ರೂಪಾಯಿ ಮೌಲ್ಯ ಚೇತರಿಕೆ ಅವಶ್ಯ; ತೈಲ ಕಂಪನಿಗಳ CEO ಜತೆ ಮೋದಿ
Team Udayavani, Oct 15, 2018, 6:30 PM IST
ನವದೆಹಲಿ: ಸತತವಾಗಿ ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮದಿಂದ ಜಾಗತಿಕವಾಗಿ ಆರ್ಥಿಕ ಅಭಿವೃದ್ಧಿಗೆ ಅಡ್ಡಿ ಉಂಟಾಗಿದೆ. ಈ ನಿಟ್ಟಿನಲ್ಲಿ ಜಾಗತಿಕ ಇಂಧನ ಸರಬರಾಜುದಾರರು ತೈಲ ಖರೀದಿ ಪಾವತಿಯ ಷರತ್ತುಗಳನ್ನು ಪುನರ್ ಪರಿಶೀಲಿಸುವ ಮೂಲಕ ಕುಸಿಯುತ್ತಿರುವ ರೂಪಾಯಿ ಮೌಲ್ಯ ಚೇತರಿಕೆ ಕಾಣುವಂತೆ ಅನುಕೂಲ ಮಾಡಿಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ತೈಲ ಕಂಪನಿಗಳ ಸಿಇಒಗಳ ಜತೆ ನಡೆಸಿದ ಮಾತುಕತೆ ವೇಳೆ ಮನವಿ ಮಾಡಿಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಪಾವತಿ ಷರತ್ತನ್ನು ಪುನರ್ ಪರಿಶೀಲಿಸುವ ಮೂಲಕ ಸ್ಥಳೀಯ(ಭಾರತ) ಕರೆನ್ಸಿಗಳಿಗೆ ತಾತ್ಕಾಲಿಕ ಚೇತರಿಕೆ ಕಾಣಲು ಅವಕಾಶ ಮಾಡಿಕೊಡಬೇಕು ಎಂದು ಮೋದಿ ಮನವಿ ಮಾಡಿಕೊಂಡಿರುವುದಾಗಿ ವರದಿ ಹೇಳಿದೆ.
ಶೇ.80ರಷ್ಟು ತೈಲವನ್ನು ಭಾರತ ಆಮದು ಮಾಡಿಕೊಳ್ಳುತ್ತಿದ್ದು, ಕಚ್ಚಾ ತೈಲ ಬೆಲೆ ಏರಿಕೆಯಿಂದಾಗಿ ಬೆಲೆ ಗಗನಕ್ಕೇರುತ್ತಿದೆ. ಅಲ್ಲದೇ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದು ದೇಶದ ಅಭಿವೃದ್ಧಿಗೆ ತೊಡಕಾಗಿರುವುದಾಗಿ ವರದಿ ತಿಳಿಸಿದೆ.
ದಿನದಿಂದ ಗಗನಕ್ಕೇರುತ್ತಿರುವ ತೈಲ ಬೆಲೆ ಹಾಗೂ ಬದಲಾಗುತ್ತಿರುವ ಸನ್ನಿವೇಶಕ್ಕೆ ತಕ್ಕಂತೆ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಜಾಗತಿಕ ಹಾಗೂ ಭಾರತೀಯ ತೈಲ ಕಂಪನಿಗಳ ಸಿಇಒ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.