ಖಾಸಗಿತನ ಮೂಲಭೂತ ಹಕ್ಕಲ್ಲ: ಕೇಂದ್ರದ ವಾದ
Team Udayavani, Jul 28, 2017, 6:40 AM IST
ಹೊಸದಿಲ್ಲಿ: ಖಾಸಗಿತನಕ್ಕೆ ಮೂಲಭೂತ ಹಕ್ಕಿನ ಸ್ಥಾನಮಾನ ನೀಡುವುದು ಅಸಾಧ್ಯ ಎಂದು ಕೇಂದ್ರ ಸರಕಾರ ಸುಪ್ರೀಂಕೋರ್ಟ್ಗೆ ಹೇಳಿದೆ. ಖಾಸಗಿ ಹಕ್ಕಿನ ಕುರಿತಂತೆ ಸುಪ್ರೀಂಕೋರ್ಟ್ನ ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠದ ಮುಂದೆ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಈ ಅರಿಕೆ ಮಾಡಿಕೊಂಡಿದ್ದಾರೆ.
ಖಾಸಗಿ ಎಂಬುದು ವಿಶಾಲಾರ್ಥದಲ್ಲಿದ್ದು, ಇದಕ್ಕೆ ಮೂಲಭೂತ ಹಕ್ಕು ಸ್ಥಾನ ನೀಡುವುದು ಸಾಧ್ಯವಿಲ್ಲ ಎಂದರು. ಮುಖ್ಯ ನ್ಯಾ| ಜೆ.ಎಸ್. ಖೇಹರ್ ಅವರ ನೇತೃತ್ವದ ಪೀಠದ ಮುಂದೆ ವಾದ ಮಂಡಿಸಿದ ಅವರು, ಖಾಸಗಿತನ ಮೂಲಭೂತ ಹಕ್ಕು ಎಂದು ಭಾವಿಸಿಕೊಂಡರೂ, ಇದಕ್ಕೆ ಆ ಸ್ಥಾನ ನೀಡಲು ಆಗುವುದಿಲ್ಲ. ಇದಕ್ಕೆ ಬೇರೆ ಬೇರೆ ರೀತಿಯ ಅರ್ಥಗಳಿವೆ. ಪ್ರತಿಯೊಂದು ವಿಚಾರವನ್ನೂ ಮೂಲಭೂತ ಹಕ್ಕನ್ನಾಗಿ ಪರಿಗಣಿಸಲು ಆಗಲ್ಲ ಎಂದರು. ಅಲ್ಲದೆ ಮಾಹಿತಿಯುಕ್ತ ಖಾಸಗಿಯನ್ನು ಹೇಗೆ ಖಾಸಗಿ ಹಕ್ಕಿನೊಳಗೆ ಸೇರಿಸಲಾಗುತ್ತದೆ ಎಂದು ಪ್ರಶ್ನಿಸಿದ ಅವರು, ಹೀಗಾಗಿಯೇ ಮೂಲಭೂತ ಹಕ್ಕಿನ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.