ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟು ‘ಮಿಷನ್ ಯುಪಿ’ಗೆ ಪ್ರಿಯಾಂಕ ಟೀಮ್ ಸಿದ್ಧತೆ

Team Udayavani, Jul 12, 2021, 7:30 PM IST

Priyanka Gandhi holds strategy meet with Congress leaders; to kickstart ‘Mission UP’ this week

ಲಕ್ನೋ : ರಾಷ್ಟ್ರೀಯ ಕಾಂಗ್ರೆಸ್  ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಪ್ರದೇಶದ ಕಾಂಗ್ರೆಸ್ ಘಟಕದ ಉಸ್ತುವಾರಿ ಪ್ರಿಯಾಂಕ ಗಾಂಧಿ ವಾದ್ರಾ ಪಕ್ಷ ಪ್ರಮುಖ ನಾಯಕರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಬೆಲೆ ಏರಿಕೆ, ಕೋವಿಡ್ 19 ನಿರ್ವಹಣೆ ಹಾಗೂ ಇತ್ತೀಚೆಗೆ ನಡೆದ ಪಂಚಾಯತ್ ಚುನಾವಣೆಗಳು ಸಭೆಯ ಮುಖ್ಯ ವಿಷಯವಾಗಿದ್ದವು ಎಂದು ವರದಿಗಳು ತಿಳಿಸಿವೆ.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕ, ದೇಶದಲ್ಲಿ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ, ಅಡುಗೆ ಎಣ್ಣೆಯನ್ನೊಳಗೊಂಡು ತರಕಾರಿ, ಜನರಿಗೆ ಅಗತ್ಯವಾಗಿ ಬೇಕಾದ ಎಲ್ಲಾ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಲಾಗಿದೆ. ಈ ಬೆಲೆ ಏರಿಕೆಯ ಕಾರಣದಿಂದಾಗಿ ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ರೈತರ ಆದಾಯ ಕಡಿಮೆಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಕೋವಿಡ್:ರಾಜ್ಯದಲ್ಲಿಂದು 3204 ಸೋಂಕಿತರು ಗುಣಮುಖ;1386 ಹೊಸ ಪ್ರಕರಣ ಪತ್ತೆ

ಇತ್ತೀಚೆಗೆ ನಡೆದ ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರದ ಘಟನೆಗಳನ್ನು ಉಲ್ಲೇಖಿಸಿದ ಅವರು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಕಲ್ಲು ತೂರಾಟ ಮತ್ತು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಭೆಯಲ್ಲಿದ್ದ ಪಕ್ಷದ ಪ್ರಮುಖ ನಾಯಕರು ಆಡಳಿತ ಪಕ್ಷವನ್ನು ಖಂಡಿಸಿದರು, ಸರ್ಕಾರ ಎಲ್ಲಾಆಯಾಮಗಳಲ್ಲಿ ವಿಫಲವಾಗಿದೆ. ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆಗಳು, ನಿರುದ್ಯೋಗ ಸಮಸ್ಯೆ ಮತ್ತು ರಾಜ್ಯದಲ್ಲಿನ “ಜಂಗಲ್ ರಾಜ್” ಮುಂತಾದ ವಿಷಯಗಳ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಹೋರಾಡಲು ಅವರು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ವಿಧಾನಸಭಾ ಚುನಾವಣೆ ಮೇಲೆ ‘ಮಿಷನ್ ಯುಪಿ’

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ವಾರ, 2022 ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟು ‘ಮಿಷನ್ ಯುಪಿ’  ಆರಂಭಿಸಲಿದ್ದು. ನಾಲ್ಕು ದಿನಗಳ ರಾಜ್ಯ ಪ್ರವಾಸದಲ್ಲಿ ತೊಡಗಿಕೊಳ್ಳುತ್ತಿರುವ ಅವರು, ಜುಲೈ 14 ರಂದು ರಾಜ್ಯ ರಾಜಧಾನಿ ಲಕ್ನೋಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆ ಇಂಡಿಯಾ ಟುಡೆ ವರದಿ ಮಾಡಿದೆ.

ನಾಲ್ಕು ದಿನದ ರಾಜ್ಯ ಪ್ರವಾಸದಲ್ಲಿ ಪ್ರಿಯಾಂಕ ಗಾಂಧಿ, ಪಕ್ಷದ ಕಾರ್ಯ ಕರ್ತರನ್ನು ಭೇಟಿಯಾಗಲಿದ್ದು, ಬರುವ ವರ್ಷದ ಚುನಾವಣಾ ಪೂರ್ವ ಸಭೆಗಳನ್ನು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗೂ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಕೋವಿಡ್ 19 ಸೋಂಕಿನ ನಿರ್ವಹಣೆಯ ಬಗ್ಗೆ ಸುದ್ದಿಗೊಷ್ಟಿಗಳನ್ನು ಮಾಡಲಿದ್ದಾರೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.

ಇನ್ನು, ಲಕ್ನೋದಲ್ಲಿ ತಂಗಿದ್ದಾಗ ರೈತ ಸಂಘಟನೆಗಳನ್ನು ಕೂಡ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ಉತ್ತರ ಕರ್ನಾಟಕದವರು ಸಿಎಂ ಆಗುತ್ತಾರೆ ಎಂಬ ಕತ್ತಿ ಹೇಳಿಕೆಯನ್ನು ಸಮರ್ಥಿಸಿದ ಸಚಿವ ಜೋಶಿ

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.