Kargil ಹುತಾತ್ಮರಿಗೆ ಇಂದು ಪ್ರಧಾನಿ ಗೌರವ
Team Udayavani, Jul 26, 2024, 5:59 AM IST
ಶ್ರೀನಗರ: 1999ರಲ್ಲಿ ಜಮ್ಮು-ಕಾಶ್ಮೀರದಲ್ಲಿ ನಡೆದಿದ್ದ ಕಾರ್ಗಿಲ್ ಕಾರ್ಯಚರಣೆಯಲ್ಲಿ ವಿಜಯ ಸಾಧಿಸಿದಕ್ಕೆ ಶುಕ್ರವಾರ 25 ವರ್ಷ ಪೂರ್ತಿಯಾಗಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೆಟಿ ನೀಡಲಿದ್ದು, ಹುತಾತ್ಮರಾದ ವೀರಯೋಧರಿಗೆ ಗೌರವ ಸಲ್ಲಿಸಲಿದ್ದಾರೆ. ಇದೇ ವೇಳೆ ಲೇಹ್‌ಗೆ ಎಲ್ಲ ಋತುವಿನಲ್ಲೂ ಸಂಪರ್ಕ ಒದಗಿಸುವ 15,800 ಅಡಿ ಎತ್ತರದಲ್ಲಿ ನಿರ್ಮಾಣ ಗೊಳ್ಳಲಿರುವ 4.1 ಕಿ.ಮೀ ಉದ್ದದ ಅವಳಿ ಸುರಂಗವಾದ ಶಿನ್‌ಕುನ್ ಲಾ ಸುರಂಗ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಗುರುವಾರ ಕಾಶ್ಮೀರ ಕಣಿವೆಯ ಗಡಿ ನಿಯಂತ್ರಣ ರೇಖೆಗೆ ಭೇಟಿ ನೀಡಿದ್ದು, ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಬಳಿಕ ಕಾರ್ಗಿಲ್‌ಗೆ ತೆರಳಿದ ಅವರು ಅಲ್ಲಿಯೂ ಎಲ್ಲ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ.
160 ಕಿ.ಮೀ. ಓಡಿದ ಮಹಿಳಾ ಮಾಜಿ ಸೇನಾಧಿಕಾರಿ
ಮಾಜಿ ಲೆ| ಕ| ಬಾರ್ಷಾ ರೈ ಕಾರ್ಗಿಲ್ ವಿಜಯದ 25ನೇ ವಾರ್ಷಿಕೋತ್ಸವದ ಅಂಗವಾಗಿ 4 ದಿನಗಳಲ್ಲಿ ಶ್ರೀನಗರದಿಂದ ದ್ರಾಸ್‌ವರೆಗೆ 160 ಕಿ.ಮೀ. ಓಡಿದ್ದಾರೆ. ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ವೀರಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ನಾನು ಓಡಿದ್ದೇನೆ ಎಂದು ಹೇಳಿದ್ದಾರೆ. ಅವರ ಪತಿಯೂ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜು.19ರಂದು ಶ್ರೀನಗರದಿಂದ ಓಟ ಆರಂಭಿಸಿದ ರೈ ಜು.22ಕ್ಕೆ ದ್ರಾಸ್ ಸೆಕ್ಟರ್‌ನ ಕಾರ್ಗಿಲ್ ಯುದ್ಧ ಸ್ಮಾರಕದ ಬಳಿ ಕೊನೆಗೊಳಿಸಿದ್ದಾರೆ.
ವಾಯುಪಡೆಯಿಂದ ವಿಶೇಷ ಕಾರ್ಯಕ್ರಮ
ಕಾರ್ಗಿಲ್ ವಿಜಯೋತ್ಸವದ ಬೆಳ್ಳಿ ಮಹೋತ್ಸವದ ಅಂಗವಾಗಿ ಭಾರತೀಯ ವಾಯುಪಡೆಯ 29 “ಅಗ್ನಿವೀರವಾಯು’ ಮಹಿಳೆಯರು ಮೊದಲ ಮಹಿಳಾ ಡ್ರಿಲ್ ತಂಡ ಮಾಡಿ ಇಂಡಿಯಾ ಗೇಟ್ ಎದುರು ಪ್ರದರ್ಶನ ನೀಡಲಿದ್ದಾರೆ. ಜತೆಗೆ ಆಕಾಶ ಗಂಗಾ ತಂಡದಿಂದ ಏರ್ ಶೋ ನಡೆಯಲಿದ್ದು, ಜಾಗ್ವಾರ್, ಸುಖೋಯ್-30 ಹಾಗೂ ರಾಫೆಲ್ ಯುದ್ಧವಿಮಾನಗಳು ಪ್ರದರ್ಶನ ನೀಡಲಿವೆ. ಕಾರ್ಗಿಲ್ ಹುತಾತ್ಮರಿಗೆ ಗೌರವ ಸಲ್ಲಿಸಲು ವಾಯುಪಡೆಯು ಜು.12 ರಿಂದ 26ರ ವರೆಗೆ ಸರ್ಸಾವ ವಾಯುನೆಲೆಯಲ್ಲಿ “ಕಾರ್ಗಿಲ್ ವಿಜಯ ದಿವಸ್ ರಜತ ಜಯಂತಿ’ ಆಚರಿಸುತ್ತಿದೆ. ದೇಶದ ವಿವಿಧೆಡೆ ಕಾರ್ಗಿಲ್ ವಿಜಯೋತ್ಸವದ ಬೆಳ್ಳಿಹಬ್ಬಕ್ಕೆ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
MUST WATCH
ಹೊಸ ಸೇರ್ಪಡೆ
Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ
Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
ಹರಗಾಪುರ ಕೇಸ್ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ ನಿರೀಕ್ಷಣಾ ಜಾಮೀನು ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.