ರಧಾನಿ ನರೇಂದ್ರ ಮೋದಿ ಫೆ.6 ರ ಮಂಗಳವಾರ ಗೋವಾಕ್ಕೆ ಆಗಮಿಸಲಿದ್ದಾರೆ. ದಕ್ಷಿಣ ಗೋವಾದ ಮಡಗಾಂವ್ ಗೆ ಆಗಮಿಸಲಿರುವ ಅವರು ರಾಜ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮೋದಿ ಉದ್ಘಾಟಿಸಲಿದ್ದಾರೆ. ಬಳಿಕ ಮಡಗಾಂವ್ ನಲ್ಲಿ ಅವರು ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಸುಮಾರು 50,000 ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ಸಾಧ್ಯತೆಯನ್ನು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಮೋದಿ ಗೋವಾ ಭೇಟಿ ಹಿನ್ನೆಲೆ ನಾಯಿ, ಹಸುಗಳನ್ನು ರಸ್ತೆಗೆ ಬಿಡದಂತೆ ಸರ್ಕಾರ ಸೂಚಿಸಿದೆ. ಪ್ರಧಾನಮಂತ್ರಿ ಮೋದಿ ಸಂಚರಿಸುವ ಮಾರ್ಗದ ರಾಷ್ಟ್ರೀಯ ಹೆದ್ದಾರಿ 17ರ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಪಂಚಾಯಿತಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಬೀದಿ ನಾಯಿಗಳು, ಹಸುಗಳು ಹೆದ್ದಾರಿಯಲ್ಲಿ ಬರದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೆ, ಹೆದ್ದಾರಿಯುದ್ದಕ್ಕೂ ಕಸ ಎಸೆಯದಂತೆ ಸೂಚಿಸಲಾಗಿದೆ.
ಫೆಬ್ರವರಿ 6 ರಂದು ಈ ಸೂಚನೆಗಳನ್ನು ಅನುಸರಿಸಲು ಸಲಹೆ ನೀಡಲಾಗುತ್ತದೆ. ಪ್ರಧಾನಿ ಅವರ ಬೆಂಗಾವಲು ಪಡೆ ನುವೆಯಿಂದ ಬೆತುಲ್‍ಗೆ ಪ್ರಯಾಣಿಸಿ ಅದೇ ಮಾರ್ಗವಾಗಿ ಹಿಂದಿರುಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆ.6 ರ ಬೆಳಿಗ್ಗೆ 10. 30 ಕ್ಕೆ ಒಎನ್‍ಜಿಸಿ ಸರ್ವೈವಲ್ ಕೇಂದ್ರ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10. 45 ಕ್ಕೆ ಇಂಡಿಯಾ ಎನರ್ಜಿ ವೀಕ್ 2024 ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ 2. 45ಕ್ಕೆ ಡೆವಲಪ್ ಇಂಡಿಯಾ, ಡೆವಲಪ್ ಗೋವಾ 2047 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಗೋವಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ 1330 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಗೋವಾಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಮಂಗಳವಾರ ಮಡಗಾಂವ್‍ನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಳಿಕ ಮಡಗಾಂವ್‍ನ ಎಲ್ಲಾ ಕಾಲೇಜುಗಳನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಚ್ಚುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಆ ನಂತರ 12 ಗಂಟೆಯವರೆಗೆ ಮಡಗಾಂವ್‍ನಲ್ಲಿರುವ ಕಾಲೇಜುಗಳನ್ನು ಮುಚ್ಚಿ ಕೆಟಿಸಿ ಬಸ್ ನಿಲ್ದಾಣದಲ್ಲಿ ನಡೆಯುವ ಮೋದಿ ಸಭೆಗೆ ವಿದ್ಯಾರ್ಥಿಗಳನ್ನು ಕಳುಹಿಸಿಕೊಡಿ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳು ಸ್ಥಳದಲ್ಲಿ ಲಭ್ಯವಿರುವ ಆಹಾರವನ್ನು ಸಹ ಆನಂದಿಸಬಹುದು ಎಂದು ತಿಳಿಸಲಾಗಿದೆ.
ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮಡಗಾಂವ್ ನಲ್ಲಿ ಮೋದಿಯವರ ಸಭೆಗೆ ಕನಿಷ್ಠ 50 ಸಾವಿರ ಜನರು ಭಾಗವಹಿಸುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಮೋದಿಯವರ ಭೇಟಿ ರಾಜಕೀಯ ಅಲ್ಲ ಎಂದು ಸಾವಂತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.