ಮಾಸ್ಕ್ ಗಳಿಗೆ ಹೆಚ್ಚಿದ ಬೇಡಿಕೆ :ಕೊರತೆ ನೀಗಿಸಲು ಮಹಾರಾಷ್ಟ್ರ ಕೈದಿಗಳಿಂದ ಮಾಸ್ಕ್ ತಯಾರಿ
Team Udayavani, Mar 18, 2020, 5:43 PM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಕೋವಿಡ್ 19 ಪ್ರಕೋಪದ ಸಮಯದಲ್ಲಿ ಮಾಸ್ಕ್ ಗಳ ಕೊರತೆಯನ್ನು ನೀಗಿಸುವ ಪ್ರಯತ್ನದಲ್ಲಿ ರಾಜ್ಯದ ಕಾರಾಗೃಹಗಳು ಈ ರಕ್ಷಣಾತ್ಮಕ ಸಾಧನಗಳನ್ನು ತಯಾರಿಸಲು ಮುಂದಾಗಿವೆ.
ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮಾಸ್ಕ್ ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಸಲುವಾಗಿ ಮಹಾರಾಷ್ಟ್ರದಾದ್ಯಂತ ಕೇಂದ್ರ ಕಾರಾಗೃಹಗಳಲ್ಲಿನ ಕೈದಿಗಳಿಗೆ ಅವುಗಳನ್ನು ತಯಾರಿಸಲು ಪ್ರಾರಂಭಿಸಿದ್ದಾರೆ ಎಂದು ಗೃಹ ಸಚಿವ ಅನಿಲ್ ದೇಶ್ಮುಖ್ ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಜೈಲು ಆಡಳಿತವು ಈ ಕಲ್ಪನೆಯನ್ನು ಅಂಗೀಕರಿಸಿದೆ ಮತ್ತು ಉತ್ಪಾದನೆಯನ್ನು ಪ್ರಾರಂಭಿಸಿದೆ ಎಂದು ಸಚಿವರು ಹೇಳಿದರು. ಈ ಮಾಸ್ಕ್ ಗಳಲ್ಲಿ ಕೆಲವು ಕೈದಿಗಳು ಮತ್ತು ಜೈಲು ಅಧಿಕಾರಿಗಳಿಗೆ ಬಳಕೆಯಾಗುತ್ತಿವೆ. ಅದೇ, ಉಳಿದವುಗಳನ್ನು ಸರಬರಾಜುದಾರರಿಗೆ ಮಾರಾಟ ಮಾಡಲಾಗುತ್ತಿದೆ. ಈ ಕೆಲಸಕ್ಕಾಗಿ ಕೈದಿಗಳಿಗೆ ಸಂಬಳ ನೀಡಲಾಗುತ್ತಿದೆ ಎಂದು ದೇಶ್ಮುಖ್ ತಿಳಿಸಿದ್ದಾರೆ.
ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಹೊಸ ಕೈದಿಗಳನ್ನು ಪರೀಕ್ಷಿಸುವಂತೆ ಗೃಹ ಸಚಿವರು ಜೈಲು ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ಈಗಾಗಲೇ ಜೈಲುಗಳಲ್ಲಿರುವ ಕೈದಿಗಳನ್ನು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.
ಇದಲ್ಲದೆ, ಜನದಟ್ಟಣೆಯನ್ನು ತಡೆಗಟ್ಟಲು ಕೆಲವು ಕೈದಿಗಳನ್ನು ಇತರ ಜೈಲುಗಳಿಗೆ ಸ್ಥಳಾಂತರಿಸಲಾಗುವುದು ಮತ್ತು ಮುಂಬಯಿಯ ಹೊಸ ಕೈದಿಗಳನ್ನು ತಲೋಜಾ ಜೈಲಿಗೆ ಸ್ಥಳಾಂತರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ. ಸದ್ಯಕ್ಕೆ ಕೈದಿಗಳನ್ನು ಭೇಟಿ ಮಾಡಲು ಕುಟುಂಬಗಳಿಗೆ ಅವಕಾಶ ನೀಡಲಾಗುವುದಿಲ್ಲ. ನ್ಯಾಯಾಲಯಗಳಿಗೂ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗಳನ್ನು ನಡೆಸಲು ಕೋರಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.